This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

international News

ನೆಲಕ್ಕೆ ಅಪ್ಪಳಿಸಿದ ವಿಮಾನ  : 32 ಕ್ಕೂ ಅಧಿಕ ಸಾವು  Plane crashed into the ground : More than 32 dead


 

ಕಠ್ಮಂಡು:
ನೇಪಾಳದ ಪೋಖರಾ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದ ಪ್ರಯಾಣಿಕ ವಿಮಾನವೊಂದು ಭಾನುವಾರ ಪತನಗೊಂಡಿದ್ದು, ಕನಿಷ್ಠ 32 ಮಂದಿ ಸಾವಿಗೀಡಾಗಿದ್ದಾರೆ.
ವಿಮಾನದಲ್ಲಿ ಒಟ್ಟು 15 ವಿದೇಶಿ ಪ್ರಯಾಣಿಕರು ಸೇರಿದಂತೆ 68 ಮಂದಿ ಮತ್ತು ನಾಲ್ವರು ಸಿಬ್ಬಂದಿ ಇದ್ದರು. ಇವರಲ್ಲಿ ಐವರು ಭಾರತೀಯರು ಸೇರಿದ್ದಾರೆ.

ಯೇತಿ ಏರ್‌ಲೈನ್ಸ್‌ 9N-ANC ATR-72 ವಿಮಾನವು ಕಠ್ಮಂಡು ವಿಮಾನ ನಿಲ್ದಾಣದಿಂದ ಬೆಳಿಗ್ಗೆ 10.33ಕ್ಕೆ ಹೊರಟಿತ್ತು. ಪೋಖರಾದಲ್ಲಿ ಲ್ಯಾಂಡಿಂಗ್‌ ವೇಳೆ ಹಳೆಯ ವಿಮಾನ ನಿಲ್ದಾಣ ಮತ್ತು ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಡುವಿನ ಸೇತಿ ನದಿ ದಂಡೆ ಮೇಲೆ ವಿಮಾನ ಪತನಗೊಂಡಿದೆ.

ಇದು ಹಳೆಯ ವಿಮಾನ ನಿಲ್ದಾಣ ಮತ್ತು ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಡುವಿನ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ತಿ ವಿಮಾನ ಬೆಂಕಿ ಹೊತ್ತಿ ಉರಿಯುತ್ತಿರುವ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಸಕಿ ಜಿಲ್ಲಾಧಿಕಾರಿ ಟೆಕ್‌ ಬಹಾದ್ದೂರ್‌ ಸ್ಥಳೀಯ ಮಾಧ್ಯಮಗಳಿಗೆ ಹೇಳಿದ್ದಾರೆ.


Jana Jeevala
the authorJana Jeevala

Leave a Reply