ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆಪಾದಿಸಲಾಗಿದ್ದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಪರಾಧ ಸಾಬೀತುಪಡಿಸುವ ಯಾವುದೇ ಅಂಶಗಳಿಲ್ಲ’ ಎಂಬ ಷರಾ ಬರೆದಿರುವ ‘ಬಿ’ ಅಂತಿಮ ವರದಿಯನ್ನು ಲೋಕಾಯುಕ್ತ ಪೊಲೀಸರು ಜನಪ್ರತಿನಿಧಿಗಳ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಸ್ನೇಹಮಯಿ ಕೃಷ್ಣ ನೀಡಿದ್ದ ಖಾಸಗಿ ದೂರನ್ನು ಆಧರಿಸಿ ತನಿಖೆ ನಡೆಸಿದ್ದ ಮೈಸೂರು ಲೋಕಾಯುಕ್ತ ಪೊಲೀಸರು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯಕ್ಕೆ ಗುರುವಾರ ಈ ‘ಬಿ’ ಅಂತಿಮ ವರದಿಯನ್ನು ಸಲ್ಲಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಹಾಗೂ ವಿವಾದಿತ ಜಮೀನಿನ ಮೂಲ ಮಾಲೀಕ ದೇವರಾಜು ಅವರಿಗೆ ನಿರ್ದಿಷ್ಟ ಆರೋಪಗಳಿಂದ ಮುಕ್ತಿ ನೀಡಲಾಗಿದೆ.
ಆರೋಪಕ್ಕೆ ಸಂಬಂಧಿಸಿದಂತೆ 50ಕ್ಕೂ ಹೆಚ್ಚು ಸಾಕ್ಷಿಗಳ ವಿಚಾರಣೆ ನಡೆಸಿ ಸಿದ್ಧಪಡಿಸಲಾಗಿರುವ ಒಟ್ಟು 27 ಸಂಪುಟಗಳ ವರದಿಯು ಎಲ್ಲ ದಸ್ತಾವೇಜುಗಳೂ ಸೇರಿದಂತೆ ಒಟ್ಟು 11 ಸಾವಿರ ಪುಟಗಳನ್ನು ಒಳಗೊಂಡಿದೆ. ಈ ಕಂತೆಯನ್ನು ತನಿಖಾಧಿಕಾರಿ ಹಾಗೂ ಮೈಸೂರು ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ಅವರು ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರಿಗೆ ಸಲ್ಲಿಸಿದರು.