Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊಳವೆ ಬಾವಿಗೆ ಬಿದ್ದ 6 ವರ್ಷದ ಬಾಲಕ

ರೇವಾ: ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಆರು ವರ್ಷದ ಬಾಲಕ ಬೋರ್‌ವೆಲ್‌ಗೆ ಬಿದ್ದ ಘಟನೆ ಸಂಭವಿಸಿದೆ.

ಉತ್ತರ ಪ್ರದೇಶದ ಗಡಿ ಸಮೀಪದ ಮಾಣಿಕಾ ಗ್ರಾಮದಲ್ಲಿ ಶುಕ್ರವಾರದಂದು ಈ ಘಟನೆ ಸಂಭವಿಸಿದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಾಲಕ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು 40 ಅಡಿ ಆಳದಲ್ಲಿ ಸಿಲುಕಿರುವ ಮಗುವನ್ನು ರಕ್ಷಿಸಲು ರಾಜ್ಯ ವಿಪತ್ತು ತುರ್ತು ನಿರ್ವಹಣಾ ಪಡೆ (ಎಸ್‌ಡಿಇಆರ್‌ಎಫ್) ತಂಡವನ್ನು ಸೇವೆಗೆ ಕರೆಯಿಸಲಾಗಿದೆ ಎಂದು ರೇವಾ ಜಿಲ್ಲೆಯ ಡಿಸಿ ಪ್ರತಿಭಾ ಪಾಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸದ್ಯ ಪೈಪ್ ಮೂಲಕ ಆಮ್ಲಜನಕವನ್ನು ಒಳಗೆ ಸರಬರಾಜು ಮಾಡಲಾಗುತ್ತಿದೆ ಮತ್ತು ಬಾಲಕನ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಸಿಸಿಟಿವಿ ಕ್ಯಾಮೆರಾವನ್ನು ಕೆಳಗಿಳಿಸಲಾಯಿತು, ಆದರೆ ಕೆಲವು ಅಡಚಣೆಗಳಿಂದ ಕ್ಯಾಮೆರಾ ಬಾಲಕನಿರುವ ಸ್ಥಳಕ್ಕೆ ತಲುಪಲು ಸಾಧ್ಯವಾಗಲಿಲ್ಲ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಸೋಂಕರ್ ಪಿಟಿಐಗೆ ತಿಳಿಸಿದ್ದಾರೆ.

ವಾರಣಾಸಿಯಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡವನ್ನು ಕರೆಸಿಕೊಳ್ಳಲಾಗಿದ್ದು, ಶೀಘ್ರದಲ್ಲೇ ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆ ನಡೆಸಲಿದೆ ಎಂದು ತಿಳಿದುಬಂದಿದೆ. ಒಂದೆಡೆ ಜಿಸಿಬಿ ಮೂಲಕ ಬಾಲಕನ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದರೆ ಇನ್ನೊಂದೆಡೆ ಸುರಿಯುತ್ತಿರುವ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎರಡು ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ಕರ್ನಾಟಕದ ವಿಜಯಪುರ ಜಿಲ್ಲೆ ಇಂಡಿ ತಾಲೂಕು ಲಚ್ಯಾಣ ಗ್ರಾಮದಲ್ಲಿ ಕೊಳವೆಬಾವಿಗೆ ಬಿದ್ದಿದ್ದ 2 ವರ್ಷದ ಸಾತ್ವಿಕ್‌ ಸಾವು ಗೆದ್ದು ಬಂದಿದ್ದ. ಇದೀಗ ಆರು ವರ್ಷದ ಈ ಬಾಲಕ ಬದುಕು ಬರಲಿ ಎಂದು ತಂದೆ-ತಾಯಿ ಸೇರಿ ಲಕ್ಷಾಂತರ ಜನರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ