Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೋವಿಡ್ ಗೆ 4 ವರ್ಷ : ಮತ್ತೊಂದು ಸಾಂಕ್ರಾಮಿಕ ರೋಗ ಸ್ಫೋಟಗೊಳ್ಳುವ ಸಾಧ್ಯತೆ ?

ಲಂಡನ್: ಕೋವಿಡ್ ಸಾಂಕ್ರಾಮಿಕ ರೋಗ ಸ್ಫೋಟಗೊಂಡು ಇದೀಗ 4 ವರ್ಷಗಳು ಉರುಳಿದೆ. ಇದರ ನಡುವೆ ಹಲವು ಲಾಕ್‌ಡೌನ್, ಸಾವು ನೋವು ಜಗತ್ತನ್ನೇ ತಲ್ಲಣಗೊಳಿಸಿತು. ಸದ್ಯ ಕೋವಿಡ್ ನಿಯಂತ್ರಣದಲ್ಲಿದ್ದರೂ ಅದರ ಪರಿಣಾಮ ಮಾತ್ರ ದಿನದಿಂದ ದಿನಕ್ಕೆ ತಟ್ಟುತಲ್ಲೇ ಇದೆ. ಕೋವಿಡ್ ವೈರಸ್ ಆತಂಕ ದೂರವಾಗಿದೆ. ಭಾರತ ಸೇರಿದಂತೆ ಎಲ್ಲಾ ದೇಶಗಳು ಕೋವಿಡ್ ನಿಯಂತ್ರಿಸು ಮುಂದೆ ಸಾಗುತ್ತಿದೆ. ಇದರ ಬೆನ್ನಲ್ಲೇ ತಜ್ಞರು ಮಹತ್ವದ ಎಚ್ಚರಿಕೆ ನೀಡಿದ್ದಾರೆ. ಯಾವುದೇ ಸಮಯದಲ್ಲಿ ಮತ್ತೊಂದು ಸಾಂಕ್ರಾಮಿಕ ರೋಗ ಸ್ಫೋಟಗೊಳ್ಳುವ ಸಾಧ್ಯತೆ ಇದೆ ಎಂದಿದ್ದಾರೆ.

ಯುನೈಟೆಡ್ ಕಿಂಗ್ಡಮ್ ತಜ್ಞರು ಈ ಎಚ್ಚರಿಕೆ ನೀಡಿದ್ದಾರೆ. ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ವೈರಸ್ ಒಂದು ವಿಶ್ವದಲ್ಲಿ ಮತ್ತೊಂದು ಸಾಂಕ್ರಾಮಿಕ ರೋಗವನ್ನು ಹರಡುವ ಸಾಧ್ಯತೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸ್ಕೈ ನ್ಯೂಸ್ ವರದಿ ಮಾಡಿದೆ. ಮತ್ತೊಂದು ಸಾಂಕ್ರಾಮಿಕ ರೋಗ ಹತ್ತಿರದಲ್ಲೇ ಇದೆ. ಇದು ಈಗಲೇ ಅಪ್ಪಳಿಸಬಹುದು, 2 ವರ್ಷದಲ್ಲಿ ಸ್ಫೋಟಗೊಳ್ಳಬಹುದು. ಅಥವಾ 20 ವರ್ಷ ತೆಗೆದುಕೊಳ್ಳಬಹುದು. ಆದರೆ ಸಾಂಕ್ರಾಮಿಕ ರೋಗದ ಸ್ಫೋಟದ ಆತಂಕ ಹೆಚ್ಚಿದೆ ಎಂದು ಲಂಡನ್ ಕಿಂಗ್ಸ್ ಕಾಲೇಜಿನ ಸಾಂಕ್ರಾಮಿಕ ರೋಗಗಳ ಕ್ಲಿನಿಕಲ್ ಉಪನ್ಯಾಸಕಿ ಡಾ.ನಥಲಿ ಮ್ಯಾಕ್‌ಡರ್ಮೊಟ್ ಹೇಳಿದ್ದಾರೆ.

ಯಾವುದೇ ಸಮಯದಲ್ಲಿ ಈ ಸಾಂಕ್ರಾಮಿಕ ರೋಗ ಸ್ಫೋಟಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಎಚ್ಚರಿಕೆಯಿಂದ ಇರಬೇಕು. ಸಾಂಕ್ರಾಮಿಕ ರೋಗದ ಕುರಿತು ಜಾಗರೂಕರಾಗಿರಬೇಕು, ಜೊತೆಗೆ ತ್ಯಾಗಕ್ಕೂ ಸಿದ್ದರಾಗಿರಬೇಕು. ಮತ್ತೊಮ್ಮೆ ಸಾಂಕ್ರಾಮಿಕ ಅಪ್ಪಳಿಸಿದಾಗ ಸವಾಲುಗಳನ್ನು ಎದುರಿಸಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಡಾ.ನಥಲಿ ಮ್ಯಾಕ್‌ಡರ್ಮೊಟ್ ಹೇಳಿದ್ದಾರೆ.

ಹೆಚ್ಚಾಗುತ್ತಿರುವ ಜಾಗತಿಕ ತಾಪಮಾನ, ಅರಣ್ಯ ನಾಶ, ಹಸಿರು ಕೊರತೆಯಿಂದ ವೈರಸ್‌ಗಳು ಸುಲಭವಾಗಿ ಪ್ರಾಣಿಗಳಿಂದ ಮನುಷ್ಯರಿಗೆ ಹರಡು ಅಪಾಯವಿದೆ. ಅಮೆಜಾನ್ ಹಾಗೂ ಆಫ್ರಿಕಾದ ಹಲವು ಭಾಗದಲ್ಲಿ ಮರಗಳನ್ನು ಕತ್ತರಿಸಲಾಗಿದೆ. ಇದೇ ರೀತಿ ಹಲವು ಕಾಡುಗಳ ಅಂಚಿನಲ್ಲಿ ಮರಗಳನ್ನು ಕತ್ತರಿಸಲಾಗುತ್ತಿದೆ. ಗ್ರಾಮಗಳು, ಜನವಸತಿ ಕಾಡಿನ ಹತ್ತಿರಕ್ಕೆ ಪ್ರವೇಶ ಪಡೆಯುತ್ತಿದೆ. ಇದರಿಂದ ಮನುಷ್ಯರು ಪ್ರಾಣಿಗಳು, ಕೀಟಗಳು ಆವಾಸಸ್ಥಾನಗಳಿಗೆ ಹತ್ತಿರವಾಗುತ್ತಿದ್ದಾರೆ. ಇದರಿಂದ ಪ್ರಾಣಿಗಳಿಂದ ವೈರಸ್ ನೇರವಾಗಿ ಮನುಷ್ಯನ ದೇಹ ಸೇರಿಕೊಳ್ಳುವ ಸಾಧ್ಯತೆಗಳು ಹೆಚ್ಚಾಗುತ್ತಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಕಳೆದ ಕೆಲ ದಶಕಗಳಲ್ಲಿ ತಾಪಮಾನ ಪ್ರಮಾಣ ಏರಿಕೆಯಾಗಿದೆ. ಇದರಿಂದ ಸೊಳ್ಳೆ ಸೇರಿದಂತೆ ಇತರ ಕೀಟಗಳಿಂದ ಹರಡು ವೈರಸ್‌ಗಳಾದ ಡೆಂಗ್ಯೂ, ಚಿಕೂನ್‌ಗೂನ್ಯ, ಕ್ರಿಮಿಯನ್ ಕಾಂಗೋ ಹೆಮರಾಜಿಕ್ ಜ್ವರಗಳು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತದೆ. ಈ ಜ್ವರಗಳು ಯೂರೋಪ್ ಭಾಗದಲ್ಲೇ ಈ ಹಿಂದೆ ಇರಲಿಲ್ಲ. ಪರಿಸರದಲ್ಲಿ ಆಗುವ ಅಸಮತೋಲನ ನೇರವಾಗಿ ಪ್ರಾಣಿ ಸಂಕುಲಕ್ಕೆ ತಟ್ಟಲಿದೆ ಎಂದು ತಜ್ಞರು ಹೇಳಿದ್ದಾರೆ.

ಪರಿಸರದಲ್ಲಿನ ಬದಲಾವಣೆಗಳಿಂದ ಕಾಲ ಕಾಲಕ್ಕೆ, ದಶಕಗಳು, ಶತಮಾನಗಳ ಹಿಂದೆಯೂ ಇದೇ ರೀತಿಯ ಸಾಂಕ್ರಾಮಿಕ ರೋಗಗಳು ಸ್ಪೋಟಗೊಂಡಿದೆ. ಕೋವಿಡ್ ರೀತಿಯ ವೈರಸ್ ಜೀವಮಾನದಲ್ಲಿ ಒಮ್ಮೆ ಬರುವು ಅಪಯಾಕಾರಿ ವೈರಸ್ ಎಂದೇ ಕರೆಯಲಾಗುತ್ತದೆ. ಇದಕ್ಕೂ ಮೊದಲು ನಾಲ್ಕು ದಶಗಳ ಹಿಂದೆಯೂ ಇದೇ ರೀತಿಯ ಸಾಂಕ್ರಾಮಿಕ ರೋಗ ಸ್ಫೋಟದಿಂದ ಸಾವು ನೋವು ಸಂಭವಿಸಿತ್ತು. ಈ ವೇಳೆ 6 ಮಿಲಿಯನ್ ಮಂದಿ ಮೃತಪಟ್ಟಿದ್ದರು. 1981ರಲ್ಲಿ ಸ್ಫೋಟಗೊಂಡ ಏಡ್ಸ್(ಹೆಚ್ಐವಿ) ರೋಗದಿಂದ 36 ಮಿಲಿಯನ್ ಸಾವು ಸಂಭವಿಸಿದೆ. 1968ರಲ್ಲಿ ಕಾಣಿಸಿಕೊಂಡ ಹಾಂಕ್‌ಕಾಂಗ್ ಜ್ವರದಿಂದ 1 ಮಿಲಿಯನ್ ಮಂದಿ ಮೃತಪಟ್ಟಿದ್ದಾರೆ. 1918ರಲ್ಲಿ ಸ್ಪಾನಿಷ್ ಜ್ವರದಿಂದ ಬರೋಬ್ಬರಿ 50 ಮಿಲಿಯನ್ ಮಂದಿ ಮೃತಪಟ್ಟಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ