Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಂಸತ್ತಿಗೆ ನುಗ್ಗಿದ ಒಬ್ಬ ಮೈಸೂರು ಮೂಲದವ, ಹಿಡಿದುಕೊಟ್ಟ ಸಂಸದರು

 

ದೆಹಲಿ :
ಸಂಸತ್ ನೊಳಕ್ಕೆ ಕೆಲವರು ನುಂಗಿದ ವೇಳೆ ಪ್ರಧಾನಿ ನರೇಂದ್ರ ಮೋದಿ ಇರಲಿಲ್ಲ. ಆದರೆ, ರಾಹುಲ್ ಗಾಂಧಿ ಸೇರಿದಂತೆ ಇತರರು ಇದ್ದರು.

ಪ್ರಾಥಮಿಕ ಮಾಹಿತಿ ಪ್ರಕಾರ ಸಂಸತ್ತಿನೊಳಗೆ ನುಗಿದ ಯುವಕರು ಯಾವುದೇ ಸಂಘಟನೆಗೆ ಸೇರಿದವರಲ್ಲ, ಸರಕಾರದ ವಿರುದ್ಧ ಪ್ರತಿಭಟನೆ ವ್ಯಕ್ತಪಡಿಸುವುದು ಅವರ ಉದ್ದೇಶ ಇತ್ತು ಎನ್ನುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇಬ್ಬರು ಯುವಕರಲ್ಲಿ ಒಬ್ಬಾತ ಮೈಸೂರು ಮೂಲದ ಇಂಜಿನಿಯರಿಂಗ್‌ ವಿದ್ಯಾರ್ಥಿ ಮನೋರಂಜನ್‌ ಹಾಗೂ ಸಾಗರ್‌ ಶರ್ಮಾ ಎಂದು ಗುರುತಿಸಲಾಗಿದೆ.
ಲೋಕಸಭಾ ಕಲಾಪ ವೇಳೆ ವೀಕ್ಷಕರ ಗ್ಯಾಲರಿಯ ಸಂಸದರ ಆಸನಗಳ ಮುಂಭಾಗದ ಮೇಲಿನ ಮೇಜಿನ ಮೇಲೆ ಜಿಗಿದ ಇಬ್ಬರು ಅಪರಿಚಿತರು ಹಾಗೂ ಹೊರಗೆ ಘೋಷಣೆ ಕೂಗಿದ ಇಬ್ಬರು ಸೇರಿ ಒಟ್ಟು 4 ಜನರ ಬಂಧನವಾಗಿದೆ. ಸಂಜೆ ಸಂಸದರ ಸಭೆ ನಡೆಸಲಾಗುತ್ತಿದೆ ಎಂದು ಸ್ಪೀಕರ್ ಓಂ ಬಿರ್ಲಾ ತಿಳಿಸಿದ್ದಾರೆ.

ಶೂನ್ಯ ವೇಳೆಯಲ್ಲಿ ವೀಕ್ಷಕರ ಗ್ಯಾಲರಿಯಲ್ಲಿದ್ದ ಅಪರಿಚಿತರು ಸದನದೊಳಗೆ ನುಗ್ಗಿದ್ದಾರೆ. ಹಳದಿ ಬಣ್ಣದ ಹೊಗೆ ಸಿಂಪಡಿಸಿ ಸರ್ವಾಧಿಕಾರ ನಡೆಯುವುದಿಲ್ಲ ಎಂಬ ಘೋಷಣೆ ಕೂಗಿದ್ದಾರೆ. ಮಹಿಳೆ ಸೇರಿ ಇತರ ಇಬ್ಬರು ಹೊರಗೆ ಘೋಷಣೆ ಕೂಗಿದ್ದಾರೆ. ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಘಟನೆಯಿಂದ ಆತಂಕಗೊಂಡ ಸಂಸದರು ಸದನದಿಂದ ಹೊರಗೆ ಓಡಿದರು. ಮಧ್ಯಾಹ್ನ ಕಲಾಪ ಆರಂಭವಾಗುತ್ತಿದ್ದಂತೆ ವಿವಿಧ ಪಕ್ಷಗಳ ನಾಯಕರು ಆತಂಕ ವ್ಯಕ್ತಪಡಿಸಿದರು.

ಹಿಡಿದುಕೊಟ್ಟ ಮುನಿಸ್ವಾಮಿ : ಇಬ್ಬರು ದುಷ್ಕರ್ಮಿಗಳ ಪೈಕಿ ಒಬ್ಬನನ್ನು ಸೆರೆಹಿಡಿದು ಭದ್ರತಾ ಸಿಬ್ಬಂದಿಯ ಕೈಗೆ ಒಪ್ಪಿಸಿದ್ದು ಕೋಲಾರ ಸಂಸದ ಮುನಿಸ್ವಾಮಿ ಮತ್ತು ಇತರರು ಎಂದು ತಿಳಿದುಬಂದಿದೆ. ವೀಕ್ಷಕರ ಗ್ಯಾಲರಿಯಿಂದ ಜಿಗಿದ ಸಾಗರ್ ಶರ್ಮ ಮೇಜಿನಿಂದ ಮೇಜಿಗೆ ಹಾರುತ್ತಿದ್ದಂತೆ ಮುನಿಸ್ವಾಮಿ ಮತ್ತು ಇತರರು ಹಿಡಿದುಕೊಂಡರು. ಈ ಮಾಹಿತಿಯನ್ನು ಮುನಿಸ್ವಾಮಿ ಹಂಚಿಕೊಂಡಿದ್ದು ನಮ್ಮ ಜಾಗದಲ್ಲಿ ಕುಳಿತುಕೊಂಡಿದ್ದಾಗ ಒಬ್ಬ ಸುಮಾರು 10 ಮೀಟರ್ ಎತ್ತರದ ಪ್ರೇಕ್ಷಕರ ಗ್ಯಾಲರಿಯಿಂದ ಕೆಳಗೆ ಜಿಗಿದು ಮೇಜಿನಿಂದ ಹಾರಲು ಯತ್ನಿಸಿದಾಗ ಅವನನ್ನು ಹಿಡಿದು ಭದ್ರತಾ ಸಿಬ್ಬಂದಿಗೆ ಒಪ್ಪಿಸಿದವು. ನಾವು ಹಿಡಿದ ಮೇಲೆ ಅವನು ತನ್ನ ಕಾಲಿನಲ್ಲಿ ಇದ್ದ ಕಲರ್ ಬಾಂಬ್ ಸ್ಪೋಟಿಸಿದ್ದಾನೆ ಎಂದು ಮುನಿಸ್ವಾಮಿ ತಿಳಿಸಿದ್ದಾರೆ.

ನಾನು ಸಹಾ ಹಿಡಿದೆ:
ಕಲಾಪದ ವೇಳೆ ಈ ಘಟನೆ ನಡೆದಾಗ ಅಲ್ಲೇ ಇದ್ದ ಕಾಂಗ್ರೆಸ್‌ ಸಂಸದ ಗುರ್ಜೀತ್ ಸಿಂಗ್ ಔಜ್ಞಾ ಕೂಡ ಮಾತಮಾಡಿದ್ದಾರೆ. ಇಬ್ಬರು ವ್ಯಕ್ತಿಗಳನ್ನು ಹಿಡಿದ ಕಾಂಗ್ರೆಸ್ ಸಂಸದ ಗುರ್ಜೀತ್ ಸಿಂಗ್ ಔಜ್ಞಾ, ಅವರ ಕೈಯಲ್ಲಿ ಹಳದಿ ಬಣ್ಣದ ಹೊಗೆ ಹೊರಸೂಸುವ ಏನೋ ಇತ್ತು. ನಾನು ಅದನ್ನು ಕಿತ್ತು ಹೊರಗೆ ಎಸೆದೆ ಎಂದಿದ್ದಾರೆ.

ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಘಟನೆ ಬಗ್ಗೆ ಪ್ರತಿಕ್ರಿಯಿಸಿ ವೀಕ್ಷಕರ ಪಾಸ್ ನೀಡುವಂತೆ ಬಹಳ ಒತ್ತಾಯ ಮಾಡಿ ಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ