ಬೆಳಗಾವಿ: ಕೆಎಲ್ಇ ಸಂಸ್ಥೆಯ ಲಿಂಗರಾಜ ಪಿಯು ಕಾಲೇಜಿನ ವಿದ್ಯಾರ್ಥಿನಿ ಭವ್ಯ ಸಿ.ಜೆ. ಅವರು ತುಮಕೂರಿನಲ್ಲಿ ನಡೆದ 24ನೇ ರಾಷ್ಟ್ರೀಯ ಜೂನಿಯರ್ (ಅಂಡರ್-20) ಫೆಡರೇಶನ್ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಸಾಧನೆ ಮಾಡಿದ್ದಾರೆ. ಈ ಸ್ಪರ್ಧೆಯನ್ನು ಅಥ್ಲೆಟಿಕ್ ಪೆಡ್ರೆಸ್ ಆಫ್ ಇಂಡಿಯಾ ಆಯೋಜಿಸಿತ್ತು.
ಪ್ರಸ್ತುತ ಲಿಂಗರಾಜ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಭವ್ಯ ಅವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿದೆ.
ಈ ಸಂದರ್ಭದಲ್ಲಿ ಪದವಿ ಪ್ರಾಚಾರ್ಯ ಡಾ. ಎಚ್. ಎಸ್. ಮೇಲಿನಮನಿ, ಪದವಿ ಪೂರ್ವ ಪ್ರಾಚಾರ್ಯ ಗಿರಿಜಾ ಹಿರೇಮಠ, ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಸಿ. ರಾಮಾರಾವ್ ಶುಭ ಹಾರೈಸಿದರು.
