Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಂಗೀತ ಲೋಕದ ದಿಗ್ಗಜ ಅಸ್ತಂಗತ

 
ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್ (93) ಅವರು ಮೈಸೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿ ಅನಾರೋಗ್ಯದಿಂದ ನಿಧನರಾದರು.ಕುವೆಂಪುನಗರದ ಪಂಚಮಂತ್ರ ರಸ್ತೆಯಲ್ಲಿರುವ ನಿವಾಸದಲ್ಲಿ, ತಿಂಗಳ ಹಿಂದೆ ಕುಸಿದು ಬಿದ್ದು ಅವರ ತೊಡೆ ಮೂಳೆ ಮುರಿದಿತ್ತು. ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಳ್ಳುತ್ತಿದ್ದರು.
ರಾತ್ರಿ 7.05ರ ವೇಳೆಗೆ ಮೃತಪಟ್ಟಿದ್ದು, ಕುವೆಂಪುನಗರದ ನಿವಾಸದಲ್ಲಿ ಬುಧವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ 12 ಗಂಟೆವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಅಂತ್ಯಕ್ರಿಯೆ ನಡೆಯಲಿದೆ.

ಮೈಸೂರು: ಪ್ರಖ್ಯಾತ ಸರೋದ್ ವಾದಕ ರಾಜೀವ್ ತಾರಾನಾಥ್ ಬುಧವಾರ ನಿಧನರಾದರು.

ವಿಶ್ವ ಮನ್ನಣೆ ಗಳಿಸಿದ್ದ ಸಂಗೀತಲೋಕದ ಧ್ರುವತಾರೆ ಕಳೆದ ವರ್ಷ ಮೈಸೂರು ದಸರಾ ಸಮಯದಲ್ಲಿ ಸಾಕಷ್ಟು ಸುದ್ದಿಯಾಗಿದ್ದರು. ಮೈಸೂರು ದಸರಾ ಸಮಯದಲ್ಲಿ ಕಾರ್ಯಕ್ರಮ ನೀಡಲು ತಮ್ಮಿಂದಲೇ ಸರ್ಕಾರದ ಅಧಿಕಾರಿಗಳು ಲಂಚ ಕೇಳಿದ್ದರು ಎನ್ನುವ ಆರೋಪ ಮಾಡುವ ಮೂಲಕ ರಾಜೀವ್‌ ತಾರಾನಾಥ್‌ ಸುದ್ದಿಯಾಗಿದ್ದರು. 91 ವರ್ಷದ ರಾಜೀವ್‌ ತಾರಾನಾಥ್‌ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ನಿಧನರಾಗಿದ್ದಾರೆ. ಸುಮಾರು 15 ದಿನಗಳಿಂದ ಇವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವು ಕಂಡಿದ್ದಾರೆ.

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮೇರು ಕಲಾವಿದರಾಗಿದ್ದ ರಾಜೀವ್‌ ತಾರಾನಾಥ್‌ ಸರೋದ್ ವಾದನದಲ್ಲಿ ಅಪ್ರತಿಮ ವಿದ್ವಾಂಸರು. ಸಂಗೀತ ಸೇವೆಗಾಗಿ ಪದ್ಮಶ್ರೀ, ನಾಡೋಜ ಸೇರಿದಂತೆ ಹತ್ತಾರು ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಮೈಸೂರಿನ ಕುವೆಂಪುನಗರದ ನಿವಾಸದಲ್ಲಿ ನಾಳೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ