Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

₹15,504 ಕೋಟಿ ಕಬ್ಬಿನ ಬಿಲ್ ಬಾಕಿ ; ತ್ವರಿತ ಪಾವತಿಗೆ ಕ್ರಮ: ಕೇಂದ್ರ

ನವದೆಹಲಿ: 2024-25ನೇ ಮಾರುಕಟ್ಟೆ ಋತುವಿನಲ್ಲಿ (ಅಕ್ಟೋಬರ್‌ನಿಂದ ಸೆಪ್ಟೆಂಬರ್) ಮಾರ್ಚ್ 5ರ ವರೆಗೆ ದೇಶದ ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ ಒಟ್ಟು ₹15,504 ಕೋಟಿ ಮೊತ್ತವನ್ನು ಬಾಕಿ ಉಳಿಸಿಕೊಂಡಿವೆ. ಈ ಪೈಕಿ ಕರ್ನಾಟಕದ ರೈತರಿಗೆ ₹3,365 ಕೋಟಿ ಪಾವತಿಗೆ ಬಾಕಿ ಇದೆ.

ಉತ್ತರ ಪ್ರದೇಶದ ಕಾರ್ಖಾನೆಗಳು ₹4,793 ಕೋಟಿ ಪಾವತಿ ಮಾಡಬೇಕಿದೆ. ಬಾಕಿ ಉಳಿಸಿಕೊಂಡಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕವು ಎರಡನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ (₹2,949 ಕೋಟಿ) ಮತ್ತು ಗುಜರಾತ್ (₹1,454 ಕೋಟಿ) ಆ ನಂತರದ ಸ್ಥಾನದಲ್ಲಿವೆ.

ಕರ್ನಾಟಕದ ಸಕ್ಕರೆ ಕಾರ್ಖಾನೆಗಳು 2023-24ನೇ ಆರ್ಥಿಕ ವರ್ಷದವರೆಗೆ ರೈತರಿಗೆ ಎಲ್ಲ ಬಾಕಿ ಮೊತ್ತ ಪಾವತಿಸಿವೆ.

ಸಕ್ಕರೆ ಬಾಕಿ ಉಳಿಸಿಕೊಳ್ಳುವುದು ನಿರಂತರ ಪ್ರಕ್ರಿಯೆಯಾಗಿದೆ. ಕಾರ್ಖಾನೆಗಳು ಹಂತ ಹಂತವಾಗಿ ಬಾಕಿ ಮೊತ್ತ ಪಾವತಿಸಲಿವೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ರಾಜ್ಯ ಖಾತೆ ಸಚಿವೆ ನಿಮುಬೇನ್ ಜಯಂತಿಭಾಯ್ ಬಮ್ಯಾನಿಯಾ ಅವರು, ರಾಜ್ಯಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ರೈತರಿಗೆ ಸಕಾಲದಲ್ಲಿ ಬಾಕಿ ಮೊತ್ತ ಪಾವತಿಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ. ಕಬ್ಬಿಗೆ ನ್ಯಾಯಸಮ್ಮತ ಮತ್ತು ಪ್ರೋತ್ಸಾಹದಾಯಕ ದರ (ಎಫ್‌ಆರ್‌ಪಿ) ಹೆಚ್ಚಿಸಿದೆ. ಅವರಿಗೆ ಹೆಚ್ಚಿನ ಲಾಭ ಕಲ್ಪಿಸಲು ಸಕ್ಕರೆ ಬಳಸಿ ಎಥೆನಾಲ್ ತಯಾರಿಕೆಗೆ ಅನುಮತಿ ನೀಡಿದೆ ಎಂದು ಹೇಳಿದ್ದಾರೆ.

ಸಕ್ಕರೆ ರಫ್ತಿಗೆ ಅನುಮತಿ:
ಬೆಲೆ ಕುಸಿತ ತಡೆಯಲು ಮತ್ತು ರೈತರಿಗೆ ಬಾಕಿ ಮೊತ್ತ ಪಾವತಿಗೆ ಅನುಕೂಲವಾಗುವಂತೆ ಪ್ರಸಕ್ತ ಮಾರುಕಟ್ಟೆ ಋತುವಿನಲ್ಲಿ 10 ಲಕ್ಷ ಟನ್ ಸಕ್ಕರೆ ರಫ್ತಿಗೆ ಸರ್ಕಾರವು ಅನುಮತಿ ನೀಡಿದೆ. ಕನಿಷ್ಠ ಸಕ್ಕರೆ ಮಾರಾಟ ದರವನ್ನು ಕೆ.ಜಿಗೆ ₹31ಕ್ಕೆ ನಿಗದಿಪಡಿಸಿದೆ.

ಸರ್ಕಾರ ಕೈಗೊಂಡಿರುವ ಕ್ರಮಗಳಿಂದಾಗಿ 2023-24ನೇ ಮಾರುಕಟ್ಟೆ ಋತುವಿನಲ್ಲಿ ಸಕ್ಕರೆ ಬಾಕಿ ಪಾವತಿಯಲ್ಲಿ
ಶೇ 99.9ರಷ್ಟು ಗುರಿ ಸಾಧನೆಯಾಗಿದೆ. 2024-25ನೇ ಋತುವಿನಲ್ಲಿ ಶೇ 80ರಷ್ಟು ಬಾಕಿ ಪಾವತಿಸಲಾಗಿದೆ' ಎಂದು ಸಚಿವೆ ತಿಳಿಸಿದ್ದಾರೆ.

ಉತ್ಪಾದನೆ ಇಳಿಕೆ ನಿರೀಕ್ಷೆ

ದೇಶದಲ್ಲಿ ಕಳೆದ ಮಾರುಕಟ್ಟೆ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಸಕ್ಕರೆ ಉತ್ಪಾದನೆಯು ಕಡಿಮೆಯಾಗಲಿದೆ ಎಂದು ಭಾರತೀಯ ಸಕ್ಕರೆ ಮತ್ತು ಜೈವಿಕ ಇಂಧನ ತಯಾರಕರ ಸಂಘ (ಐಎಸ್‌ಎಂಎ) ಅಂದಾಜಿಸಿದೆ. 264 ಲಕ್ಷ ಟನ್ ಉತ್ಪಾದನೆಯಾಗುವ ನಿರೀಕ್ಷೆಯಿದೆ ಎಂದು ತನ್ನ ಪರಿಷ್ಕೃತ ಅಂದಾಜು ವರದಿಯಲ್ಲಿ ಹೇಳಿದೆ. ಪ್ರಸ್ತುತ ದೇಶದಾದ್ಯಂತ 228 ಕಾರ್ಖಾನೆಗಳು ಕಬ್ಬು ಅರೆಯುವಿಕೆ ಪ್ರಕ್ರಿಯೆ ಆರಂಭಿಸಿದ್ದು ಮಾರ್ಚ್ 10ರ ವರೆಗೆ ಒಟ್ಟು 233.09 ಲಕ್ಷ ಟನ್ ಸಕ್ಕರೆ ಉತ್ಪಾದಿಸಿವೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ