Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವೀರಪ್ಪ ಮೊಯ್ಲಿ, ನಲಪಾಡ್​ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

 

 

ಬೆಂಗಳೂರು:
ಜಾರಿ ನಿರ್ದೇಶನಾಲಯದ ವಿರುದ್ಧ 2022 ರಲ್ಲಿ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ವಿರುದ್ಧ 42ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ಜಾರಿ ನಿರ್ದೇಶನಾಲಯದ ವಿರುದ್ಧ 2022 ರ ಆಗಸ್ಟ್ ತಿಂಗಳಿನಲ್ಲಿ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆ ವೀರಪ್ಪ ಮೊಯ್ಲಿ, ಮೊಹಮ್ಮದ್ ಹ್ಯಾರಿಸ್ ನಲಪಾಡ್ ವಿರುದ್ಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರತಿಭಟನೆ ವೇಳೆ ರಸ್ತೆ ತಡೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕರ್ನಾಟಕ ಕಾಂಗ್ರೆಸ್ ನಾಯಕರಿಗೆ ಇತ್ತೀಚೆಗೆ ಸುಪ್ರೀಂ ಕೋರ್ಟ್​​ನಲ್ಲಿ ತಾತ್ಕಾಲಿಕ ರಿಲೀಫ್​​ ಸಿಕ್ಕಿತ್ತು. ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ವಿಧಿಸಿರುವ 10 ಸಾವಿರ ರೂ. ದಂಡವನ್ನು ಪ್ರಶ್ನಿಸಿ ಮತ್ತು ಎಫ್​ಐಆರ್​​ ರದ್ದತಿ ಕೋರಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಮುಂದಿನ ಆದೇಶದವರೆಗೆ ಸಿದ್ದರಾಮಯ್ಯ ವಿರುದ್ಧದದ ಕ್ರಿಮಿನಲ್ ವಿಚಾರಣೆಗೆ ತಡೆ ನೀಡಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಇದರೊಂದಿಗೆ ಸಿದ್ದರಾಮಯ್ಯ ಹಾಗೂ ಇತರ ಕಾಂಗ್ರೆಸ್ ನಾಯಕರು ತುಸು ನಿರಾಳರಾಗುವಂತಾಗಿದೆ. ಆದರೆ, ಆರು ವಾರಗಳ ಒಳಗಾಗಿ ಪ್ರತಿಕ್ರಿಯೆ ನೀಡುವಂತೆ ಸರ್ವೋಚ್ಚ ನ್ಯಾಯಾಲಯ ಸೂಚಿಸಿತ್ತು.

ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಎಫ್​ಐಆರ್ ರದ್ದು ಮಾಡಬೇಕೆಂದು ಕೋರಿ ಸುಪ್ರೀಂ ಕೋರ್ಟ್​​ನಲ್ಲಿ ಕೆಲವು ದಿನಗಳ ಹಿಂದೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿರುವುದನ್ನು ಕೂಡ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ