Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕನ್ನಡ ಪತ್ರಿಕಾ ರಂಗಕ್ಕೆ ಅಪಾರ ಹಾನಿ : ಪ್ರಕಟಣೆ ನಿಲ್ಲಿಸಿತು ಕನ್ನಡ ವಾರಪತ್ರಿಕೆ

 

‌ಬೆಂಗಳೂರು :
ಕನ್ನಡ ಓದುಗರ ಮನೆಮಾತಾಗಿದ್ದ ‘ಮಂಗಳ’ ವಾರ ಪತ್ರಿಕೆ ತನ್ನ ಪ್ರಕಟಣೆ ನಿಲ್ಲಿಸಲಿದೆ ಎಂದು ವರದಿಯಾಗಿದೆ.

ಕನ್ನಡ ಪತ್ರಿಕಾರಂಗದಲ್ಲಿ ಅನೇಕ ದಶಕಗಳಿಂದ ಗುರುತಿಸಿಕೊಂಡಿದ್ದ ಮಂಗಳ ವಾರಪತ್ರಿಕೆ ಇನ್ನುಮುಂದೆ ಪ್ರಕಟವಾಗುವುದಿಲ್ಲ.
ಈ ಕುರಿತು ಮಂಗಳ ವಾರ ಪತ್ರಿಕೆ ಸಂಪಾದಕರು ಪ್ರಕಟಣೆ ನೀಡಿದ್ದು, ಈ ವಾರ ಮಂಗಳ ವಾರಪತ್ರಿಕೆಯ ಕೊನೆಯ ಸಂಚಿಕೆ ಮುದ್ರಣಗೊಂಡಿದೆ ಎಂದು ತಿಳಿಸಿದ್ದಾರೆ.

ಸರಿ ಸುಮಾರು ನಾಲ್ಕು ದಶಕಗಳ ಕಾಲ ಕನ್ನಡಿಗರ ಮನೆ ಮಾತಾಗಿದ್ದ ಮಂಗಳ ಪತ್ರಿಕೆ ತನ್ನ ಯಾನ ನಿಲ್ಲಿಸಿರುವುದರಿಂದಾಗಿ ಅನೇಕ ಓದುಗರ ನಿರಾಸೆಗೊಂಡಿದ್ದಾರೆ.
ಕೊರೊನಾ ಹೊಡೆತ, ಡಿಜಿಟಲ್ ಮಾಧ್ಯಮಗಳು ವೇಗ ಪಡೆದುಕೊಂಡ ನಂತರವೂ. ಮೂರು ವರ್ಷಗಳ ಕಾಲ ಮಂಗಳ ವಾರಪತ್ರಿಕೆ ಮುನ್ನಡೆಸಿದ್ದೇವೆ.ಇದೀಗ ಆರ್ಥಿಕ ಸಂಕಷ್ಟ ಎದುರಾಗಿದೆ. ಹೀಗಾಗಿ ಅನಿವಾರ್ಯವಾಗಿ ಪತ್ರಿಕೆ ಮುದ್ರಣ ಸ್ಥಗಿತಗೊಳ್ಳಲಿದೆ ಎಂದು ತಿಳಿಸಲಾಗಿದೆ.
ಮಂಗಳ ಪತ್ರಿಕೆ ಓದುಗ ವಲಯದಲ್ಲಿ ವಿಶೇಷ ಸ್ಥಾನಪಡೆದುಕೊಂಡಿತ್ತು. ಆರಂಭಿಕ ಸಂಪಾದಕರಾದ ಬಾಬು ಕೃಷ್ಣಮೂರ್ತಿಯವರು ಓದುಗರ ನಾಡಿಮಿಡಿತವನ್ನು ಚೆನ್ನಾಗಿ ಅರ್ಥ ಮಾಡಿಕೊಂಡು ಅದಕ್ಕೆ ತಕ್ಕಂತೆ ವಾರಪತ್ರಿಕೆಯನ್ನು ರೂಪಿಸಿದ್ದರು. ಗ್ರಾಮೀಣ ಭಾಗದಲ್ಲಿ ಪತ್ರಿಕೆಯ ಓದು ಅಗಾಧವಾಗಿತ್ತು. ಮಕ್ಕಳಿಗಾಗಿ ಇದ್ದ ಬಾಲಮಂಗಳ ಬಹಳ ಜನಪ್ರಿಯವಾಗಿತ್ತು. ಹೆಚ್ಚಾಗಿ ಮಧ್ಯಮ ವರ್ಗದ ಜನರ ಅಭಿರುಚಿಗೆ ತಕ್ಕಂತೆ ಪತ್ರಿಕೆ ರೂಪುಗೊಳ್ಳುತ್ತಿತ್ತು. ಅನೇಕ ಬರಹಗಾರರಿಗೆ ಇದು ಮೊದಲ ಮೆಟ್ಟಿಲಾದ ಪತ್ರಿಕೆಯಾಗಿದೆ.‌ ಬದಲಾದ ಕಾಲಘಟ್ಟದಲ್ಲಿ ಆರ್ಥಿಕ ಸಂಕಷ್ಟದಿಂದಾಗಿ ಮಂಗಳ ವಾರಪತ್ರಿಕೆ ಈ ವಾರ ಕೊನೆಯ ಸಂಚಿಕೆ ಪ್ರಕಟಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ