Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅನ್ನಭಾಗ್ಯ: ಹಣದ ಬದಲು ಅಕ್ಕಿ; ಪ್ರತಿ ಫಲಾನುಭವಿಗಳಿಗೆ 10 ಕೆ.ಜಿ ಅಕ್ಕಿ

ಬೆಂಗಳೂರು: ಅನ್ನಭಾಗ್ಯ ಯೋಜನೆಯ ಪಡಿತರ ವಿತರಣೆ ವ್ಯವಸ್ಥೆ ಅಡಿ ಇದೇ ಫೆಬ್ರುವರಿಯಿಂದ ಪ್ರತಿ ಫಲಾನುಭವಿಗಳಿಗೆ 10 ಕೆ.ಜಿ ಅಕ್ಕಿ ಸಿಗಲಿದೆ.

ಗ್ಯಾರಂಟಿ ಯೋಜನೆಯ ಘೋಷಣೆಯಂತೆ ರಾಜ್ಯ ಸರ್ಕಾರ 2023ರ ಜುಲೈನಿಂದ ಫಲಾನುಭವಿಗಳ ಖಾತೆಗೆ ₹170 ಜಮೆ ಮಾಡುವ ಪ್ರಕ್ರಿಯೆ ಸ್ಥಗಿತಗೊಳ್ಳಲಿದೆ. ನವೆಂಬ‌ರ್, ಡಿಸೆಂಬ‌ರ್ ಬಾಕಿಯನ್ನು ಖಾತೆಗೆ ಜಮೆ ಮಾಡಲು ನಿರ್ಧರಿಸಲಾಗಿದ್ದು, ಜನವರಿಯಲ್ಲಿ ನೀಡಬೇಕಿದ್ದ ಹಣಕ್ಕೆ ಬದಲಾಗಿ ಫೆಬ್ರುವರಿ ಪಡಿತರದಲ್ಲಿ 5 ಕೆ.ಜಿ. ಹೆಚ್ಚುವರಿ ಅಕ್ಕಿ ನೀಡುತ್ತಿದೆ. ಅಂದರೆ ಇದೊಂದು ತಿಂಗಳು ಪಡಿತರದಾರರಿಗೆ 15 ಕೆ.ಜಿ. ಅಕ್ಕಿ ದೊರೆಯಲಿದೆ.

ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ 'ಗ್ಯಾರಂಟಿ' ಭರವಸೆಯಂತೆ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಪ್ರತಿಯೊಬ್ಬರಿಗೂ 10 ಕೆ.ಜಿ. ಅಕ್ಕಿ ನೀಡಬೇಕಿತ್ತು. ಆದರೆ, ಅಗತ್ಯ ಪ್ರಮಾಣದ ಅಕ್ಕಿ ಹೊಂದಿಸಲು ಸಾಧ್ಯವಾಗದ ಕಾರಣ ಕೇಂದ್ರ ನೀಡುತ್ತಿರುವ 5 ಕೆ.ಜಿ. ಅಕ್ಕಿಯನ್ನು ಮಾತ್ರ ಪೂರೈಸಿ, ಉಳಿದ 5 ಕೆ.ಜಿ. ಅಕ್ಕಿಯ ಬದಲು ಹಣ ನೀಡಲು ನಿರ್ಧರಿಸಲಾಗಿತ್ತು. ಪ್ರತಿ ಕೆ.ಜಿ.ಗೆ ₹34ರಂತೆ ಲೆಕ್ಕ ಹಾಕಿ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ಪ್ರತಿ ತಿಂಗಳು ₹170 ಜಮೆ ಮಾಡಲಾಗುತ್ತಿತ್ತು.

ಪ್ರತಿ ತಿಂಗಳು ₹190 ಕೋಟಿ ಉಳಿತಾಯ: ಕೇಂದ್ರ ಸರ್ಕಾರ ಕೆ.ಜಿ.ಗೆ ₹22.50 ನಂತೆ ಅಕ್ಕಿ ಸರಬರಾಜು ಮಾಡಲು ಒಪ್ಪಿಗೆ ನೀಡಿದ್ದು, ಇದರಿಂದ ರಾಜ್ಯ ಸರ್ಕಾರಕ್ಕೆ ಪ್ರತಿ ತಿಂಗಳು ಸುಮಾರು ₹190 ಕೋಟಿ ಉಳಿತಾಯವಾಗಲಿದೆ. ಒಂದೂವರೆ ವರ್ಷದ ಹಿಂದೆ ಅನ್ನಭಾಗ್ಯ ಯೋಜನೆ ಆರಂಭಿಸಿದಾಗ ₹34 ನೀಡಲು ಸಿದ್ಧವಿದ್ದರೂ, ಅಗತ್ಯ ಅಕ್ಕಿ ದೊರೆತಿರಲಿಲ್ಲ. ಹಾಗಾಗಿ, ಅಷ್ಟೇ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲು ಸರ್ಕಾರ ನಿರ್ಧಾರ ತೆಗೆದುಕೊಂಡಿತ್ತು. ಈಗ ₹22.50 ದರದಂತೆ ಅಕ್ಕಿ ಖರೀದಿಸಿ ಪೂರೈಸುವುದರಿಂದ ರಾಜ್ಯ ಸರ್ಕಾರಕ್ಕೆ ದೊಡ್ಡ ಮೊತ್ತದ ಹಣ ಉಳಿತಾಯವಾಗಲಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ