Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಂಭ್ರಮಾಚರಣೆ ವೇಳೆ ಕಾಲ್ತುಳಿತ 10 ಮಂದಿ ಮೃತ

ಬೆಂಗಳೂರ: 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿದ್ದಾರೆ.  ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ನಡೆದಿದೆ.  ಈ ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿ 10 ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ.​

ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಆರಕ್ಕೂ ಹೆಚ್ಚು ಆರ್​ಸಿಬಿ ಅಭಿಮಾನಿಗಳ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ​ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ, ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೂ ದಾಖಲಿಸಾಲಗಿದ್ದ ನಾಲ್ವರು ಆರ್​ಸಿಬಿ ಅಭಿಮಾನಿಗಳು ಸೇರಿದಂತೆ ಒಟ್ಟು 10 ಮಂದಿ ಮೃತಪಟ್ಟಿದ್ದಾರೆ. 10 ಮಂದಿ ಅಭಿಮಾನಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೌರಿಂಗ್​ ಆಸ್ಪತ್ರೆ ಎದುರು ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಟೇಡಿಯಂ ಹೊರಗೂ ಜನಸಾಗರವೇ ಸೇರಿದ್ದು ಇದರಿಂದ ಆ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಮುಂದೆ ಹೋಗಲಾಗದೆ ಟ್ರಾಫಿಕ್ ಜಾಮ್ ಉಂಟಾಗಿದೆ. ಜನರನ್ನು ಕಂಟ್ರೋಲ್ ಮಾಡಲು ಸಾಧ್ಯವಾಗದೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ನೂಕುನುಗ್ಗಲಿನಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಪೊಲೀಸರು ತಮ್ಮ ಜೀಪ್​ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದೇ ವೇಳೆ ಗೇಟ್ ನಂಬರ್ 12ರಲ್ಲಿ ಮಹಿಳಾ ಅಭಿಮಾನಿಯೊಬ್ಬರು ಕುಸಿದುಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಇದೇ ವೇಳೆ ಬ್ಯಾರಿಕೇಡ್​ ಬಿದ್ದು ಮೂವರ ಕಾಲು ಮುರಿದಿದೆ. ಆರಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ