https://youtu.be/d7SeGlhvlIk
https://youtu.be/mefK5Vr7tfw
Janajeevala News Network:ಬೆಳಗಾವಿ : ಹಳೇ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಬೆಳಗಾವಿಯಲ್ಲಿಂದು ನೌಕರರು ಬೃಹತ್ ಮೆರವಣಿಗೆ ನಡೆಸಿದರು.
ಕೋಟೆ ಆವರಣದ ದುರ್ಗಾ ದೇವಿ ಮಂದಿರದಿಂದ ಆರಂಭವಾದ ಮೆರವಣಿಗೆಯಲ್ಲಿ ಸಹಸ್ರ ಸಂಖ್ಯೆಯ ನೌಕರರು ಭಾಗವಹಿಸಿ ಗಮನ ಸೆಳೆದರು.
1ಕಿಲೋಮೀಟರ್ ಗಿಂತಲೂ ಅಧಿಕ ಸಂಖ್ಯೆಯಲ್ಲಿ ನೌಕರರು ಮೆರವಣಿಗೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು .
ಸರಕಾರ ಜಾರಿಗೆ ತಂದಿರುವ ಹೊಸ ಪಿಂಚಣಿ ಯೋಜನೆಯಿಂದ ನೌಕರರಿಗೆ ಭಾರಿ ಅನ್ಯಾಯವಾಗಲಿದೆ. ಈ ಬಗ್ಗೆ ಈಗಾಗಲೇ ಹಲವು ಬಾರಿ ಪ್ರತಿಭಟನೆ ನಡೆಸಿ ಸರಕಾರದ ಗಮನ ಸೆಳೆದರೂ ಪ್ರಯೋಜನವಾಗಿಲ್ಲ. ಸರಕಾರ ನೌಕರರ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ತಕ್ಷಣ ಹೊಸ ಪಿಂಚಣಿ ನೀತಿ ಕೈಬಿಟ್ಟು ಹಳೆಯ ಪಿಂಚಣಿ ನೀತಿಯನ್ನೇ ಮತ್ತೆ ಜಾರಿಗೆ ತರುವಂತೆ ಆಗ್ರಹಿಸಿದರು.