Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಮಳೆ ; ಮುನ್ಸೂಚನೆ

ಬೆಂಗಳೂರು: ಮೇ 4ರಿಂದ 9ರ ವರೆಗೆ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೆಲ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ನಗರ ಸೇರಿದಂತೆ 23 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಅದು ತಿಳಿಸಿದೆ.

ಮೇ 4ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೀದರ, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲೂ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಮೇ 5ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಊಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ, ಉತ್ತರ ಒಳನಾಡಿನ ಬೀದರ, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ. ದಕ್ಷಿಣ ಒಳನಾಡಿನ ಕೊಡಗು, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಬಳ್ಳಾರಿ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾಸನ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಕೆಲವೆಡೆ ಬಿರುಗಾಳಿ ಸಹಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಮೇ 6ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುಖ್ಯಸ್ಥ ಹಾಗೂ ವಿಜ್ಞಾನಿ ಡಾ.ಎನ್‌. ಪುವಿಯರಸನ್‌ ಅವರು ತಿಳಿಸಿದ್ದಾರೆ.

Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರುನಾಡಿಗೆ ಜಲಕಂಟಕ, ಭುವಿಯೇ ತಲ್ಲಣ : ಭವಿಷ್ಯ ನುಡಿದ ಪ್ರಖ್ಯಾತ ಸ್ವಾಮೀಜಿ...!ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟ ನಿಷೇಧ...!ಕೊನೆಗೂ ಸಿಹಿಸುದ್ದಿ : ಶೀಘ್ರದಲ್ಲೇ ಮಾರ್ಚ್, ಏಪ್ರಿಲ್ ಗೃಹಲಕ್ಷ್ಮೀ ಹಣ ಜಮಾ:  ಲಕ್ಷ್ಮೀ ಹೆಬ್ಬಾಳಕರ್ ಕೊಟ್ರು ಈ ಗುಡ್ ನ್ಯೂಸ್..!ನೈರುತ್ಯ ರೇಲ್ವೆ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆಬೆಳಗಾವಿ : 12ಕ್ಕೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಸರಕಾರಿ ನೌಕರರಿಗೆ ಸಿಹಿಸುದ್ದಿ : ತುಟ್ಟಿಭತ್ಯೆ ಹೆಚ್ಚಳ ಪ್ರಜಾಪ್ರಭುತ್ವದ ತತ್ವಗಳನ್ನು ರಕ್ಷಿಸುವುದು ನಾಗರಿಕರ ಆದ್ಯ ಕರ್ತವ್ಯ : ಎ.ಎಸ್.ಪಾಶ್ಚಾಪುರೆಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಅನುಮಾನಾಸ್ಪದ ವಸ್ತುಗಳಿದ್ದ ಬ್ಯಾಗ್‌ ಪತ್ತೆತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ ಪ್ರಮಾಣ ವಚನ