Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

LLB ಪದವೀಧರನಿಗೆ ಚೊಚ್ಚಲ ಪ್ರಯತ್ನದಲ್ಲೇ ಗೆಲುವು ; ಕೇಂದ್ರ ಸಚಿವರನ್ನೇ ಮನೆಗೆ ಕಳಿಸಿದ 26 ವರ್ಷದ ಸಾಗರ ಖಂಡ್ರೆ !

LLB ಪದವೀಧರನಿಗೆ ಚ

 

ಬೀದ‌ರ್: ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಅವರು ಬೀದರ್ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

ಪ್ರಸಕ್ತ ಲೋಕಸಭೆಗೆ ಆಯ್ಕೆಯಾದ ಸಂಸದರಲ್ಲಿ ಅತಿ ಕಿರಿಯ ವಯಸ್ಸಿನವರು ಸಾಗರ್ ಖಂಡ್ರೆ. ಎಲ್‌ಎಲ್‌ಬಿ ಪದವೀಧರರಾಗಿರುವ ಅವರಿಗೆ ಈಗ 26 ವರ್ಷ ವಯಸ್ಸು. ಎದುರಿಸಿದ ಮೊದಲ ಚುನಾವಣೆಯಲ್ಲೇ ಬಿಜೆಪಿ ಅಭ್ಯರ್ಥಿ, ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಸೋಲಿನ ರುಚಿ ತೋರಿಸಿ ಸಂಸತ್ತು ಪ್ರವೇಶಿಸಿದ್ದಾರೆ.

ಈ ಹಿಂದಿನ ಚುನಾವಣೆಗಳಲ್ಲಿ ಕ್ರಮವಾಗಿ ಮಾಜಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್, ಸಚಿವ ಈಶ್ವರ ಬಿ. ಖಂಡ್ರೆಯವರನ್ನು ಸೋಲಿಸಿ ಭಗವಂತ ಖೂಬಾ ಅವರು ಕೇಂದ್ರದಲ್ಲಿ ಮಂತ್ರಿಯಾಗಿದ್ದರು. ತಮ್ಮ ತಂದೆಯನ್ನು ಚುನಾವಣೆಯಲ್ಲಿ ಸೋಲಿಸಿದ್ದ ಖೂಬಾ ಅವರನ್ನು ಈ ಚುನಾವಣೆಯಲ್ಲಿ ಮಣಿಸಿ ಸಾಗರ್ ಖಂಡ್ರೆ ಸೇಡು ತೀರಿಸಿಕೊಂಡಿದ್ದಾರೆ.

ಸಾಗರ್ ಖಂಡ್ರೆ ಅವರು 6,65,162 ಮತಗಳನ್ನು ಪಡೆದರೆ, ಭಗವಂತ ಖೂಬಾ ಅವರು 5,35,766 ಮತ ಗಳಿಸಿದ್ದಾರೆ. ಸಾಗರ್ ಅವರು ಪ್ರತಿಸ್ಪರ್ಧಿಗಿಂತ 1,29,396 ಹೆಚ್ಚುವರಿ ಮತಗಳನ್ನು ಪಡೆದಿದ್ದಾರೆ.

ಖೂಬಾ ಸೋಲಿಗೆ ಕಾರಣ ಏನು ಗೊತ್ತೇ ?
ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೇಂದ್ರ ಸಚಿವ ಭಗವಂತ ಖೂಬಾ ಅವರು ಸ್ವತಃ ಬಿಜೆಪಿ ಶಾಸಕರನ್ನು ಎದುರು ಹಾಕಿಕೊಂಡಿದ್ದರು.
ಅತಿಯಾದ ಆತ್ಮವಿಶ್ವಾಸ. ಮೋದಿಯವರ ಹೆಸರಿನಲ್ಲಿ ಗೆದ್ದು ಬರುವೆ ಎಂಬ ವಿಶ್ವಾಸದಲ್ಲಿ ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ. ಇದರ ಪರಿಣಾಮ ಸ್ವಪಕ್ಷೀಯರೇ ಪೂರ್ಣ ಮನಸ್ಸಿನಿಂದ ಚುನಾವಣೆಯಲ್ಲಿ ಕೆಲಸ ಮಾಡಲಿಲ್ಲ. ಹಿಂದಿನ ಎರಡೂ ಚುನಾವಣೆಗಳಲ್ಲಿ ಮೋದಿ ಅಲೆಯಲ್ಲಿ ಗೆದ್ದಿದ್ದ ಅವರಿಗೆ ಈ ಸಲ ಅದು ನೆರವಿಗೆ ಬರಲಿಲ್ಲ. ಅವರ ಒರಟು ಸ್ವಭಾವ ಕೂಡ ಜನರಿಗೆ ಇಷ್ಟವಾಗಲಿಲ್ಲ. ಚುನಾವಣೆಯನ್ನು ಬಿಜೆಪಿ ಸಂಘಟಿತವಾಗಿ ಎದುರಿಸಲಿಲ್ಲ. ಆದರೆ, ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ಮಗನ ಗೆಲುವಿಗೆ ಅವಿರತ ಶ್ರಮಿಸಿದರು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸಿದರು. ಇದರಿಂದಾಗಿ ಸಾಗರ್ ಖಂಡ್ರೆ ಸುಲಭವಾಗಿ ಗೆಲುವಿನ ದಡ ಸೇರಿಸಿದರು. ಖೂಬಾ ಯಾವ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಳ್ಳಲು ಸಾಧ್ಯವಾಗಲಿಲ್ಲ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ