Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಸಕ ವಿಠ್ಠಲ ಹಲಗೇಕರ ಮಹತ್ವದ ಹೆಜ್ಜೆ

ಬೈಲೂರು ಗ್ರಾಮದಲ್ಲಿ ಹೆಸ್ಕಾಂ 33/11 ಕೆವಿ ಉಪಕೇಂದ್ರ ಸ್ಥಾಪನೆಗೆ  ಶಾಸಕರ ಮುತುವರ್ಜಿ

ಖಾನಾಪುರ : ಖಾನಾಪುರ ತಾಲೂಕಿನ ಬೈಲೂರು ಹಾಗೂ ಸುತ್ತಮುತ್ತಲಿನ ಗ್ರಾಮೀಣ ಭಾಗದ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಸಕ ವಿಠ್ಠಲ ಹಲಗೇಕರ ಮಹತ್ವದ ಹೆಜ್ಜೆಯನ್ನಿಟ್ಟಿದ್ದಾರೆ.

ಖಾನಾಪುರ ತಾಲೂಕಿನ ಬೈಲೂರು ಗ್ರಾಮದಲ್ಲಿ ನೂತನ ಹೆಸ್ಕಾಂ  33/11 ಕೆವಿ ಉಪಕೇಂದ್ರ ನಿರ್ಮಾಣದ ಬೇಡಿಕೆ ಇದೆ.
 
ಉಪಕೇಂದ್ರ ನಿರ್ಮಾಣಕ್ಕೆ ಉದ್ದೇಶಿಸಲಾದ ಜಾಗವನ್ನು ಪಂಚಾಯಿತಿಯಿಂದ ಲೀಸ್ (ಗುತ್ತಿಗೆ) ಆಧಾರದ ಮೇಲೆ ಪಡೆಯಬೇಕಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಜಾಗದ ಹಸ್ತಾಂತರ ಪ್ರಕ್ರಿಯೆಯು ನನೆಗುದಿಗೆ ಬಿದ್ದಿತ್ತು. ಇದಕ್ಕೆ ಶಾಸಕರಿಂದ ಸ್ಥಳದಲ್ಲೇ ಪರಿಹಾರ ದೊರೆತಿದೆ. 
ರೈತರ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಈ ಯೋಜನೆ ಎಷ್ಟು ಮುಖ್ಯ ಎಂಬುದನ್ನು ಅರಿತ ಶಾಸಕ ವಿಠ್ಠಲ ಸೋಮಣ್ಣ ಹಲಗೇಕರ ಅವರು ಸ್ವತಃ ಬೆಳಗಾವಿ ಜಿಲ್ಲಾ ಪಂಚಾಯತ್ ಕಚೇರಿಗೆ ಭೇಟಿ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ  ಸುದೀರ್ಘವಾಗಿ ಚರ್ಚಿಸಿದ ಶಾಸಕರು, ಜಾಗದ ಹಸ್ತಾಂತರ ಪ್ರಕ್ರಿಯೆಯಲ್ಲಿ ಎದುರಾಗಿರುವ ತಾಂತ್ರಿಕ ಅಡಚಣೆಯನ್ನು ನಿವಾರಿಸಿ, ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಮತ್ತು ಕಾಮಗಾರಿಗೆ ವೇಗ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
 
ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಹಾಗೂ ರೈತರ, ಸಾರ್ವಜನಿಕರ ಹಿತರಕ್ಷಣೆಗೆ ಶಾಸಕರು ಬದ್ದತೆ ತೋರಿಸಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕರೆ: ಪ್ರವೀಣ ಗುಡಿಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮ