Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಕಿತ್ತೂರು ಚನ್ನಮ್ಮ ಮೃಗಾಲಯದಲ್ಲಿ 28 ಕೃಷ್ಣಮೃಗಗಳು ನಿಗೂಢ ಸಾವು

ಬೆಳಗಾವಿ: ಬೆಳಗಾವಿಯ ಹೊರವಲಯದಲ್ಲಿರುವ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಎರಡು ದಿನಗಳ ಹಿಂದೆ ಮೃಗಾಲಯದಲ್ಲಿ 8 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ಇಂದು ಒಂದೇ ದಿನ 20 ಕೃಷ್ಣಮೃಗಗಳು ನಿಗೂಢವಾಗಿ ಸಾವನ್ನಪ್ಪಿವೆ. ಮೃಗಾಲಯದ ವೈದ್ಯರು ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎನ್ನಲಾಗಿದೆ.

ಭೂತರಾಮನಹಟ್ಟಿಯಲ್ಲಿರುವ
ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಕೇವಲ ಎರಡು ದಿನಗಳೊಳಗೆ 28 ಜಿಂಕೆಗಳು ಅಸಹಜವಾಗಿ ಮೃತಪಟ್ಟಿರುವ ಘಟನೆ ಮೃಗಾಲಯ ಆಡಳಿತ ಸೇರಿದಂತೆ ಅರಣ್ಯ ಇಲಾಖೆಯಲ್ಲೂ ಆತಂಕ ಸೃಷ್ಟಿಸಿದೆ. ಈ ಘಟನೆಗೆ ತೀವ್ರ ವ್ಯಾಕುಲ ವ್ಯಕ್ತಪಡಿಸಿರುವ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ವಿಶೇಷ ತನಿಖೆಗೆ ಆದೇಶ ನೀಡಿದ್ದಾರೆ.

ಕೃಷ್ಣಮೃಗಗಳ ಸಾವಿಗೆ ನಿಖರ ಕಾರಣ ಇನ್ನೂ ತಿಳಿದಿಲ್ಲ. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಜಿಂಕೆಗಳು ಸಾಂಕ್ರಾಮಿಕ
ರೋಗದಿಂದ ಸಾವನ್ನಪ್ಪಿರುವ ಸಾಧ್ಯತೆ ಹೆಚ್ಚು. ಸೋಂಕು ನೀರಿನ ಮೂಲಕವೋ, ಅಥವಾ ಆಹಾರದ ಮೂಲಕವೋ, ಅಥವಾ ಮೃಗಾಲಯದ ಸುತ್ತಮುತ್ತಲೆ ಇರುವ ಬೆಕ್ಕುಮರಿಗಳು/ಇತರೆ ಸಾಕುಪ್ರಾಣಿಗಳ ಮೂಲಕವೋ ಹರಡಿದಿರುವುದನ್ನು ಶಂಕಿಸಲಾಗಿದೆ. ಮೃಗಾಲಯದಲ್ಲಿ ಇನ್ನೂ ಇರುವ ಪ್ರಾಣಿಗಳಿಗೆ ಸೋಂಕು ತಗುಲದಂತೆ ಕಠಿಣ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

ಸಚಿವ ಖಂಡ್ರೆ ಅವರು ತಕ್ಷಣವೇ ಪಶುವೈದ್ಯರು, ಅರಣ್ಯ ತಜ್ಞರು ಹಾಗೂ ವನ್ಯಜೀವಿ ಆರೋಗ್ಯ ವಿಭಾಗದ ಅಧಿಕಾರಿಗಳು ಇವರನ್ನೊಳಗೊಂಡ ವಿಶೇಷ ಸಮಿತಿ ರಚಿಸಲು ಸೂಚನೆ ನೀಡಿದ್ದಾರೆ.

ಈ ಸಮಿತಿ, ಜಿಂಕೆಗಳ ಸಾವಿನ ಕಾರಣ, ಮೃಗಾಲಯದ ನೀರಿನ ಗುಣಮಟ್ಟ, ಆಹಾರದ ಗುಣಮಟ್ಟ, ಸಿಬ್ಬಂದಿಯ ಅಲಕ್ಷ್ಯ ಉಂಟಾಗಿದೆಯೇ? ಎಂಬುದರ ಬಗ್ಗೆ ಸಂಪೂರ್ಣ ವರದಿ ನೀಡಲಿದೆ.

ಗುರುವಾರ 8 ಕೃಷ್ಣಮೃಗ ಮೃತಪಟ್ಟಿದ್ದವು. ಶನಿವಾರ 20 ಮೃತಪಟ್ಟಿವೆ. 38 ಕೃಷ್ಣಮೃಗ ಇದ್ದವು. 4ರಿಂದ 6 ವರ್ಷ ವಯಸ್ಸಿನ ಪ್ರಾಣಿಗಳು ಯಾವುದೋ ಸೋಂಕಿನಿಂದ ಮೃತಪಟ್ಟಿರುವ ಶಂಕೆ ಇದ್ದು, ತನಿಖೆ ಮಾಡುತ್ತಿದ್ದೇವೆ' ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಾಗರಾಜ ಬಾಳೆಹೊಸೂರ ಸುದ್ದಿಗಾರರಿಗೆ ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ