ಬೆಳಗಾವಿ : ಗೆಳೆಯರೊಂದಿಗೆ ಪಾರ್ಟಿಗೆ ಹೋಗಿದ್ದ ವ್ಯಕ್ತಿಯೊರ್ವ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಮೃತನ ಸಂಬಂಧಿಕರು ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಸಾವಿನ ಬಗ್ಗೆ ತನಿಖೆ ನಡೆಸಲು ಒತ್ತಾಯಿಸಿದ್ದಾರೆ.
ಬೆಳಗಾವಿಯ ಶಿವಾಜಿ ನಗರದ ನಿವಾಸಿ ಬಶೀರ್(55) ನಿಗೂಢವಾಗಿ ಮೃತಪಟ್ಟಿರುವ ವ್ಯಕ್ತಿಯಾಗಿದ್ದಾರೆ.
ಸುಳಗಾ ಬಳಿ ಪಾರ್ಟಿ ಮಾಡಲು ಸ್ನೇಹಿತರ ಜೊತೆಗೆ ತೆರಳಿದ್ದ ಬಶೀರ್ ಅಹ್ಮದ್ ವೃತ್ತಿಯಲ್ಲಿ ಕೆ ಎಸ್ ಆರ್ ಟಿ ಸಿ ಚಾಲಕನಾಗಿದ್ದರು.
ಜಿಲ್ಲಾಸ್ಪತ್ರೆಯ ಬಳಿ ಆಟೋದಲ್ಲಿಯೇ ಶವ ಬಿಟ್ಟು ಹೋದ ಹಿನ್ನೆಲೆಯಲ್ಲಿ ಸಂಶಯ ವ್ಯಕ್ತವಾಗಿದೆ. ಮೃತ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ ಎನ್ನುವ ಆರೋಪವು ಸಂಬಂಧಿಕರಿಂದ ಕೇಳಿ ಬಂದಿದ್ದು, ಸಾವಿನ ಬಗ್ಗೆ ತನಿಖೆ ನಡೆಸುವಂತೆ ಸಂಬಂಧಿಕರು ಒತ್ತಾಯಿಸಿದ್ದಾರೆ.
ಬೆಳಗಾವಿ ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಮುಂಭಾಗದಲ್ಲಿ ಅಟೋ ರಿಕ್ಷಾದಲ್ಲಿ ಶವ ಬಿಟ್ಟು ಹೋಗಿದ್ದಾರೆ ಎನ್ನು ಮಾತು ಸಂಬಂಧಿಕರಿಂದ ವ್ಯಕ್ತವಾಗಿದೆ.
ಆಟೋದಲ್ಲಿನ ನಿಗೂಢ ಶವ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದ ಜಮೀನೊಂದರಲ್ಲಿ ಗೆಳೆಯರು ಸೇರಿ ಪಾರ್ಟಿ ಮಾಡಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಕಾಕತಿ ಮತ್ತು ಎಪಿಎಂಸಿ ಪೊಲೀಸರು ಭೇಟಿ,ಪರಿಶೀಲನೆ ನಡೆಸಿದ್ದು, ಬಿಮ್ಸ್ ಆಸ್ಪತ್ರೆಯ ಮುಂದೆ ಸಂಬಂಧಿಕರು ಜಮಾವಣೆ ಆಗಿದ್ದರು.