ಬೆಳಗಾವಿ : ಬೆಳವಡಿ ಗ್ರಾಮದ ಬಳಿ ದ್ವಿಚಕ್ರ ವಾಹನ ಸವಾರ ಮೈಲುಗಲ್ಲಿಗೆ ಡಿಕ್ಕಿ ಹೊಡೆದು ಮಂಗಳವಾರ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಹುಬ್ಬಳ್ಳಿಯ ವೈಕುಂಠ ಉಪೇಂದ್ರ ಚನ್ನದಾಸರ (25 )ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾನೆ.
ವಾಹನ ಚಲಾಯಿಸುವಾಗ ಹೆಲ್ಮೆಟ್ ಇದ್ದರು ಧರಿಸದೆ ಇದ್ದ ಪರಿಣಾಮ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದು ದೊಡವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.