Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಾಜಿ ಬಸ್ ಚಾಲಕನ ಮನೆಯಲ್ಲಿ ₹28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ….!

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸರ್ಕಾರಿ ಬಸ್ ಚಾಲಕನಾಗಿದ್ದು, ನಂತರ ಕಲ್ಲು ವ್ಯಾಪಾರ ನಡೆಸುತ್ತಿದ್ದ ವ್ಯಕ್ತಿಯೊಬ್ಬರ ನಿವಾಸದಲ್ಲಿ ಪೊಲೀಸರು ನಡೆಸಿದ ಶೋಧ ಕಾರ್ಯಾಚರಣೆಯ ವೇಳೆ 28.5 ಕೋಟಿ ರೂ.ಗಳಿಗೂ ಹೆಚ್ಚು ನಗದು ಮತ್ತು 15 ಕಿಲೋಗ್ರಾಂಗಳಷ್ಟು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.
ನಗದು ಎಣಿಸಲು ಬಳಸಿದ ಐದು ಹಣ ಎಣಿಕೆ ಯಂತ್ರಗಳು ಕಾರ್ಯನಿರ್ವಹಿಸಲು ಸಾಧ್ಯವಾಗದಷ್ಟು ಪ್ರಮಾಣದಲ್ಲಿ ಹಣ ಪತ್ತೆಯಾಗಿರುವುದು ಪ್ರಕರಣದ ಗಂಭೀರತೆಯನ್ನು ತೋರಿಸುತ್ತದೆ. ಪೊಲೀಸರು ಬಿರ್ಭೂಮ್ ಜಿಲ್ಲೆಯ ಮೊಹಮ್ಮದ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಿನಾರ್ ಮಂಡಲ್ ಎಂಬಾತನ ನಿವಾಸದ ಮೇಲೆ ಬುಧವಾರ ರಾತ್ರಿ ದಾಳಿ ನಡೆಸಿದ್ದರು. ಆರಂಭದಲ್ಲಿ ಸುಮಾರು ₹5.5 ಕೋಟಿ ನಗದು ಪತ್ತೆಯಾಗಿತ್ತು. ಆದರೆ ಗುರುವಾರ ಬೆಳಗ್ಗಿನ ವೇಳೆಗೆ ನಗದು ಮೊತ್ತ ₹28 ಕೋಟಿಗೂ ಅಧಿಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರ ಜೊತೆಗೆ ಸುಮಾರು ₹21 ಕೋಟಿ ಮೌಲ್ಯದ 15 ಕೆಜಿ ಚಿನ್ನವನ್ನೂ ವಶಪಡಿಸಿಕೊಳ್ಳಲಾಗಿದೆ. ಇನ್ನೂ ಎಣಿಕೆ ಮುಂದುವರಿದಿದೆ ಎನ್ನಲಾಗಿದೆ.

ಪೊಲೀಸರು ವಶಪಡಿಸಿಕೊಂಡ ನಗದನ್ನು ಸಾಗಿಸಲು ಸುಮಾರು 35 ಚೀಲಗಳನ್ನು ಬಳಸಲಾಗಿತ್ತು. ಅಲ್ಲದೆ, ಈ ಅಪಾರ ಪ್ರಮಾಣದ ಹಣವನ್ನ ಎಣಿಸಲು 5 ನಗದು ಎಣಿಕೆ ಯಂತ್ರಗಳನ್ನೂ ಪೊಲೀಸರು ತರಿಸಬೇಕಾಯಿತು. ಜೊತೆಗೆ, ವಶಕ್ಕೆ ಪಡೆಯಲಾದ ನಗದನ್ನು ಸುರಕ್ಷಿತವಾಗಿ ಸಂಗ್ರಹಿಸಿಡಲು 5 ದೊಡ್ಡ ಟಿನ್ ಟ್ರಂಕ್‌ಗಳನ್ನು ತರಲಾಗಿತ್ತು ಎಂದು ವರದಿಯಾಗಿದೆ.
ದಾಳಿಯ ಬಳಿಕ ಮಿನಾರ್ ಮಂಡಲನನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ, ವಶಪಡಿಸಿಕೊಳ್ಳಲಾದ ನಗದು ಮತ್ತು ಚಿನ್ನ ತನ್ನ ಸಂಬಂಧಿಕ ಟಿಲ್ಲು ಮಂಡಲ್ ಹಾಗೂ ಆತ ನಡೆಸುತ್ತಿದ್ದ ಎನ್ನಲಾದ ಅಕ್ರಮ ಸಿಂಡಿಕೇಟ್‌ಗೆ ಸೇರಿದ್ದು ಎಂದು ಮಿನಾರ್ ಮಂಡಲ್ ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮಿನಾರ್ ಮಂಡಲ್ ಮೂಲತಃ ಬಸ್ ಚಾಲಕನಾಗಿದ್ದು, ಟಿಲ್ಲು ಮಂಡಲ್ ಈತನ ಸಂಬಂಧಿಕ ಎಂದು ಹೇಳಲಾಗಿದೆ. ಟಿಲ್ಲು ಮಂಡಲ್ ಕಲ್ಲು ವ್ಯಾಪಾರಿಯಾಗಿದ್ದಾನೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಮಿನಾರ್ ಮಂಡಲ್ ಕಲ್ಲು ವ್ಯಾಪಾರಕ್ಕೂ ಸಂಬಂಧ ಹೊಂದಿದ್ದು, ಟಿಲ್ಲು ಮಂಡಲ್‌ಗೆ ಸೇರಿದ ಕಲ್ಲು ಗಣಿಗಳು ಹಾಗೂ ಕ್ರಷರ್ ಘಟಕಗಳೊಂದಿಗೆ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಇಷ್ಟೊಂದು ಪ್ರಮಾಣದ ನಗದು ಹೇಗೆ ಸಂಗ್ರಹವಾಯಿತು ಹಾಗೂ ಅದರ ಮೂಲವೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಹಲವು ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ದೊಡ್ಡ ಪ್ರಮಾಣದ ಪೊಲೀಸ್ ಪಡೆ ಭಾಗವಹಿಸಿತ್ತು. ಆದರೆ ದಾಳಿಯ ನಿಖರ ಕಾರಣವೇನು ಅಥವಾ ಅಕ್ರಮ ಹಣಕಾಸು ವ್ಯವಹಾರಗಳು ಅಥವಾ ಇತರೆ ಕಾನೂನುಬಾಹಿರ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣವೇ ಎಂಬುದನ್ನು ಪೊಲೀಸರು ಇನ್ನೂ ಅಧಿಕೃತವಾಗಿ ಬಹಿರಂಗಪಡಿಸಿಲ್ಲ.

“ಭ್ರಷ್ಟಾಚಾರದ ವಿರುದ್ಧ ಶೂನ್ಯ ಸಹಿಷ್ಣುತೆ” – ಸುವೇಂದು ಅಧಿಕಾರಿ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಬುಧವಾರ ರಾಜ್ಯ ಸರ್ಕಾರದ ಭ್ರಷ್ಟಾಚಾರ ವಿರೋಧಿ ಕಾರ್ಯಾಚರಣೆ ಮುಂದುವರಿಯಲಿದ್ದು, “ಭ್ರಷ್ಟಾಚಾರದ ವಿರುದ್ಧ ಶೂನ್ಯ ಸಹಿಷ್ಣುತೆ” ನೀತಿಯನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುವುದು ಎಂದು ಹೇಳಿದ್ದಾರೆ.
ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, “ಮಾಹಿತಿ ಆಧಾರಿತ ನಿಖರ ಕಾರ್ಯಾಚರಣೆಯಲ್ಲಿ ಬಿರ್ಭೂಮ್ ಪೊಲೀಸರು ಮೊಹಮ್ಮದ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮರಳು ಮಾಫಿಯಾ ಟಿಲ್ಲು ಮಂಡಲ್ ಅಲಿಯಾಸ್ ಮೊಹಮ್ಮದ್ ನಜೀಬುದ್ದೀನ್ ಅಡಗಿದ್ದ ಸ್ಥಳದ ಮೇಲೆ ದಾಳಿ ನಡೆಸಿದ್ದಾರೆ. ಇದುವರೆಗೆ ₹5.5 ಕೋಟಿ ನಗದು ಹಾಗೂ 15 ಕೆಜಿ ಚಿನ್ನ ಪತ್ತೆಯಾಗಿದ್ದು, ನಗದು ಎಣಿಕೆ ಇನ್ನೂ ಮುಂದುವರಿದಿದೆ” ಎಂದು ತಿಳಿಸಿದ್ದಾರೆ.

“ಭ್ರಷ್ಟಾಚಾರ ವಿರುದ್ಧದ ನಮ್ಮ ಸರ್ಕಾರದ ಕಾರ್ಯಾಚರಣೆ ನಿರಂತರವಾಗಿ ಮುಂದುವರಿಯಲಿದೆ. ಸಾರ್ವಜನಿಕ ಸಂಪತ್ತನ್ನು ದುರುಪಯೋಗಪಡಿಸಿಕೊಂಡು, ಹಿಂದಿನ ಆಡಳಿತ ಪಕ್ಷದ ಪ್ರಭಾವದಿಂದ ಅಕ್ರಮ ಆಸ್ತಿ ಸಂಪಾದಿಸಿರುವ ಯಾರನ್ನೂ ಬಿಡುವುದಿಲ್ಲ. ಜನರ ಸಂಪತ್ತನ್ನು ಲೂಟಿ ಮಾಡಿದವರು ಕಾನೂನಿನ ಸಂಪೂರ್ಣ ಶಕ್ತಿಯನ್ನು ಎದುರಿಸಬೇಕಾಗುತ್ತದೆ. ಮಾಫಿಯಾ ಜಾಲಗಳ ವಿರುದ್ಧದ ಕಾರ್ಯಾಚರಣೆ ಇನ್ನಷ್ಟು ತೀವ್ರಗೊಳ್ಳಲಿದೆ” ಎಂದು ಅವರು ಹೇಳಿದ್ದಾರೆ.

ಸಾರಿಗೆ ಇಲಾಖೆಯ ಮಾಜಿ ಉದ್ಯೋಗಿ
ಮೂಲಗಳ ಪ್ರಕಾರ, ಮಿನಾರ್ ಮಂಡಲ್ ಹಿಂದೆ ರಾಜ್ಯ ಸಾರಿಗೆ ಇಲಾಖೆಯಲ್ಲಿ ಉದ್ಯೋಗಿಯಾಗಿದ್ದು, ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ನಂತರ ಕಲ್ಲು ವ್ಯಾಪಾರಕ್ಕೆ ಪ್ರವೇಶಿಸಿದ್ದ. ಆತ ಇಷ್ಟೊಂದು ದೊಡ್ಡ ಪ್ರಮಾಣದ ಆಸ್ತಿಯನ್ನು ಹೇಗೆ ಸಂಪಾದಿಸಿದ ಹಾಗೂ ಆದಾಯದ ಮೂಲವೇನು ಎಂಬುದನ್ನು ತನಿಖಾ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಂಗ್ಲಾದೇಶದ ಹೆಸರಲ್ಲಿ ವಿದೇಶಿ ಅಡಕೆ ಅಕ್ರಮ ಆಮದು ಪತ್ತೆ ; ₹2500 ಕೋಟಿ ನಷ್ಟದ ಶಂಕೆ : ನಮ್ಮ ಬೆಳೆಗಾರರ ಮೇಲೆ ಪರಿಣಾಮ ಏನು..?ಅಮೆರಿಕ ಸೈನಿಕನನ್ನು ಕೊಂದ್ರೆ ಅಥವಾ ಸೆರೆ ಹಿಡಿದ್ರೆ 30 ಸಾವಿರ ಡಾಲರ್ ಬಹುಮಾನ : ಮಹಿಳೆಯರಿಗೆ ದುಪ್ಪಟ್ಟು ಹಣ; ಇರಾನ್‌ ಘೋಷಣೆನಾಲ್ಸಾರ್‌ ನಂತರ ಬೆಂಗಳೂರಿನ ಪ್ರತಿಷ್ಠಿತ ಕಾನೂನು ಕಾಲೇಜಿನಿಂದಲೂ ಘಟಿಕೋತ್ಸವಕ್ಕೆ ಸಿಜೆಐ ಆಹ್ವಾನಕ್ಕೆ ವಿರೋಧದೇವಸ್ಥಾನದಲ್ಲಿ ಕಾಲ್ತುಳಿತ : 7 ಮಂದಿ ಸಾವು, ಹಲವರಿಗೆ ಗಾಯವಂದೇ ಮಾತರಂಗೆ ಅಪಮಾನ ಆರೋಪ ; ಸೋನಿಯಾ ಗಾಂಧಿ ವಿರುದ್ಧ ದೂರುಒಳಚರಂಡಿ ಕಾಮಗಾರಿ ವೇಳೆ 18 ವರ್ಷದ ಕಾರ್ಮಿಕನಿಗೆ ಸಿಕ್ಕಿತು 98 ಕೋಟಿ ರೂ. ಮೌಲ್ಯದ ನಿಧಿ….!ಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನಕನ್ನಡ ಸಾಹಿತ್ಯ ಕಣಜವನ್ನು ಶ್ರೀಮಂತಗೊಳಿಸಿದವರು ಡಾ. ಸರಜೂ ಕಾಟ್ಕರ್ : ಡಾ. ಬಸವರಾಜ ಜಗಜಂಪಿಮೇಕೆ ಬೇಟೆಗೆ ಮಾಂಸದ ಅಂಗಡಿಗೆ ನುಗ್ಗಿದ ಹೆಬ್ಬಾವು; ಕುತ್ತಿಗೆಗೆ ಸುತ್ತಿಕೊಂಡು ಆಟವಾಡಿದ ಕುಡುಕ!