Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಬೆಂಗಳೂರಿನಲ್ಲಿ ಶೀಘ್ರವೇ ಉನ್ನತ ಮಟ್ಟದ ಸಭೆ: ಸಿಎಂ ಭರವಸೆ : ಪಾಲಿಕೆ ಸೂಪರ್ ಸೀಡ್ ಗೆ ಆಗ್ರಹ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಬೆಂಗಳೂರಿನಲ್ಲಿ ಶೀಘ್ರವೇ ಉನ್ನತ ಮಟ್ಟದ ಸಭೆ: ಸಿಎಂ ಭರವಸೆ : ಪಾಲಿಕೆ ಸೂಪರ್ ಸೀಡ್ ಗೆ ಆಗ್ರಹ

 ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಮಹಾರಾಷ್ಟ್ರದಲ್ಲಿ ನಡೆದಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶೀಘ್ರವೇ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ಕರೆಯಲಾಗುವುದೆಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಗುರುವಾರ ಸಂಜೆ ಬೆಳಗಾವಿಯ ಸಮಾನ ಮನಸ್ಕ 22 ಕನ್ನಡ ಪರ ಸಂಘಟನೆಗಳ

ಮುಖಂಡರಿಗೆ ಭರವಸೆ ನೀಡಿದರು.
         
ಸುವರ್ಣ ಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ 40 ಕ್ಕೂ ಅಧಿಕ ಮುಖಂಡರು ಬುಧವಾರ ಮುಂಬಯಿಯಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಉನ್ನತಾಧಿಕಾರ ಸಮಿತಿಯ ಸಭೆಯು ಅತ್ಯಂತ ಮಹತ್ವದ ಬೆಳವಣಿಗೆಯಾಗಿದ್ದು ಇದನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಬೇಕೆಂದು ಆಗ್ರಹಿಸಿದರು.
        
ಹಿರಿಯ ಮುತ್ಸದ್ದಿ ರಾಜಕಾರಣಿ ಎಚ್.ಕೆ.ಪಾಟೀಲ ಅವರು ಗಡಿ ವಿವಾದದ ಬಗ್ಗೆ ಆಳವಾದ ಅಧ್ಯಯನ ,ಅಭ್ಯಾಸ ಮಾಡಿದವರಾಗಿದ್ದಾರೆ.
ಸುಪ್ರೀಂ ಕೋರ್ಟಿನ ಹಿರಿಯ ನ್ಯಾಯವಾದಿ ಮೋಹನ ಕಾತರಕಿ ಅವರು ಗಡಿವಿವಾದ ಸಂಬಂಧ ರಾಜ್ಯ ಸರಕಾರಕ್ಕೆ ಗೌರವ ಸಲಹೆಗಾರರಾಗಿ ಸೇವೆ ಸಲ್ಲಿಸಲು ಸಿದ್ಧರಿದ್ದಾರೆ. ಬೆಳಗಾವಿಯಲ್ಲಿ ಕಳೆದ 44 ವರ್ಷಗಳಿಂದ ನಾಲ್ಕು ದಶಕಗಳಿಂದ ಹೋರಾಟದಲ್ಲಿ ತೊಡಗಿರುವ ಅಶೋಕ ಚಂದರಗಿ ಅವರು ಗಡಿ ವಿವಾದ ಸಂಬಂಧ ಸಮಗ್ರವಾಗಿ ತಿಳಿದುಕೊಂಡಿದ್ದಾರೆ. ಈ ಮೂವರನ್ನು ವಿಶ್ವಾಸದಲ್ಲಿ ತೆಗೆದುಕೊಂಡು ರಾಜ್ಯ ಸರಕಾರ ಮುಂದಿನ ಕ್ರಮಗಳನ್ನು ಕೈಕೊಳ್ಳಬೇಕೆಂದು ಕನ್ನಡ ಮುಖಂಡರು ಒತ್ತಾಯಿಸಿದರು.
        
ಕರ್ನಾಟಕ ಪರವಾದ ಗೊತ್ತುವಳಿ ಸ್ವೀಕರಿಸಲು ನಿರಾಕರಿಸುತ್ತಿರುವ ಬೆಳಗಾವಿ ಪಾಲಿಕೆಯನ್ನು ಸೂಪರ್ ಸೀಡ್ ಮಾಡಬೇಕೆಂದು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಆಗ್ರಹಿಸಲಾಗಿದೆ.
          
ಎಚ್.ಕೆ.ಪಾಟೀಲ ಅವರು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಗಡಿವಿವಾದ ಬಗ್ಗೆ ವಿವರಿಸಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕರೆ: ಪ್ರವೀಣ ಗುಡಿಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮ