Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಯುವನಿಧಿ ಯೋಜನೆಗೆ 32 ಸಾವಿರ ಅರ್ಜಿ ಸಲ್ಲಿಕೆ : ಬೆಳಗಾವಿ, ಬೆಂಗಳೂರಲ್ಲಿ ಹೆಚ್ಚು

 

ಬೆಂಗಳೂರು :
ರಾಜ್ಯ ಸರಕಾರದ ಅತ್ಯಂತ ಮಹತ್ವಾಕಾಂಕ್ಷಿ ಯುವ ನಿಧಿ ಯೋಜನೆ ಕೆಲ ದಿನಗಳಲ್ಲೇ ಸಾಕಾರವಾಗಲಿದೆ. ಈ ಯೋಜನೆಗೆ ಸಂಬಂಧಿಸಿ ವಿದ್ಯಾವಂತ ನಿರುದ್ಯೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿರುವುದು ವಿಶೇಷ. ಯೋಜನೆಗೆ ಸಂಬಂಧಿಸಿ ಯುವ ಸಮುದಾಯ ಅತ್ಯಂತ ಆಸಕ್ತಿಯಿಂದ ಅರ್ಜಿ ಸಲ್ಲಿಗೆ ಮುಂದಾಗಿದ್ದು, ಸರಕಾರದ ಯೋಜನೆಯ ಸದುಪಯೋಗ ಪಡೆಯಲು ಮುಂದಾಗಿರುವುದು ಗಮನಾರ್ಹ ಬೆಳವಣಿಗೆಯಾಗಿದೆ.

ಕರ್ನಾಟಕ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ನಿರುದ್ಯೋಗಿ ಪದವೀಧರರು ಹಾಗೂ ಡಿಪ್ಲೊಮಾ ಪಾಸಾದವರಿಗೆ ಭತ್ಯೆ ನೀಡುವ “ಯುವನಿಧಿ ಯೋಜನೆ” ಚಾಲನೆ ಸಿಕ್ಕಿದ್ದು, ಅರ್ಜಿಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿವೆ. ಆರಂಭವಾದ ಸುಮಾರು 10 ದಿನಗಳಲ್ಲಿ ಈವರೆಗೆ ಒಟ್ಟು 32,184 ಪದವೀಧರರು ಅರ್ಜಿ ಸಲ್ಲಿಸಿದ್ದಾರೆ.

ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಜನವರಿ 12ರಂದು ಶಿವಮೊಗ್ಗದಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಭತ್ಯೆ ಜಮಾ ಮಾಡುವುದಕ್ಕೆ ಚಾಲನೆ ನೀಡಲಾಗುತ್ತದೆ.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಂಚಿಕೊಂಡಿರುವ ಅಂಕಿಅಂಶಗಳ ಪ್ರಕಾರ, ಬೆಳಗಾವಿ ಮತ್ತು ಬೆಂಗಳೂರು ನಗರ ಜಿಲ್ಲೆಗಳು ಅತಿ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ.

ಬೆಳಗಾವಿಯಲ್ಲಿ 3,900 ಅರ್ಜಿಗಳು ಸಲ್ಲಿಕೆಯಾಗಿದ್ದು, ಬೆಂಗಳೂರು ನಗರದಲ್ಲಿ 2,853 ಅರ್ಜಿಗಳು ಸಲ್ಲಿಕೆಯಾಗಿವೆ. ಮೂರನೇ ಅತಿ ಹೆಚ್ಚು ಅರ್ಜಿ ಸಲ್ಲಿಕೆ ಬಾಗಲಕೋಟೆ 1,943, ನಂತರದ ಸ್ಥಾನದಲ್ಲಿ ವಿಜಯಪುರ 1,741 ಮತ್ತು ರಾಯಚೂರು 1,714 ಜಿಲ್ಲೆಗಳಿವೆ. ಉಡುಪಿ 236, ಕೊಡಗು 120, ಚಾಮರಾಜನಗರ 237 ಮತ್ತು ರಾಮನಗರ ಜಿಲ್ಲೆಯಲ್ಲಿ 329 ಅರ್ಜಿಗಳು ಸಲ್ಲಿಕೆಯಾಗಿವೆ.
ರಾಜ್ಯ ಸರ್ಕಾರವು ಸುಮಾರು 5 ಲಕ್ಷ ಅಭ್ಯರ್ಥಿಗಳು ಯುವನಿಧಿ ಪ್ರೋತ್ಸಾಹಧನದ ಸದುಪಯೋಗ ಪಡೆಯುತ್ತಾರೆ ಎಂದು ಮಾಹಿತಿ ನೀಡಿತ್ತು. ಯುವನಿಧಿಗೆ ಅರ್ಜಿ ಸಲ್ಲಿಸಿದ ದಿನಾಂಕದಿಂದ ಉದ್ಯೋಗ ಪಡೆಯುವವರೆಗೆ ಮಾತ್ರ ಅಥವಾ 2 ವರ್ಷ ಗರಿಷ್ಠ ಅವಧಿಯ ವರೆಗೆ ಮಾತ್ರ ಈ ಸೌಲಭ್ಯ ನೀಡಲಾಗುತ್ತದೆ. ಈವರೆಗೆ ಶೇ 6%ರಷ್ಟು ಅರ್ಹ ಫಲಾನುಭವಿಗಳು ಮಾತ್ರ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ