ದೆಹಲಿ: ಭಾರತೀಯ ಯುವ ಕಾಂಗ್ರೆಸ್ (ಐವೈಸಿ)ನೂತನ ಅಧ್ಯಕ್ಷರನ್ನಾಗಿ ಉದಯ ಭಾನು ಛಿಬ್ ಅವರನ್ನು ನೇಮಕ ಮಾಡಲಾಗಿದೆ. ಅವರು ಈ ಮೊದಲು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಜಮ್ಮು-ಕಾಶ್ಮೀರ ಯುವ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರೂ ಆಗಿದ್ದರು. ಈ ಮೊದಲು ಯುವ ಕಾಂಗ್ರೆಸ್ ಘಟಕಕ್ಕೆ ಕರ್ನಾಟಕದ ಬಿ.ವಿ. ಶ್ರೀನಿವಾಸ್ ಅಧ್ಯಕ್ಷರಾಗಿದ್ದರು.
ಕಾಂಗ್ರೆಸ್ ಯುವ ಘಟಕಕ್ಕೆ ನೂತನ ಅಧ್ಯಕ್ಷ
