ಬೆಳಗಾವಿ :
ಇಲ್ಲಿಯ ರಾಮಕೃಷ್ಣ ಮಿಷನ್ ಆಶ್ರಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಮಕೃಷ್ಣ ಮಿಷನ್ ಆಶ್ರಮದ ವತಿಯಿಂದ ಜಿಲ್ಲಾ ಮಟ್ಟದ ಯುವ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ರಾಮಕೃಷ್ಣ ಮಿಷನ್ ಆಶ್ರಮದ ಕಾರ್ಯದರ್ಶಿ ಸ್ವಾಮಿ ಆತ್ಮಪ್ರಾಣಾನಂದಜಿ ಮಹಾರಾಜ ಅವರು
ಸಾನ್ನಿಧ್ಯ ವಹಿಸಿದ್ದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕ ಬಿ. ಶ್ರೀನಿವಾಸ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮ ಉದ್ಘಾಟಿಸಿ “ಆದರ್ಶ ಯುವಕರ ಲಕ್ಷಣಗಳು” ಎಂಬ ವಿಷಯದ ಬಗ್ಗೆ ಸ್ವಾಮಿ ನವದುರ್ಗಾನಂದಜಿ ಮಹಾರಾಜರು ಆಶೀರ್ವಚನ ನೀಡಿದರು.
ಸ್ವಾಮಿ ಮೋಕ್ಷಾತ್ಮನಂದಜಿ ಮಹಾರಾಜರು ಸ್ವಾಮಿ “ವಿವೇಕಾನಂದರು-ಯುವಕರ ಭವಿಷ್ಯ ನಿರ್ಮಾಣ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.
ರಾಷ್ಟ್ರ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತರು ಪಾಲ್ಗೊಂಡಿದ್ದರು.
ಕಾರ್ಯಕ್ರಮಕ್ಕೆ ಬೆಳಗಾವಿಯ ವಿವಿಧ ಭಾಗಗಳಿಂದ 800 ಕ್ಕೂ ಹೆಚ್ಚು ಯುವ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಿದರು.