Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೆಎಲ್ಇ ಶಿವಾಲಯದ 47ನೇ ವಾರ್ಷಿಕೋತ್ಸವ: ಯುಗಾದಿ ಕಾರ್ಯಕ್ರಮ

ಬೆಳಗಾವಿ : ಕೆ ಎಲ್ ಇ ವಿಶ್ವಾವಿದ್ಯಾಲಯದ ಶಿವಾಲಯ ಸಮಿತಿ ವತಿಯಿಂದ ನಗರದ ಜೆ ಎನ್ ಎಂ ಸಿ ಕ್ಯಾಂಪಸ್ ನಲ್ಲಿರುವ ಶಿವಾಲಯದ 47ನೇ ವಾರ್ಷಿಕೋತ್ಸವ ಮತ್ತು ಯುಗಾದಿ ಕಾರ್ಯಕ್ರಮವನ್ನ ಮಾರ್ಚ್ 18 ಮತ್ತು 19ರಂದು ಎರಡು ದಿನಗಳ ಕಾಲ ಭಕ್ತಿಭಾವದಿಂದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುತ್ತಿದೆ.

ಬುಧವಾರ, ಮಾರ್ಚ್ 18 ರಂದು ಸಂಜೆ 5.30ಕ್ಕೆ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಉದ್ಘಾಟನೆ ನಡೆಯಲಿದೆ. ನಾಗನೂರು ರುದ್ರಾಕ್ಷಿ ಮಠದ ಡಾ.ಶ್ರೀ ಅಲ್ಲಮ ಪ್ರಭು ಮಹಾ ಸ್ವಾಮೀಜಿ ಅವರ ಆಶೀರ್ವಚನಗಳೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಕೆ ಎಲ್ ಇ ವಿಶ್ವವಿದ್ಯಾಲಯದ ಸಂಗೀತ ಶಾಲೆಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಂದ ಸಂಗೀತರಾಧನೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ನಗರದ ಗಣ್ಯ ನಾಗರಿಕರಿಗೆ, ಕಎಲ್ ಇ ವಿಶ್ವವಿದ್ಯಾಲಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸನ್ಮಾನ ನಡೆಯಲಿವೆ.
ಗುರುವಾರ, ಮಾರ್ಚ್ 19ರಂದು ಬೆಳಗಿನ ಜಾವ ಮಹಾ ರುದ್ರಾಭಿಷೇಕ ವಿವಿಧ ಪೂಜೆಗಳು ನಡೆಯಲಿದ್ದು ಸಂಜೆ 5 ಗಂಟೆಯಿಂದ ವಿಶ್ವವಿದ್ಯಾಲಯದ ಆವರಣದ ಮತ್ತು ಸಿಬ್ಬಂದಿಗಳ ಮಕ್ಕಳಿಂದ ವಿವಿಧ ವೇಷ ಭೂಷಣ ಮತ್ತು ಭಕ್ತಿ ಗೀತೆಗಳು ನಡೆಯಲಿದೆ.

ಬೆಳಗಾವಿಯ ವಿಶಾರದಾಯ ನೃತ್ಯ ಶಾಲೆಯ ತಂಡದವರಿಂದ ನೃತ್ಯರಾಧನೆ ಕಾರ್ಯಕ್ರಮಗಳು ನಡೆಯಲಿದ್ದು ನಂತರ ಮಹಾ ಆರತಿ ಹಾಗೂ ಪ್ರಸಾದ ವಿತರಣೆ ನಡೆಯಲಿದೆ.
ಈ ಎರಡು ದಿನಗಳ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ಪ್ರಧಾನ ಅರ್ಚಕ ವೇ. ಶಂಕರಯ್ಯ ಶಾಸ್ತ್ರಿ ಹಿರೇಮಠ ಮನವಿ ಮಾಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ