Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಿಪ್ಪಾಣಿಯಲ್ಲಿ 10 ಸಾವಿರ ಮಹಿಳೆಯರಿಂದ ಕುಂಕುಮಾರ್ಚನೆಯ ದಾಖಲೆ

 


ಇನ್ನು ಮುಂದೆ ಪ್ರತಿ ನವರಾತ್ರಿಯಲ್ಲೂ ರಾಜ್ಯಾದ್ಯಂತ ವಿಶೇಷ ಕಾರ್ಯಕ್ರಮ: ಸಚಿವೆ ಶಶಿಕಲಾ ಜೊಲ್ಲೆ


ನಿಪ್ಪಾಣಿಯಲ್ಲಿ ರಾಜ್ಯಮಟ್ಟದ ಕುಂಕುಮಾರ್ಚನೆ 10 ಸಾವಿರಕ್ಕೂ ಹೆಚ್ಚು ಮಹಿಳೆಯರು ಭಾಗಿ



ರಾಜ್ಯದ ಹಲವು ದೇವಸ್ಥಾನಗಳಲ್ಲೂ ಸಂಭ್ರಮದ ಕುಂಕುಮಾರ್ಚನೆ


ನಿಪ್ಪಾಣಿ :
ಇನ್ನು ಮುಂದೆ ಪ್ರತಿ ನವರಾತ್ರಿಯ ಸಂಧರ್ಭದಲ್ಲೂ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯ ದೇವಸ್ಥಾನಗಳಲ್ಲಿ ವಿಶೇಷ ಕಾರ್ಯಕ್ರಮ ಅಯೋಜಿಸಲಾಗುವುದು ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವ ಶಶಿಕಲಾ ಅ ಜೊಲ್ಲೆ ಹೇಳಿದರು.

ಇಂದು ನಿಪ್ಪಾಣಿಯಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಬೃಹತ್ ಕುಂಕುಮಾರ್ಚನೆ ಕಾರ್ಯಕ್ರಮದಲ್ಲಿ ಆರತಿ ಬೆಳಗಿ ಅವರು ಮಾತನಾಡಿದರು. ನಮ್ಮ ಸಂಸ್ಕೃತಿಯಲ್ಲಿ ನವರಾತ್ರಿಗೆ ವಿಶೇಷ ಸ್ಥಾನವಿದೆ. ಮೈಸೂರು ದಸರಾ ಸಂಭ್ರಮ ಒಂದೆಡೆಯಾದರೆ, ರಾಜ್ಯದ ವಿವಿಧ ಭಾಗಗಳಲ್ಲಿ ಇರುವಂತಹ ದೇವಸ್ಥಾನಗಳ ಮೂಲಕ ಈ ಸಂಭ್ರಮ ವನ್ನು ಇನ್ನಷ್ಟು ಹೆಚ್ಚಿಸುವುದು ನಮ್ಮ ಆಶಯವಾಗಿದೆ. ಈ ನಿಟ್ಟಿನಲ್ಲಿ ಇಂದು ರಾಜ್ಯದ ಧಾರ್ಮಿಕ ಇಲಾಖೆಯ ಹಲವಾರು ದೇವಸ್ಥಾನಗಳಲ್ಲಿ ಶಕ್ತಿ ಸ್ವರೂಪಿಣಿ ಮಾತೆಯ ವಿಶೇಷ ಪೂಜೆಗೊಸ್ಕರ ಕುಂಕುಮಾರ್ಚನೆ ಕಾರ್ಯಕ್ರಮ ಆಯೋಜಿಸಲಾಗಿದೆ. ನನ್ನ ಮತಕ್ಷೇತ್ರದಲ್ಲಿ ಸುಮಾರು 10 ಸಾವಿರ ಮಹಿಳೆಯರನ್ನ ಒಗ್ಗೂಡಿಸಿ ಬೃಹತ್ ಕುಂಕುಮಾರ್ಚನೆ ನೆರವೇರಿಸಲಾಗಿದೆ.

ಮುಂದಿನ ದಿನಗಳಲ್ಲಿ ಈ ಪದ್ಧತಿ ಮುಂದುವರಿಯಬೇಕು ಎನ್ನುವ ಆಶಯ ನಮ್ಮದಾಗಿದ್ದು, ಈ ಬಗ್ಗೆ ಸೂಕ್ತ ಆದೇಶ ಹೊರಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

10 ಸಾವಿರ ಮಹಿಳೆಯರೊಂದಿಗೆ ಸಾಮೂಹಿಕ ಕುಂಕುಮಾರ್ಚನೆಯ ದಾಖಲೆ:
ನಿಪ್ಪಾಣಿ ಕ್ಷೇತ್ರದ ಹಾಗೂ ಹಾಗೂ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ಮಹಿಳೆಯರ ಜೊತೆಗೂಡಿ ಸಚಿವರು ಸಾಮೂಹಿಕ ಕುಂಕುಮಾರ್ಚನೆ ನೆರವೇರಿಸಿದರು. ಕೊಲ್ಲಾಪುರ ದ ಮಹಾಲಕ್ಷ್ಮಿ ಅರ್ಚಕರ ಮುಂದಾಳತ್ವದಲ್ಲಿ ನಡೆದ ಈ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನೆರವೇರಿತು. ಸುಮಾರು 10 ಸಾವಿರಕ್ಕೂ ಹೆಚ್ಚು ಮಹಿಳೆಯರು ಏಕಕಾಲಕ್ಕೆ ಕುಂಕುಮಾರ್ಚನೆಯನ್ನು ನೆರವೇರಿಸುವ ಮೂಲಕ ವಿಶೇಷ ದಾಖಲೆಗೆ ಸಾಕ್ಷಿಯಾದರು.

10 ಸಾವಿರ ಮಹಿಳೆಯರಿಗೆ ಬೇಳೆ ಹೋಳೀಗೆಯ ಹಬ್ಬದೂಟ:
ಕುಂಕುಮಾರ್ಚನೆಯಲ್ಲಿ ಭಾಗವಹಿಸಿದ್ದ 10 ಸಾವಿರಕ್ಕೂ ಹೆಚ್ಚು ಮಹಿಳೆಯರು ಹಾಗೂ ಅವರ ಕುಟುಂಬದವರಿಗೆ ಬೇಳೆ ಹೋಳಿಗೆಯ ಹಬ್ಬದೂಟವನ್ನ ಆಯೋಜಿಸಲಾಗಿತ್ತು. ಮಾನ್ಯ ಚಿಕ್ಕೋಡಿ ಸಂಸದರು ಹಾಗೂ ಜೊಲ್ಲೆ ಗ್ರೂಪ್‌ ನ ಮುಖ್ಯಸ್ಥರಾದ ಅಣ್ಣಾ ಸಾಹೇಬ ಜೊಲ್ಲೆ ಅವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಈ ಊಟದಲ್ಲಿ 2 ಟನ್‌ ಬೇಳೆಯನ್ನು ಬಳಸಿ ಹೋಳಿಗೆಯನ್ನು ತಯಾರಿಸಲಾಗಿತ್ತು. ಕುಂಕುಮಾರ್ಚನೆಗೆ ಬಂದವರು ಸವಿಯನ್ನ ಸವಿದರು.

10 ಸಾವಿರ ಕುಂಕುಮಾರ್ಚನೆಯ ಪೂಜಾ ಕಿಟ್‌:
ಮಹಿಳೆಯರು ತಮ್ಮ ಮನೆಯಿಂದ ಪೂಜಾ ಸಾಮಗ್ರಿಗಳನ್ನು ತಗೆದುಕೊಂಡು ಬರುವ ತೊಂದರೆ ಅಗಬಾರದು ಎನ್ನುವ ದೃಷ್ಟಿಯಿಂದ ಜೊಲ್ಲೆ ಗ್ರೂಪ್‌ ವತಿಯಿಂದ 11 ಸಾವಿರ ಕುಂಕುಮಾರ್ಚನೆಯ ಕಿಟ್‌ಗಳನ್ನು ಸಿದ್ದಗೊಳಿಸಲಾಗಿತ್ತು.

ರಾಜ್ಯದ ಹಲವು ದೇವಸ್ಥಾನಗಳಲ್ಲಿ ಸಂಭ್ರಮ ಕುಂಕುಮಾರ್ಚನೆ:
ಮಾನ್ಯ ಮುಜರಾಯಿ ಸಚಿವರ ನಿರ್ದೇಶನದಂತೆ ರಾಜ್ಯದ ವಿವಿಧ ಧಾರ್ಮಿಕ ಇಲಾಖೆಯ ದೇವಸ್ಥಾನಗಳಲ್ಲಿ ಲಲಿತಾ ಪಂಚಮಿ ಅಂಗವಾಗಿ ಮಹಿಳೆಯರನ್ನು ಆಹ್ವಾನಿಸಿ ಸಾಮೂಹಿಕ ಕುಂಕುಮಾರ್ಚನೆ ಆಚರಿಸಲಾಯಿತು. ಇಂದು ಕಾರ್ಯಕ್ರಮ ಆಯೋಜಿಸಲು ಸಾಧ್ಯವಾಗದೆ ಇರುವ ದೇವಸ್ಥಾನಗಳಲ್ಲಿ ಆಕ್ಟೊಬರ್ 3 ರಂದು ಕಾರ್ಯಕ್ರಮ ಆಯೋಜಿಸಲು ಸೂಚಿಸಲಾಗಿದೆ.
ಸಂಸದ ಅಣ್ಣಾ ಸಾಹೇಬ್‌ ಜೊಲ್ಲೆ ಸೇರಿದಂತೆ ಪ್ರಮುಖ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ