Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾರು-ಲಾರಿ ನಡುವೆ ಅಪಘಾತ : ಪತಿ, ಪತ್ನಿ ಸಾವು : ಬದುಕುಳಿದ 1 ವರ್ಷದ ಮಗು

ಬೆಳಗಾವಿ : ರಸ್ತೆಯಲ್ಲಿ ನಿಂತಿದ್ದ ಕಂಟೇನರ್ ಲಾರಿಗೆ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪತಿ ಹಾಗೂ ಪತ್ನಿ ಇಬ್ಬರು ಸಾವನ್ನಪ್ಪಿದ್ದು, ಅವರ ಒಂದು ವರ್ಷದ ಮಗು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕೊಗನೊಳ್ಳಿ ಬಳಿ ಜರುಗಿದೆ.

ಅಪಘಾತದಲ್ಲಿ ಕೊಲ್ಲಾಪುರದ ಸಂಭಾಜಿ ನಗರದ ಜಿಗರ ಕಿಶೋರ ನಾಕ್ರಾನಿ ಹಾಗೂ ಪತ್ನಿ ಹೇತಿಕಾ (24) ಮೃತಪಟ್ಟಿದ್ದಾರೆ. ದಂಪತಿ ಜೊತೆ ಇದ್ದ ಮಗಳು ಒಂದು ವರ್ಷದ ವೃಷ್ಟಿ (1) ಬದುಕುಳಿದಿದ್ದಾಳೆ.

23 ರಂದು ಸಂಜೆ ಟಾಟಾ ಕಂಪನಿಯ ನೆಕ್ಲೋನ್ ಕಾರು ನಂ. ಎಂ ಎಚ್ -09 ಎಫ್. ವಿ-3877 ಇದರಲ್ಲಿ ಹುಬ್ಬಳ್ಳಿಯಿಂದ ಕೊಲ್ಲಾಪುರಕ್ಕೆಹೋಗುತ್ತಿದ್ದಾಗ ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಕೂಗನೊಳ್ಳಿ ಗ್ರಾಮ ಹದ್ದಿಯ ಚೆಕ್ ಪೋಸ್ಟ್ ಸಮೀಪದಲ್ಲಿ ರಸ್ತೆಯ ಮೇಲೆ ನಿಲ್ಲಿಸಿದ್ದ ಟಾಟಾ ಕಂಟೇನರ್ ಲಾರಿ ನಂ ಆರ್‌.ಜೆ-14 ಜಿಜಿ-9017 ಇದಕ್ಕೆ ಹಿಂಬಂದಿನಿಂದ ಹಾಯಿಸಿ ಅಪಘಾತಪಡಿಸಿದ್ದರು. ಇವರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.

ಗಾಯಾಳುಗಳನ್ನು ಕೊಲ್ಲಾಪುರದ ಅಷ್ಟೇರಾ ಆಧಾರ ಆಸ್ಪತ್ರೆಯಲ್ಲಿ ಉಪಚಾರಕ್ಕಾಗಿ ದಾಖಲಿಸಲಾಗಿತ್ತು. ಜ.24 ರ ಬೆಳಗಿನ ಜಾವ ಉಪಚಾರ ಫಲಿಸದೇ ಮೃತಪಟ್ಟರು. ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಪೊಲೀಸರ ಬೇಜವಾಬ್ದಾರಿಗೆ ಮೊಮ್ಮಗನಿಂದಲೇ ಕೊಲೆಯಾದ ಅಜ್ಜಿ..!ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಭಾರಿ ಬೆಂಕಿ ಅವಘಡ; 68 ಪ್ರಯಾಣಿಕರ ಸ್ಥಳಾಂತರವಿದೇಶಕ್ಕೆ ತೆಗೆದುಕೊಂಡು ಹೋಗಿದ್ದ ಸಾವಿರ ವರ್ಷಗಳ ಹಿಂದಿನ ತಾಮ್ರ ಶಾಸನಕ್ಕೆ ಕೊನೆಗೂ ಭಾರತಕ್ಕೆ ವಾಪಸ್..!ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್‌ ಅಭ್ಯರ್ಥಿಗೆ  ಕಚ್ಚಿದ ಹಾವು; ಚುನಾವಣಾ ಪ್ರಚಾರದ ಮಧ್ಯೆ ಕೇತನ್ ಭಾಟಿಕರ್ ಸಾವು..ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್‌ ಅಭ್ಯರ್ಥಿಗೆ  ಕಚ್ಚಿದ ಹಾವು; ಚುನಾವಣಾ ಪ್ರಚಾರದ ಮಧ್ಯೆ ಕೇತನ್ ಭಾಟಿಕರ್ ಸಾವು..ರಾಜ್ಯದಲ್ಲಿ ಜೂನ್ 1ಕ್ಕೆ ಶಾಲೆ ಪ್ರಾರಂಭೋತ್ಸವ : ಅಂದೇ ಪೋಷಕರ ಮಹಾಸಭೆಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ3 ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!SSLC ಮರುಮೌಲ್ಯಮಾಪನ : ಜಿಲ್ಲೆಯ ವಿದ್ಯಾರ್ಥಿ ಈಗ ಇಡೀ ರಾಜ್ಯಕ್ಕೆ ಪ್ರಥಮ..!ಕಕ್ಷಿದಾರರ ಸಮಾಲೋಚನಾ ಸ್ಪರ್ಧೆ: ರಾಷ್ಟ್ರೀಯ ಕಾನೂನು ಉತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಗದಗ ಮಾನ್ವಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು