Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗುಪ್ತಾಂಗ ಪ್ರದರ್ಶಿಸಿದ ಆರೋಪಿತನಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

ಬೆಳಗಾವಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಎಸಗಿದ ಆರೋಪಿತನಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಇಲ್ಲಿನ ಪೋಕ್ಸೊ ನ್ಯಾಯಾಲಯ ತೀರ್ಪು ಹೊರಡಿಸಿದೆ.

ಗಣೇಶಪುರ ಲಕ್ಷ್ಮೀನಗರದ ಸಿಂಡಿಕೇಟ್ ಬ್ಯಾಂಕ್ ಕಾಲೋನಿ ಸಮೀಪದ
ಸಚಿನ್ ಕಾಕತ್ಕರ್(30) ಶಿಕ್ಷೆಗೊಳಗಾದ ಆರೋಪಿ.
ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು.

ಫಿರ್ಯಾದಿದಾರರ ಮಗಳು ನೊಂದ ಬಾಲಕಿ. ಇವಳು ಅಪ್ರಾಪ್ತ ವಯಸ್ಸಿನವಳು ಎಂದು ಗೊತ್ತಿದರೂ ಆರೋಪಿತ 08-03-2022 ರಂದು ಬಾಲಕಿಗೆ ತನ್ನ ಪ್ಯಾಂಟಿನ ಜೀಪ್ ತೆಗೆದು ಗುಪ್ತಾಂಗ ಪ್ರದರ್ಶಿಸಿ ಅಶ್ಲೀಲವಾಗಿ ವರ್ತಿಸಿದ್ದ. ನಂತರ ಆರೋಪಿತ ಫಿರ್ಯಾದಿ ಹಾಗೂ ಅವರ ಮನೆಯವರಿಗೆ ಅವಾಚ್ಯವಾಗಿ ಬೈದು ಜೀವ ಬೆದರಿಕೆ ಹಾಕಿದ ಅಪರಾಧಕ್ಕೆ ದಾಖಲಾಧಿಕಾರಿ ಎಸ್.ಎಚ್. ಮುಲ್ಲಾ ಪ್ರಕರಣ ದಾಖಲಿಸಿಕೊಂಡಿದ್ದರು. ಮುಂದಿನ ಕ್ರಮವನ್ನು ತನಿಖಾಧಿಕಾರಿ ಪಿಎಸ್ಐ ಎಸ್. ಎನ್ .ಬಸ್ವಾ ಕೈಗೊಂಡು ತನಿಖೆ ಮಾಡಿ ಪ್ರಕರಣವನ್ನು ಮಾನ್ಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಶೇಷ ಶೀಘ್ರಗತಿ ಪೋಕ್ಲೋ ನ್ಯಾಯಾಲಯ-01 ಬೆಳಗಾವಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ್ದರು. ಮಾನ್ಯ ನ್ಯಾಯಾಧೀಶರಾದ ಸಿ.ಎಂ.ಪುಷ್ಪಲತಾ ಪ್ರಕರಣದ ವಿಚಾರಣೆ ಮಾಡಿ, ಒಟ್ಟು 7 ಸಾಕ್ಷಿಗಳ ವಿಚಾರಣೆ ಮೇಲಿಂದ ಹಾಗೂ, 13 ದಾಖಲೆಗಳು, ಆಧಾರದ ಮೇಲಿಂದ ಆರೋಪಿ ಮೇಲಿನ ಆರೋಪಣೆಗಳು ಸಾಬೀತಾಗಿವೆ ಎಂದು ತೀರ್ಪು ನೀಡಿ, ಆರೋಪಿತನಿಗೆ ಐಪಿಸಿ ಕಲಂ 354(ಎ) ಪ್ರಕಾರ 3 ವರ್ಷಗಳ ಕಾರಾಗೃಹ ಶಿಕ್ಷೆ ದಂಡ ರೂ 10,000/-ದಂಡದ ಮೊತ್ತ ತುಂಬಲು ತಪ್ಪಿದಲ್ಲಿ 6 ತಿಂಗಳ ಕಾರಾಗೃಹ ಶಿಕ್ಷೆ ಮತ್ತು ಪೋಕ್ಸೊ ಕಲಂ 12 ರ ಪ್ರಕಾರ 3 ವರ್ಷ ಕಾರಾಗೃಹ ಶಿಕ್ಷೆ ದಂಡ 10,000/- ಮತ್ತು ದಂಡದ ಮೊತ್ತ ತುಂಬಲು ತಪ್ಪಿದಲ್ಲಿ 6 ತಿಂಗಳ ಶಿಕ್ಷೆ ಮತ್ತು ಮಾನ್ಯ ನ್ಯಾಯಾಲಯವ ತೀರ್ಪು ನೀಡಿದ್ದು ಹಾಗೂ ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ರೂಪಾಯಿ 1 ಲಕ್ಷಗಳ ಪರಿಹಾರ ಧನವನ್ನು ಪಡೆಯಲು ನ್ಯಾಯಾಲಯ ಆದೇಶಿಸಿದೆ.

ಪರಿಹಾರ ಹಣವನ್ನು ರಾಷ್ಟ್ರೀಕೃತ ಬ್ಯಾಂಕಿನಲ್ಲಿ 05 ವರ್ಷಗಳವರೆಗೆ ಮುದ್ದತ್ ಠೇವಣಿಯಾಗಿ ಇಡಲು ಮಾನ್ಯ ನ್ಯಾಯಾಲಯ ಆದೇಶ ಮಾಡಿರುತ್ತಾರೆ. ಪ್ರಕರಣದಲ್ಲಿ ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಎಲ್. ವಿ ಪಾಟೀಲ ಪ್ರಕರಣವನ್ನು ನಡೆಸಿ ಹಾಗೂ ವಾದ ಮಂಡಿಸಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ