ಹುಬ್ಬಳ್ಳಿ :
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ಡಾ ಎರಡು ದಿನಗಳ ಹುಬ್ಬಳ್ಳಿ ಪ್ರವಾಸದಲ್ಲಿದ್ದು ಶ್ರೀ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಸಿದ್ದಾರೂಢ ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಇತರ ನಾಯಕರು ಸಾಥ್ ನೀಡಿದ್ದಾರೆ.
ನಡ್ಡಾ ಅವರು ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿ ಸಿದ್ಧಾರೂಢರು ಮತ್ತು ಗುರುನಾಥಾರೂಢರ ದರ್ಶನ ಪಡೆದರು.
ನಂತರ ಮೂರು ಸಾವಿರ ಮಠಕ್ಕೆ ಭೇಟಿ ನೀಡಿ ಗುರುಸಿದ್ಧೇಶ್ವರರ ಕರ್ತೃ ಗದ್ದುಗೆಗೆ ನಮಿಸಿದರು. ಮಠದ ಪೀಠಾಧಿಪತಿ ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ಸ್ವಾಮೀಜಿ ಅವರೊಂದಿಗೆ ನಡ್ಡಾ ಅವರು ಐದು ನಿಮಿಷ ಮಾತುಕತೆ ನಡೆಸಿದರು. ಹುಬ್ಬಳ್ಳಿ-ಧಾರವಾಡ ಪಶ್ಷಿಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರವಿಂದ ಬೆಲ್ಲದ, ಬಿಜೆಪಿ ಧಾರವಾಡದ ವಿಭಾಗದ ಪ್ರಭಾರಿ ಲಿಂಗರಾಜ ಪಾಟೀಲ, ಮುಖಂಡ ಪ್ರಭು ನವಲಗುಂದಮಠ ಇದ್ದರು.