Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಕಲಿಗೆ ಇನ್ಮೆಲೆ ಕಠಿಣ ಶಿಕ್ಷೆ : ಪರೀಕ್ಷಾ ಅಕ್ರಮ ಎಸಗುವವರಿಗೆ 10 ಕೋಟಿ ದಂಡ

ನಕಲಿಗೆ ಇನ್ಮೆಲೆ ಕಠಿಣ ಶಿಕ್ಷೆ : ಪರೀಕ್ಷಾ ಅಕ್ರಮ ಎಸಗುವವರಿಗೆ 10 ಕೋಟಿ ದಂಡ

ಬೆಂಗಳೂರು :
ಪರೀಕ್ಷಾ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಇದೀಗ ಬಹಳ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಮುಂದಾಗಿದೆ. ಜೊತೆಗೆ ದೀರ್ಘಾವಧಿ ಜೈಲು ಶಿಕ್ಷೆ ನೀಡಲು ಸರಕಾರ ಮುಂದಾಗಿದೆ.

ರಾಜ್ಯದಲ್ಲಿ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಎಸಗುವವರಿಗೆ ₹ 10 ಕೋಟಿಯವರೆಗೆ ದಂಡ ಮತ್ತು 12 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸುವ ‘ಸಾರ್ವಜನಿಕ ಪರೀಕ್ಷಾ ಅಕ್ರಮ ನಿಯಂತ್ರಣ ಮಸೂದೆ’ಗೆ ಸಂಪುಟ ಒಪ್ಪಿಗೆ ನೀಡಿದೆ. ಇಂತಹ ಪ್ರಕರಣಗಳ ಅಪರಾಧಿಗಳ ಆಸ್ತಿ ಮುಟ್ಟುಗೋಲಿಗೂ ಕಾನೂನಿನಲ್ಲಿ ಅವಕಾಶ ಕಲ್ಪಿಸಲಾಗುತ್ತಿದೆ.

ರಾಜ್ಯದಲ್ಲಿ ನಿರಂತರವಾಗಿ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆಯುತ್ತಲೇ ಇವೆ. ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌, ಸಹಾಯಕ ಪ್ರಾಧ್ಯಾಪಕರ ನೇಮಕಾತಿ, ಇತ್ತೀಚೆಗೆ ನಡೆದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆಯಲ್ಲೂ ಅಕ್ರಮ ನಡೆದಿತ್ತು. ಇಂತಹ ಪರೀಕ್ಷಾ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ರೂಪಿಸಿರುವ ‘ಕರ್ನಾಟಕ ಸಾರ್ವಜನಿಕ ಪರೀಕ್ಷೆ (ನೇಮಕಾತಿಯಲ್ಲಿನ ಭ್ರಷ್ಟಾಚಾರ ಮತ್ತ ಅನುಚಿತ ವಿಧಾನಗಳ ಪ್ರತಿಬಂಧಕ ಕ್ರಮಗಳು) ಮಸೂದೆ–2023ಕ್ಕೆ ಕಳೆದ ವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ.

ಪರೀಕ್ಷೆಯಲ್ಲಿ ನಕಲು ಮಾಡುವುದು, ಪ್ರಶ್ನೆಪತ್ರಿಕೆಗಳ ಸೋರಿಕೆ, ಉತ್ತರ ಪತ್ರಿಕೆ ಮತ್ತು ಒಎಂಆರ್‌ ಹಾಳೆಗಳನ್ನು ತಿದ್ದುವುದು, ಲಿಖಿತ ಅಥವಾ ವಿದ್ಯುನ್ಮಾನ ಅಥವಾ ಯಾಂತ್ರೀಕೃತ ಸಾಧನ/ ಉಪಕರಣ ಬಳಸುವುದು, ಪರೀಕ್ಷಾ ಕೇಂದ್ರದೊಳಕ್ಕೆ ಅಕ್ರಮ ಪ್ರವೇಶ ಮಾಡುವುದು, ಅನಧಿಕೃತ ಸ್ಥಳಗಳಲ್ಲಿ ಪರೀಕ್ಷೆ ಬರೆಸುವುದು ಸೇರಿದಂತೆ ಯಾವುದೇ ಬಗೆಯ ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗುವುದನ್ನು ಶಿಕ್ಷಾರ್ಹ ಅಪರಾಧ ಎಂದು ಈ ಮಸೂದೆಯು ಘೋಷಿಸಲಿದೆ.

ನಕಲು ಅಥವಾ ಹೊರಗಿನಿಂದ ಸಹಾಯ ಪಡೆದು ಪರೀಕ್ಷಾ ಅಕ್ರಮ ಎಸಗುವ ಅಭ್ಯರ್ಥಿಗೆ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ₹ 10 ಲಕ್ಷ ದಂಡ ವಿಧಿಸುವ ಪ್ರಸ್ತಾವ ಮಸೂದೆಯ ಸೆಕ್ಷನ್‌ 10 (1)ರಲ್ಲಿದೆ.

ಅಭ್ಯರ್ಥಿಯೂ ಸೇರಿದಂತೆ ಯಾವುದೇ ವ್ಯಕ್ತಿ ಬೇರೊಬ್ಬರ ಹೆಸರಿನಲ್ಲಿ ಪರೀಕ್ಷೆ ಬರೆಯಲು ಪ್ರಯತ್ನಿಸುವುದು, ಪ್ರಶ್ನೆಪತ್ರಿಕೆ ಸೋರಿಕೆ ಮಾಡುವುದು, ಸೋರಿಕೆಗೆ ಪ್ರಯತ್ನಿಸುವುದು, ಅಕ್ರಮವಾಗಿ ಪ್ರಶ್ನೆ ಪತ್ರಿಕೆಗಳನ್ನು ಸಂಗ್ರಹಿಸಿಟ್ಟುಕೊಳ್ಳುವುದು, ಅಕ್ರಮವಾಗಿ ಉತ್ತರ ಬರೆಯುವುದು ಅಥವಾ ಬರೆಯಲು ನೆರವಾಗುವುದು, ನೆರವು ಕೋರುವುದು ಸೇರಿದಂತೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಪರೀಕ್ಷಾ ಅಕ್ರಮಕ್ಕೆ ನೆರವು ನೀಡುವವರಿಗೆ ಎಂಟರಿಂದ 12 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ₹ 15 ಲಕ್ಷದಿಂದ ₹ 10 ಕೋಟಿಯವರೆಗೂ ದಂಡ ವಿಧಿಸುವ ಪ್ರಸ್ತಾವ ಸೆಕ್ಷನ್‌ 10 (2)ರಲ್ಲಿದೆ.

ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದ ಅಭ್ಯರ್ಥಿಗಳು ಮುಂದಿನ ಎರಡು ವರ್ಷಗಳವರೆಗೆ ಯಾವುದೇ ಸಾರ್ವಜನಿಕ ಪರೀಕ್ಷೆಯನ್ನು ತೆಗೆದುಕೊಳ್ಳದಂತೆ ಅನರ್ಹಗೊಳಿಸುವ ಪ್ರಸ್ತಾವವು ಸೆಕ್ಷನ್‌ 11 (2)ರಲ್ಲಿದೆ.

ಯಾವುದೇ ಸಂಸ್ಥೆ ಅಥವಾ ಅದರ ಆಡಳಿತ ಮಂಡಳಿಯು ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದರೆ ಆ ಪರೀಕ್ಷೆಯ ಸಂಪೂರ್ಣ ವೆಚ್ಚವನ್ನು ಅಂತಹ ಸಂಸ್ಥೆ/ ಆಡಳಿತ ಮಂಡಳಿಯಿಂದಲೇ ವಸೂಲಿ ಮಾಡಲು ಸೆಕ್ಷನ್‌ 13 ಅವಕಾಶ ಕಲ್ಪಿಸಲಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ