ಬೆಳಗಾವಿ: ಹೆಂಡತಿ ಕಾಟಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಗಂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಅನಗೋಳದ ದುರ್ಗಾ ಕಾಲೋನಿಯಲ್ಲಿ ನಡೆದಿದೆ.
ತನ್ನದೇ ಕಂಪ್ಯೂಟರ್ ಶಾಪ್‌ನಲ್ಲಿ ವೈಯರ್‌ದಿಂದ ನೇಣು ಬಿಗಿದುಕೊಂಡು ಸುನೀಲ್ ಮೂಲಿಮನಿ (33) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ತನ್ನ ಸಾವಿಗೆ ಹೆಂಡತಿ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ. ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ 108 ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಾಗಿದೆ.
ನಾಲ್ಕು ವರ್ಷದ ಹಿಂದೆ ಪೂಜಾ ಎಂಬುವವರನ್ನು ಸುನೀಲ್ ಮದುವೆಯಾಗಿದ್ದರು. ಮೂರು ವರ್ಷದ ಮಗು ಇದೆ. ನನ್ನ ಸಾವಿಗೆ ನನ್ನ ಪತ್ನಿಯೇ ಕಾರಣ ಎಂದು ಸುನೀಲ್ ಡೆತ್ ನೋಟ್ ಬರೆದಿಟ್ಟಿದ್ದಾರೆ. ಸದ್ಯ ಮರಣೋತ್ತರ ಪರೀಕ್ಷೆಗೆ ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಮೃತದೇಹ ಶಿಫ್ಟ್ ಮಾಡಲಾಗಿದೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.