ಬೆಳಗಾವಿ:
ಇಲ್ಲಿನ ಕೆಎಲ್ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
1995 ರ ನವೆಂಬರ್ 9 ರಂದು ಜಾರಿಗೆ ಬಂದ ಕಾನೂನು ಸೇವಾ ಪ್ರಾಧಿಕಾರಗಳ ಕಾಯಿದೆ, 1987 ರ ಪ್ರಾರಂಭದ ಸ್ಮರಣಾರ್ಥವಾಗಿ ಪ್ರತಿ ವರ್ಷ 9 ನೇ ನವೆಂಬರ್ ರಂದು ರಾಷ್ಟ್ರೀಯ ಕಾನೂನು ಸೇವೆಗಳ ದಿನವನ್ನು ಆಚರಿಸಲಾಗುತ್ತದೆ.
ಕಾಲೇಜಿನ ಪ್ರಾಚಾರ್ಯ ಡಾ.ಎ.ಎಚ್.ಹವಾಲ್ದಾರ್ ಮುಖ್ಯ ಅತಿಥಿಯಾಗಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸಂವಿಧಾನದ ಹಕ್ಕುಗಳು ಮತ್ತು ಕಾನೂನು ಸೇವಾ ಪ್ರಾಧಿಕಾರಗಳ ಕಾಯಿದೆಯ ಕುರಿತು ಮಾಹಿತಿ ನೀಡಿದರು. 2023 ರ ರಾಷ್ಟ್ರೀಯ ಕಾನೂನು ಸೇವೆಗಳ ದಿನದ ಮಹತ್ವ ಪ್ರತಿಯೊಬ್ಬರು ತಿಳಿಯಬೇಕು ಎಂದು ತಿಳಿಸಿದರು. ಕಾಲೇಜಿನ ಕಾನೂನು ನೆರವು ಕೋಶದ ಸಂಯೋಜಕ ಪ್ರೊ.ಚೇತನಕುಮಾರ್ ಟಿ.ಎಂ ಕಾನೂನು ನೆರವು ಕೋಶದ ಚಟುವಟಿಕೆಗಳು ಮತ್ತು ದಾಖಲಾತಿ ಪ್ರಕ್ರಿಯೆ ಕುರಿತು ಮಾತನಾಡಿದರು. ಕಾಲೇಜಿನ ಕಾನೂನು ನೆರವು ಕೋಶದ ವತಿಯಿಂದ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಎಲ್ಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.