Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಹಾಶಿವರಾತ್ರಿ : ಕೆಎಸ್‌ಆರ್‌ಟಿಸಿಯಿಂದ 1500 ಹೆಚ್ಚುವರಿ ಬಸ್ ಸೇವೆ

ಬೆಂಗಳೂರು : ಮಹಾಶಿವರಾತ್ರಿ ( ಮಾ.8) ಹಬ್ಬದ ಅಂಗವಾಗಿ ಬೆಂಗಳೂರಿನಲ್ಲಿರುವ ಜನರು ತಮ್ಮ ಪ್ರದೇಶಗಳಿಗೆ ತೆರಳಲು ಅನುಕೂಲ ಆಗುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ 1,500 ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ಮಾಡಲಾಗುತ್ತಿದೆ.
ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಕರಾರಸಾ ನಿಗಮದಿಂದ 1500 ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಮಾರ್ಚ್‌8ರಂದು ಮಹಾಶಿವರಾತ್ರಿ ಹಾಗೂ 9 ಹಾಗೂ 10 ವಾರಾಂತ್ಯ ದಿನಗಳಾಗಿರುವುದರಿಂದ ಕರಾರಸಾ ನಿಗಮ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ ಮಾರ್ಚ್‌ 7ರಿಂದ 10 ರ ವರೆಗೆ ಬೆಂಗಳೂರಿನಿಂದ ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ಸ್ಥಳಗಳಿ 1500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ನಂತರ ರಾಜ್ಯ ಮತ್ತು ಬೇರೆ ರಾಜ್ಯಗಳ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ತೆರಳಲು ಮಾರ್ಚ್‌ 10 ಹಾಗೂ 11ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ನಡೆಸಲಿದೆ.

ಕೆಂಪೇಗೌಡ ಬಸ್ ನಿಲ್ದಾಣ : ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಮಾಡಲಾಗುತ್ತದೆ.
ಮೈಸೂರು ರಸ್ತೆ ಬಸ್ ನಿಲ್ದಾಣ: ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ಮಾಡಲಾಗುತ್ತದೆ.
ತಮಿಳುನಾಡು ಮತ್ತು ಕೇರಳ ಕಡೆಗೆ: ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರು, ತಿರುಚಿ, ಪಾಲಕ್ಕಾಡ್, ತ್ರಿಶ್ಶೂರ್, ಎರ್ನಾಕುಲಂ, ಕೋಯಿಕೋಡ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಪ್ರಮುಖ ಸುದ್ದಿ :- ಸಿದ್ದಾಪುರ : ಮಂಗನಕಾಯಿಲೆಗೆ ಒಂದೇ ದಿನ ಇಬ್ಬರು ಸಾವು
ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.
www.ksrtc.karnataka.gov.in ವೆಬ್ ಸೈಟ್ ಮುಖಾಂತರ ಇ-ಟಿಕೇಟ್ ಬುಕಿಂಗ್‌ ಮಾಡಬಹುದಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡವಾಗಿ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುತ್ತದೆ ಹಾಗೂ ಹೋಗುವ ಹಾಗೂ ಬರುವ ಪ್ರಯಾಣದ ಟಿಕೆಟ್‌ ಅನ್ನು ಒಟ್ಟಿಗೆ ಕಾಯ್ದಿರಿಸಿದರೆ ಪ್ರಯಾಣ ದರದಲ್ಲಿ ಶೇಕಡ 10ರಷ್ಟು ರಿಯಾಯಿತಿ ನೀಡಲಾಗುತ್ತದೆ.

ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ನೀಡಲಾಗಿದೆ. ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಟಿಕೆಟ್‌ಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.
ಅಲ್ಲದೆ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ತಿಳಿಸಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ