ಬೆಳಗಾವಿ: ಚಿಂಚಲಿ ಬಳಿ ಕೃಷ್ಣಾ ನದಿಗೆ ಹಾರಿ ತಾಯಿ, ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಶಾರದಾ ಡಾಲೆ(38), ಅನುಷಾ (10), ಅಮೃತಾ (14), ಆದರ್ಶ (8) ಮೃತಪಟ್ಟವರು. ಶಾರದಾ ಅವರ ಪತಿ ಪ್ರತಿದಿನ ಮನೆಗೆ ಬಂದು ಗಲಾಟೆ ಮಾಡುತ್ತಿದ್ದ ಕಾರಣಕ್ಕೆ ಮೂರು ಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂವರು ಪುಟ್ಟ ಮಕ್ಕಳೊಂದಿಗೆ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ತಾಯಿ
