Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಎಸ್ಸೆಸ್ಸೆಲ್ಸಿ ಗಣಿತಕ್ಕೆ 2 ರೀತಿ ಪ್ರಶ್ನೆ ಪತ್ರಿಕೆ: ಸರ್ಕಾರಕ್ಕೆ ಕ್ಯಾಮ್ಸ್ ಮನವಿ 2ರಲ್ಲಿ ಒಂದನ್ನು ಆಯ್ಕೆ ಮಾಡುವ ನೀತಿ ಬೇಕು ಆಯ್ಕೆಯ ಅಧಿಕಾರ ವಿದ್ಯಾರ್ಥಿಗಳಿಗೇ ಬಿಡಬೇಕು

ಬೆಂಗಳೂರು: ಸಿಬಿಎಸ್‌ಇ ಮಾದರಿಯಲ್ಲಿ ರಾಜ್ಯ ಪಠ್ಯಕ್ರಮದಲ್ಲೂ ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆಗೆ ಸರಳ ಗಣಿತ ಮತ್ತು ಸಾಮಾನ್ಯ ಗಣಿತ ಎಂಬ ಎರಡು ರೀತಿಯ ಪ್ರಶ್ನೆ ಪತ್ರಿಕೆಗಳನ್ನು ತಯಾರಿಸಿ, ಯಾವ ಪತ್ರಿಕೆಗೆ ಉತ್ತರ ಬರೆಯಬೇಕೆಂಬ ಆಯ್ಕೆಯನ್ನು ವಿದ್ಯಾರ್ಥಿಗಳಿಗೆ ಬಿಡುವಂಥ ನೀತಿ ಜಾರಿಗೆ ತರಬೇಕೆಂದು ವಿವಿಧ ಖಾಸಗಿ ಶಾಲಾ ಸಂಘಟನೆಗಳು ಸರ್ಕಾರನ್ನು ಒತ್ತಾಯಿಸಿವೆ.

ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ(ಕ್ಯಾಮ್ಸ್), ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಮನ್ವಯ ಸಮಿತಿ ಪದಾಧಿಕಾರಿಗಳು ಶಿಕ್ಷಣ ಸಚಿವ ಮಧು ಬಂಗಾರಪ್ಪ, ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರಿಗೆ ಮನವಿ ಸಲ್ಲಿಸಿ ದ್ದಾರೆ.

ಶಾಲೆಗಳಲ್ಲಿ ಎಲ್ಲ ಮಕ್ಕಳಿಗೂ ಒಂದೇ ಪಠ್ಯ, ಒಂದೇ ರೀತಿಯ ಬೋಧನೆ ಮಾಡಿದರೂ ಮಕ್ಕಳ ಮೆದುಳಿನ ನರಮಂಡಲದಲ್ಲಿ ಗಣಿತ ಕಲಿಕೆ ಸಾಮರ್ಥಕ್ಕೆ ಪೂರಕವಾಗಿ ಅವರ ಕಲಿಕೆ ಇರುತ್ತದೆ. ಕಡಿಮೆ ಕಲಿಕೆ ಸಾಮರ್ಥವಿರುವ ಮಕ್ಕಳಿಗೆ ಗಣಿತ ಕಬ್ಬಿಣದ ಕಡಲೆ ಎನಿಸುತ್ತದೆ. ಅಂಥ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರಳ ಗಣಿತ ಪ್ರಶ್ನೆ ಪತ್ರಿಕೆ, ಸಾಮಾನ್ಯ ಕಲಿಕಾ ಸಾಮರ್ಥ ಇರುವ ಮಕ್ಕಳಿಗೆ ಈಗಿರುವ ಸಾಮಾನ್ಯ ಗಣಿತ ಪ್ರಶ್ನೆ ಪತ್ರಿಕೆ ನೀಡಬೇಕು. ಒಟ್ಟಿನಲ್ಲಿ ಎರಡು ರೀತಿಯ ಪ್ರಶ್ನೆ ಪತ್ರಿಕೆಯಲ್ಲಿ ತಾವು ಯಾವುದಕ್ಕೆ ಉತ್ತರ ಬರೆಯಬೇಕೆಂಬ ಆಯ್ಕೆಯನ್ನು ಶೈಕ್ಷಣಿಕ ವರ್ಷದ ಆರಂಭದಲ್ಲೇ ಮಾಡಿಕೊಳ್ಳುವ ಅವಕಾಶ ಮಕ್ಕಳಿಗೇ ನೀಡಬೇಕು ಎಂದು ಕ್ಯಾಮ್ಸ್‌ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾ‌ರ್ ಮನವಿ ಪತ್ರದಲ್ಲಿ ಕೋರಿದ್ದಾರೆ. ಪತ್ರದಲಿ ಕೋ ಎರಡು
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರುನಾಡಿಗೆ ಜಲಕಂಟಕ, ಭುವಿಯೇ ತಲ್ಲಣ : ಭವಿಷ್ಯ ನುಡಿದ ಪ್ರಖ್ಯಾತ ಸ್ವಾಮೀಜಿ...!ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟ ನಿಷೇಧ...!ಕೊನೆಗೂ ಸಿಹಿಸುದ್ದಿ : ಶೀಘ್ರದಲ್ಲೇ ಮಾರ್ಚ್, ಏಪ್ರಿಲ್ ಗೃಹಲಕ್ಷ್ಮೀ ಹಣ ಜಮಾ:  ಲಕ್ಷ್ಮೀ ಹೆಬ್ಬಾಳಕರ್ ಕೊಟ್ರು ಈ ಗುಡ್ ನ್ಯೂಸ್..!ನೈರುತ್ಯ ರೇಲ್ವೆ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆಬೆಳಗಾವಿ : 12ಕ್ಕೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಸರಕಾರಿ ನೌಕರರಿಗೆ ಸಿಹಿಸುದ್ದಿ : ತುಟ್ಟಿಭತ್ಯೆ ಹೆಚ್ಚಳ ಪ್ರಜಾಪ್ರಭುತ್ವದ ತತ್ವಗಳನ್ನು ರಕ್ಷಿಸುವುದು ನಾಗರಿಕರ ಆದ್ಯ ಕರ್ತವ್ಯ : ಎ.ಎಸ್.ಪಾಶ್ಚಾಪುರೆಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಅನುಮಾನಾಸ್ಪದ ವಸ್ತುಗಳಿದ್ದ ಬ್ಯಾಗ್‌ ಪತ್ತೆತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ ಪ್ರಮಾಣ ವಚನ