Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

4ನೇ ಶನಿವಾರ ಪಾಲಕ ಸಭೆ ಕಡ್ಡಾಯ ಪಾಲಕರ ಸಭೆಯಲ್ಲಿ ಜಿಪಂ ಸಿಇಒ ರಾಹುಲ್ ಶಿಂಧೆ ಸೂಚನೆ

ಬೆಳಗಾವಿ: ಜಿಲ್ಲೆಯ ಎಲ್ಲ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಪಾಲಕರ ಸಭೆಯನ್ನು ಪ್ರತಿ ತಿಂಗಳ 4ನೇ ಶನಿವಾರ ಕಡ್ಡಾಯವಾಗಿ ನಡೆಸುವಂತೆ ಜಿಪಂ ಸಿಇಒ ರಾಹುಲ್ ಶಿಂಧೆ ಸೂಚಿಸಿದರು.

ಜೂ-22 ಇಲ್ಲಿನ ವಡಗಾವಿಯ ನಗರ ವಲಯದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪಾಲಕರ ಸಭೆಯಲ್ಲಿ ಪಾಲಕರೊಂದಿಗೆ ನಡೆದ ಸಂವಾದದಲ್ಲಿ ಅವರು ಮಾತನಾಡಿದರು.

ಮಕ್ಕಳಿಗೆ ದೈಹಿಕ ದಂಡನೆ ನೀಡದೇ ಪ್ರೀತಿಯಿಂದ ತಿದ್ದಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಪ್ರಯತ್ನಿಸಬೇಕು. ಮಕ್ಕಳ ಸುರಕ್ಷತೆಗಾಗಿ ಶಾಲೆಗಳಲ್ಲಿ ಕಾಂಪೌಂಡ್ ನ ವ್ಯವಸ್ಥೆ ಮಾಡಬೇಕು. ಸಭೆಯಲ್ಲಿ ಪಾಲಕರು ತಿಳಿಸಿದಂತೆ ವಿದ್ಯಾರ್ಥಿನಿಯರಿಗೆ ಆರೋಗ್ಯದ ಸಲುವಾಗಿ ಕಡ್ಡಾಯವಾಗಿ ಜನೌಷಧ ಕೇಂದ್ರದ ಮೂಲಕ ಶುಚಿ ಪ್ಯಾಡ್ ಗಳನ್ನು ಖರೀದಿಸಿ ಶಾಲೆಯಲ್ಲಿ ಇಡಲು ಕ್ರಮಕೈಗೊಳ್ಳಬೇಕು. ಮೊಬೈಲ್ ನ್ನು ಸುರಕ್ಷತಾ ಕ್ರಮಗಳು ಅನುಸರಿಸಿ ಶೈಕ್ಷಣಿಕ ಉದ್ದೇಶಕ್ಕಾಗಿ ಮಾತ್ರ ಬಳಸಬೇಕು. ಎಲ್ಲ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಬೆಂಚ್ ಗಳ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.

ಎಲ್ಲ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸುವಂತೆ ಪೋತ್ಸಾಹ ನೀಡಬೇಕು. ಗಡಿ ಕನ್ನಡ ಭವನ ಇನ್ನಿತರ ಸಮುದಾಯ ಭವನಗಳನ್ನು ಸದುಪಯೋಗಪಡಿಸಿಕೊಳ್ಳಿ. ಶಿಷ್ಯ ವೇತನದ ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ಸರಕಾರದ ಪ್ರೋತ್ಸಾಹಧನ ಯೋಜನೆಗಳನ್ನು ವಿದ್ಯಾರ್ಥಿಗಳಿಗೆ ಗರಿಷ್ಟ ಮಟ್ಟದ ತಲುಪಿಸಿ ಗುಣಮಟ್ಟದ ಶಿಕ್ಷಣ ಪಡೆಯಲು ಅವಕಾಶ ಮಾಡಿಕೊಡಬೇಕು ಎಂದು ನಿರ್ದೇಶನ ನೀಡಿದರು.

ಪಾಲಕರ ಆಶಯದಂತೆ ಅವಶ್ಯಕತೆ ಇರುವ ಶಾಲೆಗಳಲ್ಲಿ ಎನ್ ಸಿಸಿ ಘಟಕ ಸ್ಥಾಪಿಸುವ ನಿಟ್ಟಿನಲ್ಲಿ ಸಂಬಂಧಿಸಿದವರೊಂದಿಗೆ ಸ್ಥಳದಲ್ಲೇ ಸಂಪರ್ಕಿಸಿದ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಿದರು.

ಡಿಡಿಪಿಐ ಮೋಹನ್ ಹಂಚಾಟೆ, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಎಸ್.ಹಿರೇಮಠ, ಕ್ಷೇತ್ರ ಸಮನ್ವಯಾಧಿಕಾರಿ ಐ.ಡಿ.ಹಿರೇಮಠ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆರ್.ಸಿ.ಮುದಕನಗೌಡ ಮತ್ತಿತರರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ