Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನ

ಬೆಳಗಾವಿ: ನಕಲಿ ದಾಖಲೆ ಸೃಷ್ಠಿಸಿ  ಬೇರಯವರ ಭೂಮಿ ಮಾರಾಟ ಮಾಡಿದ 80 ವರ್ಷದ ಅಜ್ಜಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ವಡಗಾವಿ ಗಣೇಶ ಕಾಲೋನಿ ನಿವಾಸಿ ಮಂದಾಕಿನಿ ಪಾರಿಶ್ವಾಡಕರ ಬಂಧಿತ ಆರೋಪಿ. ಬೇರೊಬ್ಬರ ಹೆಸರಿನಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನನ್ನು ತನ್ನದೆಂದು ಮಾರಾಟ ಮಾಡಿರುವ ಆರೋಪ ಇವರ ಮೇಲೆ ಇದೆ.

ಕಣಬರ್ಗಿ ರಸ್ತೆಯ ಮಹಾಂತೇಶ ನಗರದಲ್ಲಿರುವ ಪ್ಲಾಟ್ ನಂ.2313 ಹಾಗೂ ಸಿಟಿಎಸ್ ನಂ.9449ರ ಜಾಗ ರತ್ನಾ ಯಶವಂತ ಮಲ್ಲೂಕರ ಅವರ ಹೆಸರಿನಲ್ಲಿತ್ತು. ಈ ಜಾಗವನ್ನು ಅಕ್ರಮವಾಗಿ ಪರಭಾರೆ ಮಾಡುವ ಉದ್ದೇಶದಿಂದ ಮಂದಾಕಿನಿ, ರತ್ನಾ ಅವರಂತೆ ನಟನೆ ಮಾಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿರುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ.

2023ರ ಸೆಪ್ಟೆಂಬರ್ 16ರಂದು ಬೆಳಗಾವಿ ಉತ್ತರ ಉಪನೋಂದಣಾಧಿಕಾರಿ ಕಚೇರಿಗೆ ತೆರಳಿದ್ದ ಆರೋಪಿ, ರತ್ನಾ ಮಲ್ಲೂಕರ ಅವರ ಹೆಸರಿನಲ್ಲಿ ವೆಬ್ ಕ್ಯಾಮೆರಾದಲ್ಲಿ ಫೋಟೊ ತೆಗೆಸಿಕೊಂಡಿದ್ದಲ್ಲದೆ, ಅವರ ಹೆಸರಿನಲ್ಲಿ ಹೆಬ್ಬೆರಳಿನ ಗುರುತು ಹಾಗೂ ಸಹಿ ನೀಡಿ ಜಾಗವನ್ನು ಮತ್ತೊಬ್ಬರಿಗೆ ಸೇಲ್‌ಡೀಡ್ ಮಾಡಿರುವ ಆರೋಪವಿದೆ.

ಜಾಗದ ಮಾಲೀಕರಿಗೆ ಈ ವಂಚನೆ ತಿಳಿದುಬಂದ ಬಳಿಕ ರತ್ನಾ ಮಲ್ಲೂಕರ ಅವರು 2025ರ ಫೆಬ್ರವರಿ 4ರಂದು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಮಂದಾಕಿನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣದ ಹಲವು ಅಂಶಗಳು ಬಹಿರಂಗಗೊಂಡಿವೆ.

ಪ್ರಕರಣದಲ್ಲಿ ಕೃತ್ಯಕ್ಕೆ ಸಹಕರಿಸಿದ ಆರೋಪದಡಿ ಕಾಕತಿಯ ಸಿದ್ದೇಶ್ವರ ನಗರದ ನಿವಾಸಿ ರಾಹುಲ್ ಅನೀಲ ಮಗದುಮ್ ಎಂಬಾತನ ವಿರುದ್ಧವೂ ಪ್ರಕರಣ ದಾಖಲಾಗಿದೆ. ರಾಹುಲ್ ಈಗಾಗಲೇ ದಾಖಲಾಗಿರುವ ಇನ್ನೆರಡು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!