Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಒಂದೇ ಸ್ಥಳದಲ್ಲಿ 6 ಹೆಬ್ಬಾವುಗಳು ಪತ್ತೆ…!

ಕಾರವಾರ : ನಗರದ ಕಠಿಣಕೋಣ ಭಾಗದಲ್ಲಿ ಭಾನುವಾರ ಅಪರೂಪದ ಘಟನೆಯೊಂದು ನಡೆದಿದ್ದು, ಇಲ್ಲಿನ ನಿವಾಸಿಯೊಬ್ಬರ ಮನೆಯ ಆವರಣದಲ್ಲಿ ಒಟ್ಟಿಗೆ ಆರು ಹೆಬ್ಬಾವುಗಳು ಪತ್ತೆಯಾಗಿವೆ.

ವಿಜಯ ತಳೇಕರ ಎಂಬವರ ಮನೆಯ ಆವರಣದಲ್ಲಿ ಕಾಂಕ್ರೀಟ್ ಕಮಾನು ನಿರ್ಮಾಣಕ್ಕಾಗಿ ಇರಿಸಲಾಗಿದ್ದ ಕಬ್ಬಿಣದ ಸಾಮಗ್ರಿಗಳ ಮಧ್ಯೆ ಈ ಬೃಹತ್ ಹಾವುಗಳು ಅಡಗಿಕೊಂಡಿದ್ದವು. ಒಂದೇ ಕಡೆ ಇಷ್ಟೊಂದು ಸಂಖ್ಯೆಯ ಹೆಬ್ಬಾವುಗಳನ್ನು ಕಂಡ ಸ್ಥಳೀಯರು ಒಂದು ಕ್ಷಣ ಬೆಚ್ಚಿಬಿದ್ದಿದ್ದಾರೆ.
ಕೂಡಲೇ ಈ ಬಗ್ಗೆ ಅರಣ್ಯ ಇಲಾಖೆಯ ಗಸ್ತು ವನಪಾಲಕ ಹಾಗೂ ಉರಗ ರಕ್ಷಕ ಗೋಪಾಲ ನಾಯ್ಕ ಅವರಿಗೆ ಮಾಹಿತಿ ನೀಡಲಾಯಿತು.

ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅವರು, ರಾಜೇಶ ನಾಯ್ಕ ಅವರ ನೆರವಿನೊಂದಿಗೆ ಸುಮಾರು 8ರಿಂದ 12 ಅಡಿ ಉದ್ದವಿದ್ದ ಎಲ್ಲಾ ಆರು ಹೆಬ್ಬಾವುಗಳನ್ನು ಅತ್ಯಂತ ಸುರಕ್ಷಿತವಾಗಿ ಸೆರೆಹಿಡಿದಿದ್ದಾರೆ. ನಂತರ ಈ ಹಾವುಗಳನ್ನು ಯಾರಿಗೂ ತೊಂದರೆಯಾಗದಂತೆ ಕಾಡಿನ ಸುರಕ್ಷಿತ ಪ್ರದೇಶಕ್ಕೆ ಬಿಡಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಗೋಪಾಲ ನಾಯ್ಕ ಅವರು, ಬೇಸಿಗೆಯ ಆರಂಭವು ಹಾವುಗಳ ಮಿಲನ ಕ್ರಿಯೆಯ ಸಮಯವಾಗಿರುತ್ತದೆ. ಸಾಮಾನ್ಯವಾಗಿ ಈ ಅವಧಿಯಲ್ಲಿ ಹೆಣ್ಣು ಹಾವನ್ನು ಹುಡುಕುತ್ತಾ ಗಂಡು ಹಾವುಗಳು ಬರುವುದು ನೈಸರ್ಗಿಕ ಪ್ರಕ್ರಿಯೆ. ಇದೇ ಕಾರಣಕ್ಕೆ ಒಂದೇ ಕಡೆ ಇಷ್ಟೊಂದು ಸಂಖ್ಯೆಯ ಹೆಬ್ಬಾವುಗಳು ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್‌ ಅಭ್ಯರ್ಥಿಗೆ  ಕಚ್ಚಿದ ಹಾವು; ಚುನಾವಣಾ ಪ್ರಚಾರದ ಮಧ್ಯೆ ಕೇತನ್ ಭಾಟಿಕರ್ ಸಾವು..ರಾಜ್ಯದಲ್ಲಿ ಜೂನ್ 1ಕ್ಕೆ ಶಾಲೆ ಪ್ರಾರಂಭೋತ್ಸವ : ಅಂದೇ ಪೋಷಕರ ಮಹಾಸಭೆಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ3 ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!SSLC ಮರುಮೌಲ್ಯಮಾಪನ : ಜಿಲ್ಲೆಯ ವಿದ್ಯಾರ್ಥಿ ಈಗ ಇಡೀ ರಾಜ್ಯಕ್ಕೆ ಪ್ರಥಮ..!ಕಕ್ಷಿದಾರರ ಸಮಾಲೋಚನಾ ಸ್ಪರ್ಧೆ: ರಾಷ್ಟ್ರೀಯ ಕಾನೂನು ಉತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಗದಗ ಮಾನ್ವಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳುಸಾವಿರಾರು ಕೋಟಿ ಹೂಡಿಕೆ ಮಾಡಿದವರಿಗೆ ಆತಂಕ :  ICE CREAM ಮಾರುತ್ತಿದ್ದವ ಈ ಪರಿ ಬೆಳೆದದ್ದು ಹೇಗೆ ?ಕೊನೆಗೂ ಶಿವಾನಂದ ನೀಲಣ್ಣವರ ಬಂಧನ..!ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವು