Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

"ನರಗುಂದ ಬಂಡಾಯ",  "ರಾಮದುರ್ಗ ದುರಂತ"ಕ್ಕೆ 46 ವರ್ಷ ! ಘಟನಾ ಸ್ಥಳದ ವರದಿ ಮಾಡಲು ಶಿರಸಂಗಿಯಿಂದ ರಾಮದುರ್ಗಕ್ಕೆ 14 ಕಿ.ಮೀ. ನಡೆದುಕೊಂಡೇ ಹೋಗಿದ್ದೆ!!

 1980 ರ ಜಲೈ 21 ರಂದು ಅಂದಿನ ಧಾರವಾಡ ಜಿಲ್ಲೆಯ ನರಗುಂದ, ನವಲಗುಂದ

ಮತ್ತು ಜುಲೈ 22 ರಂದು ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ನಡೆದ ರೈತರ ಬಂಡಾಯಕ್ಕೆ ಈಗ 40 ವರ್ಷ ಪೂರ್ಣ.
            
ದಿ.ಗುಂಡೂರಾವ್ ಸರಕಾರ ರೈತರ ಹೊಲಗಳ ಮೇಲೆ ಹಾಕಿದ್ದ ಬೆಟರ್ ಮೆಂಟ್ ತೆರಿಗೆಯ ವಿರುದ್ಧ ಬಂಡಾಯವೆದ್ದ ರೈತರ ಚಳವಳಿಯನ್ನು ಹತ್ತಿಕ್ಕಲು ಗೋಳಿಬಾರ್ ನಡೆದಾಗ ರೈತರು ಮತ್ತು ಪೋಲೀಸರ ಸಾವು ನೋವುಗಳು ಸಂಭವಿಸಿದ್ದು ಇತಿಹಾಸದ ಕರಾಳ ಪುಟಗಳಲ್ಲಿ ಸೇರಿ ಹೋಗಿದೆ.
          
ಜುಲೈ 21 ರಂದು ನರಗುಂದದಲ್ಲಿ ರೈತರ ಮತ್ತು ಪೋಲೀಸರ ಮಧ್ಯೆ ನಡೆದ ಘರ್ಷಣೆಯಲ್ಲಿ ಎರಡೂ ಕಡೆ ಸಾವುಗಳು ಸಂಭವಿಸಿದವು.ಮಾರನೇ ದಿನದಂದು
ಜುಲೈ 22 ರಂದು ನಾನು ರೈತರ ಸಮಸ್ಯೆಗಳ ಸಂಬಂಧದ ಮಾಹಿತಿ ಕಲೆಹಾಕಲು
ಸವದತ್ತಿ ಬಳಿಯ ನವಿಲುತೀರ್ಥಕ್ಕೆ ಮುಂಜಾನೆ ಹೋದೆ.ಹನ್ನೊಂದು ಗಂಟೆಯಾಗಿತ್ತು.ರಾಮದುರ್ಗದಲ್ಲಿ ಗೋಲಿಬಾರ್ ನಡೆದು ಒಬ್ಬ ಸಾವನ್ನಪ್ಪಿದ ಸುದ್ದಿ ನವಿಲುತೀರ್ಥ ಆಣೆಕಟ್ಟಿನ ಕಚೇರಿ ತಲುಪಿತು!
          
ನಾನು ಬಸ್ ಏರಿ ಸವದತ್ತಿಗೆ ಧಾವಿಸಿದೆ. 2 ಗಂಟೆಗೆ ರಾಮದುರ್ಗ ಬಸ್ ಹಿಡಿದು ಹೊರಟೆ.ಶಿರಸಂಗಿಯಲ್ಲಿ ಬಸ್ ನಿಂತಿತು.ರಾಮದುರ್ಗ ಗೋಲಿಬಾರ್ ನಲ್ಲಿ ಒಬ್ವ ಸತ್ತಿದ್ದು ಗಾಯಗೊಂಡವರನ್ನು ಹುಬ್ಬಳ್ಳಿಯ ಕೆ ಎಮ್ ಸಿ ಆಸ್ಪತ್ರೆಗೆ  ಒಯ್ಯಲಾಗುತ್ತಿದೆ ಎಂಬ ಸುದ್ದಿ ಹಬ್ಬಿದ್ದರಿಂದ ರಾಮದುರ್ಗಕ್ಕೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.ನಾನು ಕುಳಿತಿದ್ದ ಬಸ್ ಚಾಲಕನೂ ಮುಂದೆ ಸಾಗಲಿಲ್ಲ.ಎಲ್ಲರನ್ನೂ ಇಳಿಸಿಬಿಟ್ಟ.
        
ನನಗಾದರೊ ರಾಮದುರ್ಗಕ್ಕೆ ವರದಿ ಮಾಡಲು ಹೋಗಲೇ ಬೇಕಾಗಿತ್ತು. ನಾಲ್ಕಾರು ಜನರಿಗೆ ಹುರುಪು ತುಂಬಿ ರಾಮದುರ್ಗಕ್ಕೆ ನಡೆದುಕೊಂಡೇ ಹೊರಟೆವು. ಮುಳ್ಳೂರು ಗುಡ್ಡವನ್ನು ಏರಿ , ಇಳಿದು ರಾಮದುರ್ಗ ತಲುಪಿದಾಗ ಸಂಜೆ 6 ಗಂಟೆ! ಅಲ್ಲಿಯ ಬಸ್ ನಿಲ್ದಾಣದ ಬಳಿಯ ಉಗ್ರಾಣವೊಂದರ ಲೂಟಿ ನಡೆದಾಗ ಗೋಲಿಬಾರ್ ಆಗಿತ್ತು.ಒಬ್ವ ಸತ್ತಿದ್ದ. ಬೆಳಗಾವಿಯಿಂದ ಎಸ್.ಪಿ.ಟಿ.ಮಡಿಯಾಳ ಅದೇ ತಾನೇ ಬಂದಿಳಿದಿದ್ದರು. ನನ್ನನ್ನು ನೋಡಿದ ಅವರು" ನಾನೇ ಈಗ ಬಂದಿದ್ದೇನೆ. ನೀವು ಇಷ್ಟು ಬೇಗ ಬೆಳಗಾವಿಯಿಂದ ಹೇಗೆ ಬಂದಿರಿ? ಎಂದು ಅಚ್ಚರಿಯಿಂದ ಕೇಳಿದರು. ನಡೆದುಕೊಂಡ ಬಂದಿದ್ದನ್ನು ತಿಳಿಸಿದಾಗ ಅವರಿಗೆ ಅಚ್ಚರಿ.
         
ನಾನು " ಕನ್ನಡಮ್ಮ" ದಿನಪತ್ರಿಕೆಯ ಸಂಪಾದಕ ಎಮ್.ಎಸ್.ಟೋಪಣ್ಣವರಗೆ ಫೋನ್ ಮಾಡಿ ವರದಿ ಮಾಡಬೇಕಾಗಿತ್ತು.
ರಾಮದುರ್ಗದ ನಮ್ಮ ಮನೆಯ ಸಮೀಪದಲ್ಲಿಯೇ ಇದ್ದ " ಪಾಂಡುರಂಗ" ಚಿತ್ರಮಂದಿರದ ಮಾಲಿಕರಾದ ಶರಬಣ್ಣ ಆರಿಯವರ ಮನೆಗೆ ಹೋದೆ.ಸ್ಥಿರ ದೂರವಾಣಿಯಿಂದ ಬೆಳಗಾವಿಯ ಕನ್ನಡಮ್ಮ ಕಾರ್ಯಾಲಯದ ದೂರವಾಣಿ( 23804) ಗೆ ಕರೆ ಬುಕ್ ಮಾಡಿದೆ. ಸಂಜೆ 7 ಕ್ಕೆ ಬುಕ್ ಮಾಡಿದರೆ 8 ಗಂಟೆಗೆ( ಅರ್ಜಂಟ್ ಕಾಲ್)ಸಂಪಾದಕರು ಸಿಕ್ಕರು! ಸಂಪಾದಕರಿಗೆ ಅಚ್ಚರಿ!" ನೀನು ಹೋಗಿದ್ದು ಮುನವಳ್ಳಿ ಡ್ಯಾಮಿಗೆ. ಈಗ ಸಂಜೆ ರಾಮದುರ್ಗದಿಂದ ಗೋಲಿಬಾರ್ ಸುದ್ದಿ ಕೊಡ್ತಾಯಿದ್ದಿ" ಎಂದರು!
            
ಸುದ್ದಿ ಕೊಟ್ಟೆ. ರಾಮದುರ್ಗದಲ್ಲಿ ಕರ್ಫ್ಯೂ ಇತ್ತು.ಹೊರಗಿನಿಂದ ಬಸ್ ಗಳು ಬರುವಂತಿಲ್ಲ.ಹೊರಗೆ ಹೋಗುವಂತಿಲ್ಲ.ಮರುದಿನ ಊರೆಲ್ಲ ಭಿಕೊ ಎನ್ನುತ್ತಿದೆ.ಕನ್ನಡಮ್ಮ ಪತ್ರಿಕೆ ಅಲ್ಲಿಗೆ ಬರುವದಾದರೂ ಹೇಗೆ?
          
 ಪತ್ರಿಕೆಯ ಬಂಡಲ್ ನ್ನು ಬೆಳಗಾವಿಯಿಂದ 60 ಕಿ.ಮೀ ದೂರದಲ್ಲಿರುವ, ಬಾಗಲಕೋಟೆಗೆ ಹೋಗುವ ರಾಜ್ಯ ಹೆದ್ದಾರಿಯಲ್ಲಿರುವ ಯರಗಟ್ಟಿಯವರೆಗೆ ತಲುಪಿಸಲು ಸಂಪಾದಕರಿಗೆ ತಿಳಿಸಿದೆ. ನಾನು ನನ್ನ ಚಿಕ್ಕಪ್ಪನ ಬುಲೆಟ್ ಬೈಕ್ ತೆಗೆದುಕೊಂಡು ಯರಗಟ್ಟಿಗೆ ಮುಂಜಾನೆಯೇ ಹೋದೆ. 500 ಪತ್ರಿಕೆಗಳ ಬಂಡಲ್ ತೆಗೆದುಕೊಂಡು, ಬೈಕ್ ಹಿಂಭಾಗದ ಸ್ಟ್ಯಾಂಡಿಗೆ ಕಟ್ಟಿಕೊಂಡು ರಾಮದುರ್ಗಕ್ಕೆ ಬಂದಾಗ ಮುಂಜಾನೆ 9 ಗಂಟೆ.ಊರಿಗೆ ಯಾವುದೇ ಪತ್ರಿಕೆಯು ಬರದಾದಾಗ " ಕನ್ನಡಮ್ಮ" ದ್ದೇ ಹವಾ.ಒಂದೇ ತಾಸಿನಲ್ಲಿ ಎಲ್ಲವೂ ಮಾರಾಟ!
          
ರಾಮದುರ್ಗದಿಂದ ದಿನಾಲೂ ಫೋನಿನಲ್ಲಿ ಸುದ್ದಿ ಕೊಡುವುದು.ಮರುದಿನ ಯರಗಟ್ಟಿಯಿಂದ ಬುಲೆಟ್ ಮೇಲೆ ಪತ್ರಿಕೆ ತರುವ ಈ ಸರ್ಕಸ್ ನ್ನು ಒಂದು ವಾರ ಕಾಲ ಮಾಡಿದೆ.ಜುಲೈ 21 ರ ನರಗುಂದ ಘಟನೆಯ ಸುದ್ದಿಗೆ " ನರಗುಂದ ಬಂಡಾಯ" ಎಂಬ ತಲೆಬರಹ ಕೊಟ್ಟಿದ್ದೆ( ಬ್ರಿಟಿಷರ ವಿರುದ್ಧ ಬಾಬಾಸಾಹೇಬ ನಡೆಸಿದ ಬಂಡಾಯದ ಹಿನ್ನೆಲೆಯಲ್ಲಿ). ಜುಲೈ 22 ರ ರಾಮದುರ್ಗ ಘಟನೆಗೆ" ರಾಮದುರ್ಗ ದುರಂತ"( 1939 ರ ಎಪ್ರಿಲ್ 5 ರಂದು ರಾಮದುರ್ಗದ ಜನರು  ಮಹಾರಾಜನ ವಿರುದ್ಧ ಬಂಡಾಯವೆದ್ದು ಹಿಂಸಾಚಾರ ನಡೆದಾಗ ರಾಮದುರ್ಗ ದುರಂತ ಎಂದು ಖ್ಯಾತಿ ಪಡೆದಿತ್ತು)
              
ಈ ಎರಡೂ ಘಟನೆಗಳು ಘಟಿಸಿ 2020 ರ ಜುಲೈ 21,22 ಕ್ಕೆ 40 ವರ್ಷ ಪೂರ್ಣಗೊಂಡಿವೆ.
  
( ಅಶೋಕ ಚಂದರಗಿ,ಅಧ್ಯಕ್ಷರು
 ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ
ಕ್ರಿಯಾ ಸಮಿತಿ,9620114466)

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!