ಬೆಳಗಾವಿ : ನಗರದ ನಾಯ್ಕರ್ ಶಿಕ್ಷಣ ಸಂಸ್ಥೆಯ ರವೀಂದ್ರನಾಥ್ ಟ್ಯಾಗೋರ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ದೆಹಲಿಯಲ್ಲಿ ನಡೆದ ಈಜು ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾಳೆ.
ಸುನಿಧಿ ಹಲ್ಕರೆ ದೆಹಲಿಯಲ್ಲಿ ನಡೆದ 69ನೇ ನ್ಯಾಷನಲ್ ಸ್ಕೂಲ್ ಗೇಮ್ಸ್ ನಲ್ಲಿ ಎರಡು ನೂರು ಮೀಟರ್ ಬ್ಯಾಕ್ ಸ್ಟ್ರೋಕ್ ನಲ್ಲಿ ಬಂಗಾರದ ಪದಕದೊಂದಿಗೆ ಪ್ರಥಮ ಸ್ಥಾನ ಹಾಗೂ 100 ಮೀಟರ್ ಬ್ಯಾಕ್ ಸ್ಟ್ರೋಕ್ನಲ್ಲಿ ದ್ವಿತೀಯ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ಹೆಚ್ಚಿಸಿದ್ದಾಳೆ.
ವಿದ್ಯಾರ್ಥಿನಿಯ ಸಾಧನೆಗೆ ಪ್ರಾಂಶುಪಾಲ ಡಾ.ಸಿ.ಎನ್. ನಾಯ್ಕರ್ ಹಾಗೂ ನಾಯ್ಕರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಶ್ವೇತಾ ಸಿ ನಾಯ್ಕರ್ ಹಾಗೂ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.


