Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಂಕಿಗಾಹುತಿಯಾತ್ತು ಕಾರು : ಕಾರಿನಲ್ಲೇ ಬೆಂದು ಭಸ್ಮವಾದ ಖ್ಯಾತ ಉದ್ಯಮಿ

ಬೆಳಗಾವಿ: ಚಿಕ್ಕೋಡಿ ತಾಲೂಕು ಜೈನಾಪುರ ಗ್ರಾಮದ ಹೊರವಲಯದ ಸಂಕೇಶ್ವರ- ಜೇವರ್ಗಿ ರಾಜ್ಯ ಹೆದ್ದಾರಿ ಬಳಿ ಖ್ಯಾತ ಉದ್ಯಮಿಯೊಬ್ಬರ ಶವ ಕಾರಿನಲ್ಲಿ ಪತ್ತೆಯಾಗಿದೆ. ಚಿಕ್ಕೋಡಿಯ ಖ್ಯಾತ ಗ್ರಾನೈಟ್ ಉದ್ಯಮಿಯಾಗಿರುವ, ಮುಲ್ಲಾ ಪ್ಲಾಟ್ ನಿವಾಸಿ ಫೈರೋಜ್ ಬಡಗಾವಿ (40) ಅವರ ಶವ ಬುಧವಾರದಂದು ಸಂಪೂರ್ಣವಾಗಿರುವ ಭಸ್ಮವಾದ ಸ್ಥಿತಿಯಲ್ಲಿ ಕಾರಿನಲ್ಲಿ ಪತ್ತೆಯಾಗಿದೆ. ಕಾರು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು ಚಾಲಕನ ಸೀಟಿನಲ್ಲಿ ಇದ್ದ ಫೈರೋಜ್ ಬೆಂದು ಹೋಗಿದ್ದಾರೆ. ಮಂಗಳವಾರ ತಡರಾತ್ರಿ ಈ ಘಟನೆ ನಡೆದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ರಾಜ್ಯ ಹೆದ್ದಾರಿಯಲ್ಲಿ ಕಾರಿಗೆ ಬೆಂಕಿ ಹೊತ್ತಿರುವ ಯಾರೊಬ್ಬರ ಗಮನಕ್ಕೂ ಬಂದಿರಲಿಲ್ಲವೇ ಎಂಬ ಅನುಮಾನ ವ್ಯಕ್ತವಾಗಿದ್ದು, ಸಾವು ಹಲವು ವದಂತಿಗಳಿಗೆ ಕಾರಣವಾಗಿದೆ‌ ಬುಧವಾರ ಮಧ್ಯಾಹ್ನ ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕೋಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದು ಬೆಂಕಿಗೆ ಆಹುತಿಯಾದಂತೆ ಕಾಣುತ್ತಿದ್ದರೂ ಸಹಾ ಆತನ ಕುಟುಂಬದವರು ನೀಡಿರುವ ದೂರ ಆಧರಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ