Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಡಂಗುರ ಸಾರಿದ ವ್ಯಕ್ತಿ !

 

ದಾವಣಗೆರೆ:
ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಪಕ್ಷ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಬೆನ್ನಲ್ಲೇ ಗೋಣಿವಾಡ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತಮಟೆ ಬಾರಿಸುತ್ತ ‘ಯಾರೂ ಇನ್ಮುಂದೆ ಕರೆಂಟ್ ಬಿಲ್ ಕಟ್ಟಂಗಿಲ್ಲ’ ಎಂಬ ಸಂದೇಶ ಸಾರಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

‘ಇವತ್ತಿನಿಂದ ಯಾರೂ ಇನ್ಮುಂದೆ ಕರೆಂಟ್ ಬಿಲ್ ಕಟ್ಟಂಗಿಲ್ಲ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ‌ಆರ್ಡರ್‌ ಮಾಡಿ ಕಳುಹಿಸಿದ್ದಾರೆ’ ಎಂದು ವ್ಯಕ್ತಿಯೊಬ್ಬರು ಗೋಣಿವಾಡ ಗ್ರಾಮದಲ್ಲಿ ಸಂಚರಿಸಿ ತಮಟೆ ಬಾರಿಸುತ್ತ ಸಂದೇಶ ಸಾರಿದ್ದಾರೆ.

ತ್ವರಿತವಾಗಿ ‘ಗ್ಯಾರಂಟಿ’ ಯೋಜನೆಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿರುವ ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ನ ನಾಯಕರು ವಿದ್ಯುತ್‌ ಬಿಲ್‌ ಕಟ್ಟಬೇಡಿ ಎಂದು ಕರೆ ನೀಡಿದ ಬೆನ್ನಲ್ಲೇ ವಿದ್ಯುತ್‌ ಬಿಲ್‌ ಕಟ್ಟುವುದಕ್ಕೆ ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿರೋಧ ವ್ಯಕ್ತವಾಗುತ್ತಿದೆ.

‘ವಿಡಿಯೊ ಹರಿದಾಡಿರುವ ವಿಷಯ ಗೊತ್ತಾಗಿದೆ. ಆದರೆ ವ್ಯಕ್ತಿ ಯಾರು, ಯಾವ ಕಾರಣಕ್ಕೆ ಎಂಬುದನ್ನು ಪರಿಶೀಲಿಸಲಾಗುವುದು’ ಎಂದು ತಹಶೀಲ್ದಾರ್ ಎಂ.ಬಿ.ಅಶ್ವತ್ಥ್ ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ