Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ತಂದೆ-ತಾಯಿ, ತಂಗಿಯನ್ನು ಕೊಂದು ಮನೆಯಲ್ಲೇ ಹೂತಿಟ್ಟಿದ್ದ ಯುವಕ

ವಿಜಯನಗರ: ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಹೆತ್ತ ತಂದೆ-ತಾಯಿ ಮತ್ತು ತಂಗಿಯನ್ನು ಕೊಲೆ ಮಾಡಿ, ಮನೆಯೊಳಗೆ ಹೂತು ಹಾಕಿರುವ ಅಮಾನುಷ ಕೃತ್ಯ ವಿಜಯನಗರ ಜಿಲ್ಲೆಯ ಕೋಟೂರು ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ದೊಡ್ಡಕಿಟ್ಟದಹಳ್ಳಿ ಮೂಲದ ಅಕ್ಷಯಕುಮಾರ ಎಂಬಾತನೇ ಈ ಪೈಶಾಚಿಕ ಕೃತ್ಯ ಎಸಗಿದ ಆರೋಪಿ. ಈತ ತನ್ನ ತಂದೆ ಭೀಮರಾಜ, ತಾಯಿ ಜಯಲಕ್ಷ್ಮಿ ಮತ್ತು ತಂಗಿ ಅಮೃತಾ ಎಂಬುವವರನ್ನು ಜನವರಿ 27 ರಂದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಕೋಟೂರಿನ ಬಾಡಿಗೆ ಮನೆಯಲ್ಲಿ ವಾಸವಿದ್ದ ಈ ಕುಟುಂಬ, ಟೈರ್ ರಿಟ್ರೇಡಿಂಗ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿತ್ತು.

ಪೊಲೀಸರ ಹಾದಿ ತಪ್ಪಿಸಲು ಯತ್ನ:
ಕೊಲೆ ಮಾಡಿದ ನಂತರ ಏನೂ ಅರಿಯದವನಂತೆ ಬೆಂಗಳೂರಿಗೆ ತೆರಳಿದ ಅಕ್ಷಯ, ಅಲ್ಲಿನ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ತನ್ನ ತಂದೆ-ತಾಯಿ ಮತ್ತು ತಂಗಿ ನಾಪತ್ತೆಯಾಗಿದ್ದಾರೆ ಎಂದು ದೂರು ನೀಡಿದ್ದ. ತನಿಖೆ ಕೈಗೆತ್ತಿಕೊಂಡ ಪೊಲೀಸರಿಗೆ ಅಕ್ಷಯನ ನಡವಳಿಕೆಯ ಮೇಲೆ ಅನುಮಾನ ಬಂದಿದೆ. ಸತತ ವಿಚಾರಣೆಗೆ ಒಳಪಡಿಸಿದಾಗ, ತಾನೇ ಮೂವರನ್ನು ಕೊಲೆ ಮಾಡಿ ಮನೆಯೊಳಗೆ ಹೂತು ಹಾಕಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP)ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ, ತನಿಖೆ ಮುಂದುವರಿದಿದೆ.

ಮೊದಲಿಗೆ ಜಯಮ್ಮ ಶವ, ಬಳಿಕ ಅಮೃತಾ ಶವ ಮತ್ತು ಕೊನೆಯಲ್ಲಿ ಭೀಮರಾಜ್ ಶವ ಇಡಲಾಗಿತ್ತು. ಭೀಮರಾಜ್‌ ಶವವನ್ನು ಇಡಲಾಗದೇ, ತೊಡೆಯ ಭಾಗವನ್ನು ಕತ್ತರಿಸಿ ತುಂಬಿಸಲಾಗಿತ್ತು. ಜನವರಿ 27ರಂದು ಈ ಕೊಲೆ ನಡೆದಿರುವ ಸಾಧ್ಯತೆ ಇದೆ’ ಎಂದರು.

ಇಬ್ಬರ ಹೆಸರು: ‘ ತಂದೆ, ತಾಯಿ, ತಂಗಿ ನಾಪತ್ತೆಯಾಗಿದ್ದಾರೆ ಎಂದು ಆರೋಪಿ ಮೊದಲಿಗೆ ದೂರು ನೀಡಿದ್ದ. ಆತನ ವರ್ತನೆಯಲ್ಲಿ ಸಂಶಯ ಬಂದ ಕಾರಣ ತಿಲಕ್‌ನಗರ ಪೊಲೀಸರು ವಿಚಾರಣೆ ನಡೆಸಿದ್ದರು. ತಿಲಕ್‌ನಗರ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಎಫ್ಐಆರ್‌ನಲ್ಲಿ ಇಬ್ಬರ ಹೆಸರು ಉಲ್ಲೇಖ ಇದೆ’ ಎಂದು ತಿಳಿಸಿದರು.

ಮರಣೋತ್ತರ ಪರೀಕ್ಷೆ ನಡೆಸಿ ಶವಗಳನ್ನು ಸಂಬಂಧಿಕರಿಗೆ ಒಪ್ಪಿಸಲಾಯಿತು. ಮತ್ತೊಂದೆಡೆ ಆರೋಪಿಯನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಬೆಂಗಳೂರಿಗೆ ಕರೆದೊಯ್ದರು.

ಹತ್ಯೆಗೆ ಹಣ ಕಾರಣ?

ಜಗಳೂರಿನಲ್ಲಿದ್ದ ಭೀಮರಾಜ್‌ ಅವರಿಗೆ ಸೇರಿದ ಆಸ್ತಿಯೊಂದನ್ನು ಈಚೆಗೆ ಮಾರಾಟ ಮಾಡಿದ್ದು, ₹1.50 ಕೋಟಿ ಹಣ ಬಂದಿತ್ತು. ಅದನ್ನು ನೀಡುವಂತೆ ಅಕ್ಷಯ್ ಕುಮಾರ್ ಕೇಳಿದ್ದ. ಆತ ದುಶ್ಚಟಗಳಿಗೆ ದಾಸನಾಗಿದ್ದರಿಂದ ಹಣ ಕೊಡಲು ಪೋಷಕರು ಒಪ್ಪಿರಲಿಲ್ಲ. ‘ಮಗಳ ಮದುವೆ, ನಮ್ಮ ಖರ್ಚಿಗೆ ಬೇಕು’ ಎಂದು ತಮ್ಮಲ್ಲೇ ಇಟ್ಟುಕೊಂಡಿದ್ದರು. ಇದರಿಂದ ಸಿಟ್ಟಿಗೆದ್ದು, ಇನ್ನೊಬ್ಬರ ನೆರವು ಪಡೆದು ಕೊಲೆ ನಡೆಸಿರಬೇಕು’ ಎಂದು ಪೊಲೀಸ್ ಮೂಲಗಳು ಹೇಳಿವೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ