Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ 6 ದಿನ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏ.12ರಿಂದ 17ರವರೆಗೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಏಪ್ರಿಲ್ 12ರಂದು ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 30-40 ಕಿ ಮೀ) ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 40-50 ಕಿ.ಮೀ) ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಏಪ್ರಿಲ್ 13ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಗದಗ, ಕೊಪ್ಪಳ ಮತ್ತು ಬೀದರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಏಪ್ರಿಲ್ 14 ರಂದು ಕರಾವಳಿ ಕರ್ನಾಟಕದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಏಪ್ರಿಲ್ 15ರಂದು ಕರಾವಳಿ ಕರ್ನಾಟಕದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳು, ಉತ್ತರ ಒಳನಾಡಿನ ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಏಪ್ರಿಲ್‌ 16ರಂದು ಕರಾವಳಿ ಕರ್ನಾಟಕದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಹಾವೇರಿ ಜಿಲ್ಲೆಯ ಕೆಲವು ಪ್ರದೇಶದಲ್ಲಿ ಹಾಗೂ ಧಾರವಾಡ, ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಏಪ್ರಿಲ್ 17 ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ