ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಕೋಟ್ಯಂತರ ಫಾಲೋವರ್ಗಳನ್ನು ಇದ್ದಾರೆ.
ಎಕ್ಸ್ (ಮೊದಲು Twitter) ಸಾಮಾಜಿಕ ಜಾಲತಾಣದಲ್ಲಿ ನರೇಂದ್ರ ಮೋದಿ ಅವರ ಫಾಲೋವರ್ಗಳ ಸಂಖ್ಯೆ 100 ದಶಲಕ್ಷ ದಾಟಿದ್ದು (10 ಕೋಟಿ), ಜಗತ್ತಿನಲ್ಲೇ ಎಕ್ಸ್ನಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ನಾಯಕ ಎನಿಸಿಕೊಂಡಿದ್ದಾರೆ.
ಮೋದಿ ನಂತರದ ಸ್ಥಾನದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ 3.81 ಕೋಟಿ, ದುಬೈನ ಶೇಖ್ ಮೊಹಮ್ಮದ್ 1.12 ಕೋಟಿ, ಪೋಪ್ ಫ್ರಾನ್ಸಿಸ್ ಅವರು 1.85 ಕೋಟಿ ಫಾಲೋವರ್ಗಳನ್ನು ಹೊಂದಿದ್ದಾರೆ. ಜಗತ್ತಿನ ಯಾವುದೇ ದೇಶದ ಪ್ರಧಾನಿ ಅಥವಾ ಅಧ್ಯಕ್ಷರು ಜಾಗತಿಕವಾಗಿ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಫಾಲೋವರ್ಗಳಿಗಿಂತ ಮೋದಿ ಹೆಚ್ಚು ಫಾಲೋವರ್ಗಳನ್ನು ಹೊಂದಿದ್ದಾರೆ. 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿಯಾಗುವುದಕ್ಕಿಂತ ಮೊದಲು ಸಾಮಾಜಿಕ ಜಾಲತಾಣವನ್ನು ಅತ್ಯಂತ ಸಮರ್ಥವಾಗಿ ಬಳಸಿಕೊಂಡಿದ್ದರು. ಇದರಿಂದಾಗಿ ಅವರು ಪ್ರತಿನಿಧಿಸಿರುವ ಬಿಜೆಪಿ ಜಗತ್ತಿನಲ್ಲೇ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಜೊತೆಗೆ ತಾವು ಸಹ ಅತಿಹೆಚ್ಚಿನ ಫಾಲೋವರ್ಸ್ ಗಳನ್ನು ಹೊಂದುವ ಮೂಲಕ ಅವರು ಇದೀಗ ಜಾಗತಿಕವಾಗಿ ಪಾರಮ್ಯ ಸಾಧಿಸಿದ್ದಾರೆ.