Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊನೆಗೂ ಸಿಹಿ ಸುದ್ದಿ ನೀಡಿದ ಓಳ್ಳೆಯ ಹುಡುಗ..!

 

ಬೆಂಗಳೂರು :
‘ಬಿಗ್ ಬಾಸ್’ಖ್ಯಾತಿಯ ಒಳ್ಳೆಯ ಹುಡುಗ ಪ್ರಥಮ್ ತಮ್ಮ ಅಭಿಮಾನಿಗಳಿಗೆ ಮದುವೆ ಬಗ್ಗೆ ಸ್ವೀಟ್ ನ್ಯೂಸ್ ನೀಡಿದ್ದಾರೆ. ಸದ್ದಿಲ್ಲದೆ ನಟಭಯಂಕರ ಪ್ರಥಮ್ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಈ ಕುರಿತ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಪ್ರಥಮ್ ಅಂದರೆ ಫಸ್ಟ್ ನೆನಪಾಗೋದೇ ಅವರ ನಾನ್ ಸ್ಟಾಪ್ ಮಾತು. ದೊಡ್ಮನೆಯಲ್ಲಿ ತಮ್ಮ ಮಾತು, ನೇರ ನುಡಿಯಿಂದಲೇ ಫೇಮಸ್ ಆಗಿದ್ರು. ಭುವನ್, ಸಂಜನಾ, ರೇಖಾ, ಇದ್ದ ಸೀಸನ್ ನಲ್ಲಿ ಪ್ರಥಮ್ ಖಡಕ್ ಆಗಿ ಆಡಿದ್ದರು. ಬಿಗ್ ಬಾಸ್ ಸೀಸನ್ ನ ವಿನ್ನರ್ ಆಗಿ ಗೆಲುವು ಸಾಧಿಸಿದ್ರು. ಈಗ ತಮ್ಮ ಬ್ಯಾಚುಲರ್ ಲೈಫ್ ಗೆ ಪ್ರಥಮ್ ಗುಡ್ ಬೈ ಹೇಳ್ತಿದ್ದಾರೆ.

ಪ್ರಥಮ್ ಮಂಡ್ಯ ಮೂಲದ ಭಾನುಶ್ರೀ ವರಿಸಲಿದ್ದು, ಟ್ರೆಡಿಷನಲ್ ಫ್ಯಾಮಿಲಿಯ ಸಿಂಪಲ್ ಹುಡುಗಿಯನ್ನ ಪ್ರಥಮ್ ಮದುವೆಯಾಗುತ್ತಿದ್ದಾರೆ. ಕರ್ನಾಟಕದ ಆಳಿಯ ಇನ್ಮುಂದೆ ಮಂಡ್ಯದ ಆಳಿಯ. ಮಂಡ್ಯ ಮೂಲದ ಭಾನುಶ್ರೀ ಜೊತೆ ಪ್ರಥಮ್ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ನಿನ್ನೆ ಸಂಜೆ ಮಂಡ್ಯ ಪಕ್ಕದ ಹಳ್ಳಿಯಲ್ಲಿ ಎರಡೂ ಫ್ಯಾಮಿಲಿಯ ಹಿರಿಯರ ಸಮ್ಮುಖದಲ್ಲಿ ಸಿಂಪಲ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಭಾನುಶ್ರೀ ಡಿಗ್ರಿ ಮುಗಿಸಿ ಡಬಲ್ ಡಿಗ್ರಿ ಮಾಡೋಕೆ ತಯಾರಿ ನಡೆಸುತ್ತಿದ್ದಾರೆ. ಪ್ರಥಮ್ ಹಳ್ಳಿ ಹುಡುಗಿಯನ್ನು ಮದುವೆ ಆಗ್ತೀನಿ ಅಂತ ಹೇಳುತ್ತಿದ್ದರು. ಆದರಂತೆಯೇ ಬಡ ಕುಟುಂಬದ ಹುಡುಗಿಯನ್ನು ಒಳ್ಳೆಯ ಹುಡುಗ ಪ್ರಥಮ್ ಮದುವೆ ಆಗುತ್ತಿದ್ದಾರೆ.

ಪ್ರಥಮ್ ಸದ್ಯ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಸದ್ಯ ಸೈಲೆಂಟ್ ಆಗಿ ಒಳ್ಳೆಯ ಹುಡುಗ ಪ್ರಥಮ್ ಎಂಗೇಜ್ ಆಗಿದ್ದಾರೆ. ತನ್ನ ಕುಟುಂಬದವರು ಸಮ್ಮತಿಸಿದ ಹುಡುಗಿ ಜೊತೆ ಅರೆಂಜ್ ಮ್ಯಾರೇಜ್ ಆಗಲು ನಟ ರೆಡಿಯಾಗಿದ್ದಾರೆ. ಇದೀಗ ನಿಶ್ಚಿತಾರ್ಥ ನೆರವೇರಿರುವ ಬಗ್ಗೆ ಭಾವಿ ಪತ್ನಿ ಜೊತೆಗಿನ ರಿಂಗ್ ತೊಟ್ಟಿರುವ ಫೋಟೋವನ್ನ ನಟ ಶೇರ್ ಮಾಡಿದ್ದಾರೆ.

ಒಂದು ಸುಂದರ ಕ್ಷಣ. ಇವತ್ತು ನನ್ನ ಎಂಗೇಜ್ಮೆಂಟ್ ಆಯ್ತು. ಯಾವ ಆಡಂಬರ,ಸಂಭ್ರಮ,‌ ತೋರ್ಪಡಿಕೆ ಇಲ್ಲದೆ ಬಹಳ ಸರಳವಾಗಿ ಕುಟುಂಬದವರು ಮೆಚ್ಚಿದವರ ಜೊತೆಯಾದೆ. ನಾನು ತುಂಬಾ ಸರಳವಾಗಿಯೇ ಬದುಕಿದವನು,ಹಾಗೇ ಇರೋಕೆ ಇಷ್ಟ. ನನ್ನ ಎಂಗೇಜ್ಮೆಂಟ್ ದೇಶದ ದೊಡ್ಡ ಸುದ್ಧಿಯಲ್ಲ. ಆದರೆ ನನ್ನ ಇಷ್ಟಪಡುವ ಸ್ಬೇಹಿತರು ಆತ್ಮೀಯರಿಗೆ ವಿಚಾರ ಹಂಚಿಕೊಳ್ಳೋಣ ಅನ್ನೋ ಕಾರಣಕ್ಕೆ ನಿಮ್ಗೆ ತಿಳಿಸಿದ್ದೇನೆ ಅಷ್ಟೇ. ಮದುವೆ ಎಷ್ಟು ಅದ್ಧೂರಿಯಾಗಿ ಆದೆ ಅನ್ನೋದಕ್ಕಿಂತ ಎಷ್ಟು ಚೆನ್ನಾಗಿ ಬದುಕು ಕಟ್ರಿಕಿಂಡ್ವಿ ಅನ್ನೋದೇ ನಿಜವಾದ ಸಾಧನೆ. ನನಗೆ ಹಾಗಿರೋಕೆ ಇಷ್ಟ. ಹೀಗೇ ಇದ್ದು ಬಿಡ್ತೀನಿ. ಹರಸುವವರು ಅಲ್ಲಿಂದಲೇ ಹರಸಿ. ಅದೇ ಆಶೀರ್ವಾದ ಎಂದು ಪ್ರಥಮ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಬಿಗ್ ಬಾಸ್ ಪ್ರಥಮ್ ಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ