ಬೆಳಗಾವಿ :
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 28ರಂದು ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಧ್ಯಾಹ್ನ 1:25ಕ್ಕೆ ಬೆಳಗಾವಿಗೆ ಆಗಮಿಸುವರು. ಮಧ್ಯಾಹ್ನ 1:45 ಕ್ಕೆ ಸುವರ್ಣ ವಿಧಾನಸೌಧದಲ್ಲಿ ವೀರ ರಾಣಿ ಕಿತ್ತೂರು ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಜಗಜ್ಯೋತಿ ಬಸವೇಶ್ವರ ಹಾಗೂ ಡಾ. ಅಂಬೇಡ್ಕರ್ ಪುತ್ಥಳಿ ಅನಾವರಣಗೊಳಿಸುವರು. ಮಧ್ಯಾಹ್ನ 3 ಗಂಟೆಗೆ ಗೋಕಾಕ ಎನ್ಎಸ್ ಎಫ್ ಹೆಲಿಪ್ಯಾಡಿಗೆ ಆಗಮಿಸುವರು. ನಂತರ ಗೋಕಾಕ ವಾಲ್ಮೀಕಿ ಮೈದಾನದಲ್ಲಿ ಗೋಕಾಕ, ಅರಬಾವಿ ಮತ್ತು ಅಥಣಿ ವಿಧಾನಸಭಾ ಮತಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಫಲಾನುಭವಿಗಳ ಸಮ್ಮೇಳನ ಉದ್ದೇಶಿಸಿ ಮಾತನಾಡಲಿದ್ದಾರೆ.
ಸಂಜೆ 5:00 ಗೆ ಸವದತ್ತಿ ವಿಧಾನಸಭಾ ಮತಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ ಸಮ್ಮೇಳನದಲ್ಲಿ ಭಾಗವಹಿಸಿ ಹುಬ್ಬಳ್ಳಿಗೆ ತೆರಳುವರು.