ಬೆಳಗಾವಿ: ಅತಿ ವೇಗವಾಗಿ ಬಂದು ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ದುರ್ಮರಣ ಹೊಂದಿರುವ ಘಟನೆ
ಗೋಕಾಕ ತಾಲೂಕಿನ ಬಳೋಬಾಳ ಕ್ರಾಸ್ ಬಳಿ ಘಟನೆ ನಡೆದಿದೆ.
ಹುಕ್ಕೇರಿ ತಾಲೂಕಿನ ಕೆ.ಎಂ. ನಾಗನೂರು ಗ್ರಾಮದ ವಿನಯ ವಿಜಯ ಹಿರೇಮಠ (19), ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಶ್ರವಣ ಗುರುಸಿದ್ದಯ್ಯ ಹಿರೇಮಠ (17) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತ ನಡೆಯುತ್ತಿದ್ದಂತೆ ಸ್ಥಳದಲ್ಲಿ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಬಳಿಕ ಪೋಲಿಸರಿಂದ ಟಿಪ್ಪರ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ. 243/2026 ರಡಿ ಪ್ರಕರಣ ದಾಖಲಾಗಿದೆ.