Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಜನಿಸಿದ್ದ ಖ್ಯಾತ ನಟ ಶವವಾಗಿ ಪತ್ತೆ

 

ಪುಣೆ :
ಬೆಳಗಾವಿಯಲ್ಲಿ ಜನಿಸಿದ್ದ ಖ್ಯಾತ ನಟ ಶವವಾಗಿ ಪತ್ತೆಯಾಗಿದ್ದು, ಅವರ ಸಾವು ಹಲವು ಅನುಮಾನಕ್ಕೆ ಕಾರಣವಾಗಿದೆ.

ರವೀಂದ್ರ ಮಹಾಜನಿ ಅವರು ಮೃತಪಟ್ಟ ಖ್ಯಾತ ನಟ. ಅವರು 1949 ರಲ್ಲಿ ಬೆಳಗಾವಿಯಲ್ಲಿ ಜನಿಸಿದ್ದರು. ಅವರ ತಂದೆ ಹೆಚ್.ಆರ್ ಮಹಾಜನಿ ಪ್ರಸಿದ್ಧ ಪತ್ರಕರ್ತರಾಗಿದ್ದರು. 60 ರ ದಶಕದಲ್ಲಿ ಈ ಕುಟುಂಬ ಬೆಳಗಾವಿಯಿಂದ ಮುಂಬೈಗೆ ವಲಸೆ ಹೋಗಿತ್ತು.

ಮರಾಠಿ ಸಿನಿಮಾರಂಗದಲ್ಲಿ ಬೇಡಿಕೆಯ ನಟನಾಗಿ ಗುರುತಿಸಿಕೊಂಡಿರುವ ಗಶ್ಮೀರ್ ಮಹಾಜನಿ, ರವೀಂದ್ರ ಮಹಾಜನಿ ಅವರ ಪುತ್ರರಾಗಿದ್ದಾರೆ.

 

70 ಹಾಗೂ 80ರ ದಶಕದಲ್ಲಿ ರವೀಂದ್ರ ಮಹಾಜನಿ ಅವರು ಹಲವಾರು ಮರಾಠಿ ಸಿನಿಮಾಗಳಲ್ಲಿ ನಟಿಸಿದ್ದರು. ಇವುಗಳಲ್ಲಿ ಮುಂಬೈ ಚಾ ಫೌಜ್ದಾರ್, ಜುಂಜ್ ಮತ್ತು ಕಲತ್ ನಕಲತ್ ಸಿನಿಮಾಗಳು ಖ್ಯಾತಿ ಪಡೆದಿದ್ದವು

ತಮ್ಮ ಬಾಡಿಗೆ ಫ್ಲಾಟ್‌ನಲ್ಲಿ ಅವರು ಶವವಾಗಿ ಪತ್ತೆಯಾಗಿದ್ದಾರೆ. ಅವರು ಮೂರು ದಿನಗಳ ಹಿಂದೆ ಮೃತಪಟ್ಟಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರವೀಂದ್ರ ಮಹಾಜನಿ ಅವರು ತಮ್ಮ ಫ್ಲಾಟ್‌ನಲ್ಲಿ ಒಂಟಿಯಾಗಿ ವಾಸ ಮಾಡುತ್ತಿದ್ದರು. ಈ ಫ್ಲಾಟ್‌ನಲ್ಲಿ ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅವರು ಬಾಗಿಲು ಒಡೆದು ನೋಡಿದಾಗ ರವೀಂದ್ರ ಮಹಾಜನಿ ಮೃತಪಟ್ಟಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ.

ನಟನ ಮಗ ಹಲವು ದಿನಗಳಿಂದ ತಂದೆಯನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದರು ಎಂದು ತಿಳಿದುಬಂದಿದೆ. ಆದರೆ ಅವರ ಕಾಲ್​ಗೆ ಉತ್ತರ ಬಂದಿರಲಿಲ್ಲ. ನಟನ ಮೃತದೇಹ ಸಿಗುವ ಕೆಲವು ಗಂಟೆಗಳ ಮೊದಲು ಅವರ ಮಗ ತನ್ನ ಸ್ನೇಹಿತನ ಬಳಿ ತಂದೆಯ ಫ್ಲ್ಯಾಟ್​ಗೆ ಹೋಗಿ ನೋಡುವಂತೆ ಹೇಳಿದ್ದರು. ಶನಿವಾರ ತಂದೆಯ ಫ್ಲ್ಯಾಟ್​ಗೆ ಹೋಗಲು ನನ್ನ ಗೆಳೆಯ ತೀರ್ಮಾನಿಸಿದ್ದ ಎಂದು ನಟನ ಪುತ್ರ ತಿಳಿಸಿದ್ದಾರೆ.

 
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ