Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪಿಎಂ ಉಷಾ ಯೋಜನೆ : ರಾಣಿ ಚನ್ನಮ್ಮ ವಿವಿಗೆ 100 ಕೋಟಿ ರೂ.

ಬೆಳಗಾವಿ : ಕೇಂದ್ರ ಶಿಕ್ಷಣ ಸಚಿವಾಲಯದ ಅಡಿಯಲ್ಲಿರುವ ಉನ್ನತ ಶಿಕ್ಷಣ ಇಲಾಖೆಯ ‘ಪ್ರಧಾನ ಮಂತ್ರಿ ಉಚ್ಚತರ್ ಶಿಕ್ಷಾ ಅಭಿಯಾನ್‌’ (ಪಿಎಂ–ಉಷಾ) ಯೋಜನೆಯ ‘ವಿಶ್ವವಿದ್ಯಾಲಯಗಳಲ್ಲಿ ಬಹುಶಿಸ್ತೀಯ ಶಿಕ್ಷಣ ಮತ್ತು ಸಂಶೋಧನೆ’ (ಎಂಇಆರ್‌ಯು) ಅಡಿ ರಾಜ್ಯದ ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ತಲಾ ₹100 ಕೋಟಿ ಅನುದಾನ ಪಡೆಯಲು ಅರ್ಹತೆ ಪಡೆದಿವೆ.

‘ಪಿಎಂ–ಉಷಾ’ ಯೋಜನೆಗೆ ಅನುಮೋದನೆ ನೀಡುವ ಮಂಡಳಿಯ (ಪಿಎಬಿ) ಸಭೆ ಇತ್ತೀಚೆಗೆ ನಡೆದಿದ್ದು, ಅನುದಾನ ಪಡೆಯಲು ಅರ್ಹತೆ ಪಡೆದಿರುವ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಕೇಂದ್ರ ಉನ್ನತ ಶಿಕ್ಷಣ ಇಲಾಖೆ ಶನಿವಾರ (ಫೆ. 17) ಬಿಡುಗಡೆ ಮಾಡಿದೆ. ಇದೇ ಮೊದಲ ಬಾರಿಗೆ ರಾಜ್ಯದ ಎರಡು ವಿಶ್ವವಿದ್ಯಾಲಯಗಳು ಈ ಯೋಜನೆಯಡಿ ದೊಡ್ಡ ಮೊತ್ತದ ಅನುದಾನ ಪಡೆಯಲು ಅರ್ಹ ಆಗಿವೆ.

ಈ ಯೋಜನೆಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ, ‘ವಿಶ್ವವಿದ್ಯಾಲಯಗಳಲ್ಲಿ ಬಹುಶಿಸ್ತೀಯ ಶಿಕ್ಷಣ ಮತ್ತು ಸಂಶೋಧನೆ’ (ಎಂಇಆರ್‌ಯು), ‘ವಿಶ್ವವಿದ್ಯಾಲಯಗಳ ಬಲವರ್ಧನೆಗೆ ಅನುದಾನ’ (ಜಿಎಸ್‌ಯು) ಮತ್ತು ‘ಹೊಸ ಮಾದರಿಯ ಪದವಿ ಕಾಲೇಜುಗಳು’ (ಎನ್‌ಎಂಡಿಸಿ) ಈ ಮೂರು ವಿಭಾಗಗಳಲ್ಲಿ ಬಂದ ಪ್ರಸ್ತಾವಗಳನ್ನು ಪರಿಗಣಿಸಿ ಪಿಎಬಿ ಅನುದಾನ ಹಂಚಿಕೆ ಮಾಡುತ್ತಿದೆ. ಪ್ರಸಕ್ತ ಸಾಲಿನಲ್ಲಿ ಒಟ್ಟು ₹30 ಸಾವಿರ ಕೋಟಿಯನ್ನು ಈ ಯೋಜನೆಗಳಿಗೆ ಮೀಸಲಿಡಲಾಗಿದೆ. ದೇಶದ 1,472 ವಿಶ್ವವಿದ್ಯಾಲಯಗಳ ಪೈಕಿ ಕೇವಲ 26 ವಿಶ್ವವಿದ್ಯಾಲಯಗಳು ಮಾತ್ರ ತಲಾ ₹100 ಕೋಟಿ ಅನುದಾನ ಪಡೆಯಲು ಆಯ್ಕೆ ಆಗಿವೆ.

ಈ ಯೋಜನೆಯ ‘ವಿಶ್ವವಿದ್ಯಾಲಯಗಳ ಬಲವರ್ಧನೆಗೆ ಅನುದಾನ’ (ಜಿಎಸ್‌ಯು) ವಿಭಾಗದ ಅಡಿ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್‌ ವಿಶ್ವವಿದ್ಯಾಲಯ, ಮಂಗಳೂರು ವಿಶ್ವವಿದ್ಯಾಲಯ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಮತ್ತು ಕಲಬುರಗಿಯ ಗುಲ್ಬರ್ಗಾ ವಿಶ್ವವಿದ್ಯಾಲಯವು ಅನುದಾನ ಪಡೆಯಲು ಅರ್ಹತೆ ಪಡೆದಿವೆ.

ಕೇವಲ 90 ಪ್ರಸ್ತಾವ: ಹೊಸ ಮಾದರಿಯ ಪದವಿ ಕಾಲೇಜುಗಳು (ಎನ್‌ಎಂಡಿಸಿ) ವಿಭಾಗದಲ್ಲಿ ಅನುದಾನ ಪಡೆಯಲು 90 ಪ್ರಸ್ತಾವಗಳು ಮಾತ್ರ ಪಿಎಬಿಗೆ ಸಲ್ಲಿಕೆ ಆಗಿದ್ದವು. ಯಾವುದೇ ಉನ್ನತ ಶಿಕ್ಷಣ ಸಂಸ್ಥೆ ಇಲ್ಲದ ಜಿಲ್ಲೆಗಳಲ್ಲಿ ಮಾತ್ರ ಹೊಸ ಮಾದರಿಯ ಪದವಿ ಕಾಲೇಜುಗಳಿಗೆ ಈ ಯೋಜನೆಯಡಿ ಅನುದಾನ ನೀಡಲಾಗುವುದು ಎಂಬ ಷರತ್ತು ವಿಧಿಸಲಾಗಿತ್ತು. ಸಲ್ಲಿಕೆಯಾಗಿದ್ದ ಪ್ರಸ್ತಾವಗಳೆಲ್ಲ ಈ ಷರತ್ತಿನ ಕಾರಣಕ್ಕೆ ಅನರ್ಹಗೊಂಡಿವೆ. ಹೀಗಾಗಿ, ಈ ವಿಭಾಗದಲ್ಲಿ ಅನುದಾನ ಪಡೆಯಲು ನಿಗದಿಪಡಿಸಿರುವ ಮಾನದಂಡಗಳನ್ನು ಪರಿಷ್ಕರಿಸಲು ಪಿಎಬಿ ನಿರ್ಧರಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ